ದಾವಣಗೆರೆ, ಶಿವಮೊಗ್ಗದಲ್ಲಿ ನಾಳೆ ಅಮಿತ್ ಶಾ ರೋಡ್ ಶೋ
Team Udayavani, Apr 15, 2019, 3:00 AM IST
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಎರಡು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸುವ ಮೂಲಕ ಅಮಿತ್ ಶಾ ಅವರು ಮತ ಯಾಚಿಸಲಿದ್ದಾರೆ.