ಸಮಾನ ವೇತನಕ್ಕೆ ಪ್ರಾಮಾಣಿಕ ಪ್ರಯತ್ನ

Team Udayavani, Feb 4, 2019, 12:56 AM IST

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಶ್ರೇಣಿ ಹಾಗೂ ವೇತನಕ್ಕೆ ಅನುಗುಣವಾಗಿ ಪೊಲೀಸ್‌ ಇಲಾಖೆಯ ಸಿಬ್ಬಂದಿಗೂ ಸಮಾನ ಶ್ರೇಣಿ ಹಾಗೂ ಸಮಾನ ವೇತನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.

ಪೊಲೀಸ್‌ ಸಿಬ್ಬಂದಿ ವೇತನ ಪರಿಷ್ಕರಣೆ ಕುರಿತಂತೆ ‘ಔರಾದ್ಕರ್‌ ಸಮಿತಿ ವರದಿ ಜಾರಿ ಅನುಮಾನ’ ಎಂಬ ಶೀರ್ಷಿಕೆ ಅಡಿ ‘ಉದಯವಾಣಿ’ ಭಾನುವಾರ ಪ್ರಕಟಿಸಿದ ವಿಶೇಷ ವರದಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ವಿಶೇಷ ಭತ್ಯೆಗೆ ಹೆಚ್ಚು ಒತ್ತು ನೀಡುವುದಕ್ಕಿಂತ ಪ್ರಮುಖವಾಗಿ ವೇತನ ಶ್ರೇಣಿ ಸಮಾನತೆಗೆ ಹೆಚ್ಚು ಆದ್ಯತೆ ನೀಡಲು ಪ್ರಯತ್ನಿಸಲಾಗುತ್ತಿದೆ. ಇತರ ಇಲಾಖೆಯಲ್ಲಿ ಅದೇ ಶ್ರೇಣಿಯಲ್ಲಿರುವ ಸಿಬ್ಬಂದಿ ಪಡೆಯುತ್ತಿರುವ ವೇತನವನ್ನು ಪೊಲೀಸ್‌ ಇಲಾಖೆ ಸಿಬ್ಬಂದಿಗೂ ಕಲ್ಪಿಸಿ ಸಮಾನತೆ ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ರಾಘವೇಂದ್ರ ಔರಾದ್ಕರ್‌ ನೇತೃತ್ವದ ಸಮಿತಿ ಪ್ರಮುಖವಾಗಿ ಸರ್ಕಾರದ ಇತರ ಇಲಾಖೆಗಳ ಸಿಬ್ಬಂದಿಯ ಶ್ರೇಣಿ ಹಾಗೂ ವೇತನ ಆಧರಿಸಿ ಪೊಲೀಸ್‌ ಸಿಬ್ಬಂದಿಗೂ ಶ್ರೇಣಿ ಆಧಾರಿತವಾಗಿ ಸಮಾನ ವೇತನ ನೀಡಬೇಕು ಎಂದು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಶಿಫಾರಸು ಮಾಡಿತ್ತು.

ಇತ್ತೀಚೆಗೆ ಹಿರಿಯ ಐಪಿಎಸ್‌ ಅಧಿಕಾರಿಗಳ ಜತೆ ಸಭೆ ನಡೆಸಿದ್ದ ಗೃಹ ಸಚಿವ ಎಂ.ಬಿ.ಪಾಟೀಲ್‌ ಅವರು, ಹಣಕಾಸಿನ ಕೊರತೆ ಹಿನ್ನೆಲೆಯಲ್ಲಿ ಸಮಿತಿಯ ಎಲ್ಲ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುವುದಿಲ್ಲ. ಆದರೆ, ಪ್ರಸ್ತುತ ನೀಡುತ್ತಿರುವ ವಿಶೇಷ ಭತ್ಯೆಯನ್ನು ಶೇಕಡಾ ಪ್ರಮಾಣದಲ್ಲಿ (ಅಂದಾಜು 500 ರಿಂದ 700 ರೂ.) ಹೆಚ್ಚಳ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಬಹುದು ಎಂದು ಹೇಳಿರುವುದು ಮೂಲಗಳಿಂದ ತಿಳಿದು ಬಂದಿತ್ತು. ಆ ಮಾಹಿತಿ ಆಧರಿಸಿ ‘ಉದಯವಾಣಿ’ ಭಾನುವಾರ ವಿಶೇಷ ವರದಿ ಪ್ರಕಟಿಸಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ