ಹೊಳೆನರಸೀಪುರದಲ್ಲಿ ಸಿಎಂ ಆಪ್ತ ಮಂಜೇಗೌಡರಿಗೆ ಬಂಡಾಯದ ಬಿಸಿ
Team Udayavani, Apr 1, 2018, 11:50 AM IST
ಹೊಳೆನರಸೀಪುರ: ಜೆಡಿಎಸ್ ಭದ್ರಕೋಟೆಯಲ್ಲಿ ಎಚ್.ಡಿ.ರೇವಣ್ಣಗೆ ಶಾಕ್ ನೀಡಲು ರಣತಂತ್ರ ಹಣೆದಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡಾಯದ ಬಿಸಿ ತಟ್ಟಿದೆ.
ಆರ್ಟಿಓ ಅಧಿಕಾರಿ , ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಗೂರು ಮಂಜೇಗೌಡ ಅವರಿಗೆ ಟಿಕೆಟ್ ನೀಡಬಾರದು ಎಂದು 2 ಬಾರಿಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅನುಪಮಾ ಮಹೇಶ್ ಬಹಿರಂಗವಾಗಿ ಅಸಮಧಾನ ಹೊರ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅನುಪಮಾ ‘ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡುವುದಕ್ಕೆ ನಮ್ಮ ವಿರೋಧವಿದೆ. ನಾನು 10 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿದ್ದು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕಳೆದ ಬಾರಿ 65 ಸಾವಿರ ಜನರು ನನ್ನ ಪರವಾಗಿ ಮತ ಚಲಾಯಿಸಿದ್ದಾರೆ ಅವರಲ್ಲಿ ಯಾರಿಗಾದರೂ ಟಿಕೆಟ್ ಕೊಡಲಿ. ಮಂಜೇಗೌಡರಿಗೆ ಟಿಕೆಟ್ ನೀಡಿದರೆ ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.
ಸರ್ಕಾರಿ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮಂಜೇಗೌಡರಿಗೆ ಖುದ್ದು ಸಿದ್ದರಾಮಯ್ಯ ಅವರೇ ಸೂಚಿಸಿದ್ದರು. ಇದೀಗ ಬಂಡಾಯ ಹೊಸ ತಲೆನೋವಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ