Pawan Kalyan: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Team Udayavani, Aug 8, 2024, 3:58 PM IST
ಬೆಂಗಳೂರು: ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಗುರುವಾರ(ಆ.8ರಂದು) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಆಂಧ್ರ ಪ್ರದೇಶದ ಡಿಸಿಎಂ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಆಂಧ್ರದ ಪರಿಸರ ಮತ್ತು ಅರಣ್ಯ ಖಾತೆ ಸಚಿವರೂ ಆಗಿರುವ ಪವನ್ ಕಲ್ಯಾಣ್ ಅವರು, ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದಾರೆ.
ರಾಜ್ಯದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಆನೆ ಹಾವಳಿ ತಡೆಗಟ್ಟುವ ಸಂಬಂಧ ನಡೆಯಲಿರುವ ಸಭೆಯಲ್ಲಿ ಅವರು ಭಾಗಿಯಾಗಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಆಗಿದ್ದಾರೆ.
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇಂದು ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದರು. @PawanKalyan pic.twitter.com/OEN2h0wJnr
— Siddaramaiah (@siddaramaiah) August 8, 2024
ಈ ವೇಳೆ ಸಿಎಂ ಜೊತೆ ಸಚಿವ ಜಮೀರ್ ಅಹಮದ್ ಹಾಗೂ ಇತರರು ಉಪಸ್ಥಿತರಿದ್ದರು.
ವಿಧಾನಸಭೆಗೆ ಬರುತ್ತಿದ್ದಂತೆ ಅವರೊಂದಿಗೆ ಫೋಟೋ ಕ್ಲಿಕ್ಕಿಸಲು ಸಿಬ್ಬಂದಿಗಳು , ಸರ್ಕಾರಿ ನೌಕರರು ಮುಗಿಬಿದ್ದ ದೃಶ್ಯ ಕಂಡುಬಂತು.
ಆಗಸ್ಟ್ 12 ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತದಿಂದ ತಜ್ಞರು ಆಗಮಿಸಲಿದ್ದಾರೆ. ಇದರಲ್ಲಿ ಆನೆ ಹಾವಳಿ ತಪ್ಪಿಸಲು ಇರುವ ಪರಿಹಾರ ಮಾರ್ಗದ ಬಗ್ಗೆ ಚರ್ಚೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salaar 2: ಪ್ರಭಾಸ್ – ಪ್ರಶಾಂತ್ ʼಸಲಾರ್-2ʼನಲ್ಲಿ ಸೂಪರ್ ಸ್ಟಾರ್ ಮೋಹನ್ ಲಾಲ್?
OTT release: ಕೀರ್ತಿ ಸುರೇಶ್ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್ ಲಾಕ್
Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್: ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?
Devara Part 1: ಭಾರೀ ಮೊತ್ತ ಕೊಟ್ಟು ʼದೇವರʼ ಡಿಜಿಟಲ್ ರೈಟ್ಸ್ ಖರೀದಿಸಿದ ನೆಟ್ ಫ್ಲಿಕ್ಸ್
Jayam Ravi: 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ನಟ ಜಯಂ ರವಿ
MUST WATCH
ಹೊಸ ಸೇರ್ಪಡೆ
Bigg Boss Kannada-11: ಬಿಗ್ ಬಾಸ್.. ಪ್ರೋಮೊ ರಿಲೀಸ್: ಆ್ಯಂಕರ್ ಯಾರೆಂಬುದೇ ಕುತೂಹಲ !
Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ
Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ
Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.