ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Team Udayavani, May 25, 2019, 6:33 AM IST
ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪೂರ್ಣ ಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಎ ಕನ್ನಡ, ಆಂಗ್ಲ ಭಾಷೆ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂಹವನ, ಸಮಾಜ ಕಾರ್ಯ (ಎಂಎಸ್ಡಬ್ಲ್ಯೂ) ಎಂ.ಎಸ್ಸಿ ಸಸ್ಯಶಾಸ್ತ್ರ, ಗಣಕ ವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಎಂ.ಕಾಂ ಮತ್ತು ಬಿ.ಇಡಿ.ಕೊರ್ಸ್ನಲ್ಲಿರುವ ಖಾಲಿ ಹುದ್ದೆಗೆ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ವಿವಿಯ ವೆಬ್ಸೈಟ್ http://bnu.ac.in ನಿಂದ ಡೌನಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 17ರೊಳಗೆ ವಿವಿಯ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ. ಮಾಹಿತಿಗಾಗಿ ದೂ: 08152-243152/53 ಅಥವಾ 080-22237766 ಸಂಪರ್ಕಿಸಬಹುದು.