ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

Team Udayavani, Mar 25, 2023, 6:40 AM IST

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸದಲ್ಲಿ ಉಪಾಹಾರಕ್ಕೆ ಆಗಮಿಸಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.

ವಿಧಾನಸಭೆ ಚುನಾವಣೆ ಸಿದ್ಧತೆ, ಮೋರ್ಚಾಗಳ ಕಾರ್ಯನಿರ್ವಹಣೆ ಜತೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರವೂ ಸಮಾಲೋಚನೆ ಸಂದರ್ಭದಲ್ಲಿ ಪ್ರಸ್ತಾಪವಾಯಿತು ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಸೋಮಣ್ಣ ಅವರು ದೆಹಲಿಗೆ ಭೇಟಿ ನೀಡಿ ಆಮಿತ್‌ ಶಾ ಅವರೊಂದಿಗೆ ಚರ್ಚಿಸಿ ಬಂದ ಬೆನ್ನಲ್ಲೇ ಯಡಿಯೂರಪ್ಪ ನಿವಾಸಕ್ಕೆ ಅಮಿತ್‌ ಶಾ ಉಪಾಹಾರ ಕೂಟಕ್ಕೆ ಬಂದು ರಾಜಕೀಯ ವಿದ್ಯಮಾನ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಮಾತುಕತೆ ವೇಳೆ ಉಪಸ್ಥಿತರಿದ್ದರು.

ಆನೆಬಲ
ಅಮಿತ್‌ ಶಾ ಭೇಟಿ ನಂತರ ಮಾತನಾಡಿದ ವಿಜಯೇಂದ್ರ, ಅಮಿತ್‌ ಶಾ ಭೇಟಿಯಿಂದ ನನಗೆ ಆನೆಬಲ ಬಂದಂತಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಪತಿಸ್ಥಿತಿ ನಿರ್ಮಾಣವಾಗಲು ಬಿಡುವುದಿಲ್ಲ ಎಂದು ಹೇಳಿದರು.

ಅಮಿತ್‌ ಶಾ, ಯಡಿಯೂರಪ್ಪ ಮಧ್ಯೆ ರಾಜಕೀಯ ಬಿಟ್ಟು ಬೇರೇನೂ ಮಾಡಲು ಸಾಧ್ಯವಿಲ್ಲ. ಯಡಿಯೂರಪ್ಪ ಅವರನ್ನು ಯಾರೂ ಸೈಡ್‌ ಲೈನ್‌ ಮಾಡಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು ಎಂದು ತಿಳಿಸಿದರು.

ಅಮಿತ್‌ ಶಾ ಬೆನ್ನು ತಟ್ಟಿ ಮಾತಾಡಿಸಿದ್ದರಿಂದ ನನಗೆ ಆನೆ ಬಲ ಬಂದಂತಾಗಿದೆ. ಕೆಲಸದ ಒತ್ತಡದ ನಡುವೆಯೂ ಬಿಡುವು ಮಾಡುಕೊಂಡು ಬಂದಿದ್ದರು. ರಾಜ್ಯದಲ್ಲಿ ಚುನಾವಣೆ ಎದುರಿಸಬೇಕಿರುವುದರಿಂದ ಎಲ್ಲ ನಾಯಕರೂ ಸೇರಿ ಸುದೀರ್ಘ‌ ಸಮಾಲೋಚನೆ ನಡೆಸಿದ್ದೇವೆ ಎಂದು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರದ ಯೊಜನೆ ಮನೆ ಮನೆಗೆ ತಲುಪಿಸುವ ಮೂಲಕ ರಾಜ್ಯದಲ್ಲಿ ಮತ್ತೂಮ್ಮೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿಲ್ಲ ಎಂದು ಹಲವಾರು ಬಾರಿ ಯಡಿಯೂರಪ್ಪನವರೇ ಬಹಿರಂಗವಾಗಿ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಷಯದಲ್ಲೂ ಕೂಡ ಒತ್ತಡ ಇಲ್ಲ ಎಂದಿದ್ದಾರೆ. ಹಿಂದಿನ ಉತ್ಸಾಹದಲ್ಲೇ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ನೀವು ಕಣಕ್ಕಿಳಿಯುವಿರಾ ಎಂದಾಗ, ಶಿಕಾರಿಪುರ ಕ್ಷೇತ್ರದ ಜನತೆ, ಮತದಾರರ ಅಭಿಪ್ರಾಯ ಮೇರೆಗೆ ಅಲ್ಲಿ ಸ್ಪರ್ಧೆ ಮಾಡುತ್ತೇನೆ. ಆದರೂ ಕೇಂದ್ರದ ನಿರ್ಧಾರಕ್ಕೆ ಈ ವಿಚಾರವನ್ನು ಬಿಡಲಾಗಿದೆ ಎಂದು ಹೇಳಿದರು.

ಸೋಮಣ್ಣ ಪಕ್ಷದ ಹಿರಿಯ ನಾಯಕರು. ಅಮಿತ್‌ ಶಾ ಸೂಚನೆ ಮೇರೆಗೆ ಅವರಿಗೆ ಚಾಮರಾಜನಗರ ಉಸ್ತುವಾರಿ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಜಯೇಂದ್ರ ಬೆನ್ನುತಟ್ಟಿದ ಶಾ
ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಅಮಿತ್‌ ಶಾ ಅವರನ್ನು ಹೂಗುತ್ಛ ನೀಡಿ ಸ್ವಾಗತಿಸಲು ಯಡಿಯೂರಪ್ಪ ಮುಂದಾದಾಗ, ವಿಜಯೇಂದ್ರ ಅವರಿಂದ ಹೂಗುತ್ಛ ಕೊಡಿಸುವಂತೆ ಅಮಿತ್‌ ಶಾ ಸೂಚಿಸಿ ಅವರಿಂದ ಹೂ ಗುತ್ಛ ಪಡೆದು ಬೆನ್ನು ತಟ್ಟಿದರು. ಖುದ್ದು ವಿಜಯೇಂದ್ರ ಅಮಿತ್‌ ಶಾ ಅವರಿಗೆ ಉಪಾಹಾರ ಬಡಿಸಿದ್ದು ವಿಶೇಷ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.