Udayavni Special

ಆನಂದ ಸಿಂಗ್‌ ವಿಚಾರಣೆ ನಡೆಸಿ ಮುಂದಿನ ಕ್ರಮ


Team Udayavani, Jul 3, 2019, 3:07 AM IST

ananda

ಬೆಂಗಳೂರು: “ವಿಜಯನಗರ ಶಾಸಕ ಆನಂದಸಿಂಗ್‌ ರಾಜೀನಾಮೆ ಮಾತ್ರ ತಲುಪಿದ್ದು, ಸಾರ್ವಜನಿಕ ವಿಚಾರಣೆ ಮೂಲಕ ಅಂಗೀಕಾರದ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಹೇಳಿದ್ದಾರೆ. ಈ ಮೂಲಕ ತಕ್ಷಣಕ್ಕೆ ರಾಜೀನಾಮೆ ಅಂಗೀಕಾರ ಆಗುವುದು ಅನುಮಾನ.

ಇದೇ ವೇಳೆ, ರಮೇಶ್‌ ಜಾರಕಿಹೊಳಿ ರಾಜೀನಾಮೆ ಬಗ್ಗೆಯೂ ಗರಂ ಆದ ಅವರು, “ಕೆಲವರು ಫ್ಯಾಕ್ಸ್‌ ಮೂಲಕ ರಾಜೀನಾಮೆ ಕಳುಹಿಸಿದ್ದಾರೆ. ನಾನು ಪೋಸ್ಟಲ್‌ ಡಿಪಾರ್ಟ್‌ಮೆಂಟ್‌ನಲ್ಲಿ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನಂದ್‌ ಸಿಂಗ್‌ ರಾಜೀನಾಮೆ ಅಂಗೀಕರಿಸುವ ಕುರಿತು ಮಂಗಳವಾರ ಸುಮಾರು 2 ಗಂಟೆ ವಿಧಾನಸಭೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, “ಆನಂದ್‌ಸಿಂಗ್‌ ರಾಜೀನಾಮೆ ಪತ್ರ ತಲುಪಿದೆ.

ಸೋಮವಾರ ಬೆಳಗ್ಗೆ 6.30ಕ್ಕೆ ದೊಮ್ಮಲೂರಿನಲ್ಲಿರುವ ನನ್ನ ಮನೆಗೆ ಬಂದು ರಾಜೀನಾಮೆ ಸಲ್ಲಿಸಿದ್ದಾರೆ. ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೇನೆ. ಬೇರೆ ಯಾವ ಶಾಸಕರೂ ರಾಜೀನಾಮೆ ನೀಡಿಲ್ಲ’ ಎಂದು ಹೇಳಿದರು.

ಚಿಂಚೋಳಿ ಶಾಸಕರಾಗಿದ್ದ ಉಮೇಶ್‌ ಜಾಧವ್‌ ರಾಜೀನಾಮೆ ಅಂಗೀಕರಿಸಿದ ರೀತಿಯಲ್ಲಿಯೇ, ಆನಂದ್‌ ಸಿಂಗ್‌ ರಾಜೀನಾಮೆಗೆ ಕಾರಣವೇನು? ಯಾವುದಾದರೂ ಒತ್ತಡಕ್ಕೆ ಮಣಿದಿದ್ದಾರಾ ಎನ್ನುವ ಬಗ್ಗೆ ಸಾರ್ವಜನಿಕವಾಗಿ ಅವರನ್ನು ವಿಚಾರಣೆ ಮಾಡಿ, ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ.

ಸಂವಿಧಾನದ ಅಡಿಯಲ್ಲಿ ಯಾವುದೇ ಪಕ್ಷಪಾತವಿಲ್ಲದೇ ಕ್ರಮ ಕೈಗೊಳ್ಳುತ್ತೇನೆ. ಇಷ್ಟೇ ದಿನದಲ್ಲಿ ರಾಜೀನಾಮೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ನಿಯಮವೇನಿಲ್ಲ. ಕಾನೂನು ಬದ್ಧವಾಗಿ ಶೀಘ್ರ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.

ರಮೇಶ್‌ ಜಾರಕಿಹೊಳಿ ವಿರುದ್ಧ ಗರಂ: ಇದೇ ವೇಳೆ, ಅವರು ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಫ್ಯಾಕ್ಸ್‌ ಮೂಲಕ ರಾಜಿನಾಮೆ ನೀಡಲು ನಾನು ಪೋಸ್ಟಲ್‌ ಡಿಪಾರ್ಟ್‌ಮೆಂಟ್‌ನಲ್ಲಿಲ್ಲ.

ಮಾಧ್ಯಮಗಳಲ್ಲಿ ಮಾತನಾಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಲಿ. ದನಗಳ ರೀತಿಯಲ್ಲಿ ನಾನು ವರ್ತನೆ ಮಾಡಲು ಆಗುವುದಿಲ್ಲ. ಸಂವಿಧಾನದ ನೀತಿ ನಿಯಮಗಳನ್ನು ಮೊದಲು ತಿಳಿದುಕೊಳ್ಳಲಿ’ ಎಂದು ಏರು ಧ್ವನಿಯಲ್ಲಿ ಆಕ್ರೋಶ ಹೊರ ಹಾಕಿದರು.

ಆ ಶಾಸಕ ಮಾಧ್ಯಮಗಳ ಮುಂದೆ ಮಾತನಾಡುವಾಗ ಮಾತಿನ ಮೇಲೆ ಹಿಡಿತ ಇರಲಿ ಎಂದ ಅವರು, ಮೈಂಡ್‌ ಯುವರ್‌ ಲಾಂಗ್ವೇಜ್‌ ಎಂದು ರಮೇಶ್‌ ಜಾರಕಿಹೊಳಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಸ್ಪೀಕರ್‌ ಸ್ಥಾನ ಪವಿತ್ರವಾದದ್ದು. ಆ ಸ್ಥಾನದಲ್ಲಿ ಕುಳಿತಿರುವ ನಾನು ಬಹಳ ಚಿಕ್ಕ ವ್ಯಕ್ತಿ ಎಂದೂ ಹೇಳಿದರು.

ಇನ್ನು ಬೇರೆ ಶಾಸಕರು ರಾಜೀನಾಮೆ ನೀಡುವುದಕ್ಕೆ ಸಮಯ ಕೇಳಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಶಾಸಕರೂ ಸಮಯ ಕೇಳಿಲ್ಲ. ರಾಜೀನಾಮೆ ನೀಡಲು ಯಾರಾದರೂ ನನ್ನ ಭೇಟಿಗೆ ಅವಕಾಶ ಕೇಳಿದರೆ, ಅವರಿಗೆ ನನ್ನ ನಂಬರ್‌ ಕೊಡಿ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನವನ್ನು ಪಾಕಿಸ್ಥಾನದ ನಕ್ಷೆಯಿಂದ ಕೈ ಬಿಟ್ಟ ಸೌದಿ ಅರೇಬಿಯಾ

ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನವನ್ನು ಪಾಕಿಸ್ಥಾನದ ನಕ್ಷೆಯಿಂದ ಕೈ ಬಿಟ್ಟ ಸೌದಿ ಅರೇಬಿಯಾ

.0.0.

ಮುಂಬೈ vs ಆರ್ ಸಿಬಿ ಬಲಾಢ್ಯರ ಕಾದಾಟ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

4ನೇ ಬಾರಿ ಸಿಎಂ ಆಗಿ ಆಯ್ಕೆಯಾಗುತ್ತಾರೆಯೇ?ಬಿಹಾರ ಪ್ರಥಮ ಹಂತ: ಶೇ.52ರಷ್ಟು ಮತದಾನ

ನಿತೀಶ್ 4ನೇ ಬಾರಿ ಸಿಎಂ ಆಗಿ ಆಯ್ಕೆಯಾಗುತ್ತಾರೆಯೇ?ಬಿಹಾರ ಪ್ರಥಮ ಹಂತ: ಶೇ.52ರಷ್ಟು ಮತದಾನ

ಆನ್‌ಲೈನ್‌ನಲ್ಲಿ ಪ್ಯಾನ್‌ ಕಾರ್ಡ್‌ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ

ಆನ್‌ಲೈನ್‌ನಲ್ಲಿ ಪ್ಯಾನ್‌ ಕಾರ್ಡ್‌ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ

ಫ್ರಾನ್ಸ್‌ನಲ್ಲಿ ಮತ್ತೆ ಕೋವಿಡ್‌ ಅಬ್ಬರ: ಮತ್ತೂಮ್ಮೆ ಲಾಕ್‌ಡೌನ್‌ ಜಾರಿಗೆ ಸಜ್ಜು ?

ಫ್ರಾನ್ಸ್‌ನಲ್ಲಿ ಮತ್ತೆ ಕೋವಿಡ್‌ ಅಬ್ಬರ: ಮತ್ತೂಮ್ಮೆ ಲಾಕ್‌ಡೌನ್‌ ಜಾರಿಗೆ ಸಜ್ಜು ?

ಅಂತಾರಾಷ್ಟ್ರೀಯ ವಿಮಾನ ಸಂಚಾರ ರದ್ದು ಅವಧಿ ನವೆಂಬರ್ 30ರವರೆಗೆ ವಿಸ್ತರಣೆ

ಅಂತಾರಾಷ್ಟ್ರೀಯ ವಿಮಾನ ಸಂಚಾರ ರದ್ದು ಅವಧಿ ನವೆಂಬರ್ 30ರವರೆಗೆ ವಿಸ್ತರಣೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಆನ್ ಲೈನ್ ಶಿಕ್ಷಣದ ಅವಧಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ : ಸುರೇಶ್ ಕುಮಾರ್

ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ:ಗೈಡ್ ಲೈನ್ಸ್ ನಲ್ಲಿ ಏನಿದೆ?

ramalinga-‘

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇದೆಯೋ, ಇಲ್ಲವೋ? BJPಯಿಂದ ಕೀಳು ರಾಜಕೀಯ: ರಾಮಲಿಂಗಾ ರೆಡ್ಡಿ

ಬೀದರ್ ಶಾಂತಿಯುತ ಮತದಾನ : ಮಧ್ಯಾಹ್ನ 2ರವರೆಗೆ ಶೇ. 54.16 ರಷ್ಟು ಮತದಾನ ದಾಖಲು

ಬೀದರ್ ಶಾಂತಿಯುತ ಮತದಾನ : ಮಧ್ಯಾಹ್ನ 2ರವರೆಗೆ ಶೇ. 54.16 ರಷ್ಟು ಮತದಾನ ದಾಖಲು

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!


ಹೊಸ ಸೇರ್ಪಡೆ

ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನವನ್ನು ಪಾಕಿಸ್ಥಾನದ ನಕ್ಷೆಯಿಂದ ಕೈ ಬಿಟ್ಟ ಸೌದಿ ಅರೇಬಿಯಾ

ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನವನ್ನು ಪಾಕಿಸ್ಥಾನದ ನಕ್ಷೆಯಿಂದ ಕೈ ಬಿಟ್ಟ ಸೌದಿ ಅರೇಬಿಯಾ

.0.0.

ಮುಂಬೈ vs ಆರ್ ಸಿಬಿ ಬಲಾಢ್ಯರ ಕಾದಾಟ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

avalu-tdy-1

ಗೃಹಿಣಿಯೇ ಸಾಧಕಿ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

4ನೇ ಬಾರಿ ಸಿಎಂ ಆಗಿ ಆಯ್ಕೆಯಾಗುತ್ತಾರೆಯೇ?ಬಿಹಾರ ಪ್ರಥಮ ಹಂತ: ಶೇ.52ರಷ್ಟು ಮತದಾನ

ನಿತೀಶ್ 4ನೇ ಬಾರಿ ಸಿಎಂ ಆಗಿ ಆಯ್ಕೆಯಾಗುತ್ತಾರೆಯೇ?ಬಿಹಾರ ಪ್ರಥಮ ಹಂತ: ಶೇ.52ರಷ್ಟು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.