
7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ
Team Udayavani, Mar 20, 2023, 8:52 PM IST

ಬೆಂಗಳೂರು: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್. ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಶರದ್ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿ.ವಿ.ದ ಡಾ.ಬಿ ಎಸ್ ಬಿರಾದಾರ್ ಅವರನ್ನು ಬೀದರ್ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಸುರೇಶ್ ಎಚ್ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿ.ದ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಟಿ ಸಿ ತಾರಾನಾಥ್ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸರಕಾರವು ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಇದನ್ನೂ ಓದಿ: ಬೋಗಸ್ ಕಾರ್ಡ್ ಗಳ ಬಿಡುಗಡೆ ಸರಣಿ ಆರಂಭ : ಸಿಎಂ ಬೊಮ್ಮಾಯಿ ಲೇವಡಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery Water; ಕಾಂಗ್ರೆಸ್ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

September 29 ರಂದು ಕರ್ನಾಟಕ ಬಂದ್ ; ನೂರಾರು ಸಂಘಟನೆಗಳ ಬೆಂಬಲ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್

Cauvery Water; ಕಾಂಗ್ರೆಸ್ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

September 29 ರಂದು ಕರ್ನಾಟಕ ಬಂದ್ ; ನೂರಾರು ಸಂಘಟನೆಗಳ ಬೆಂಬಲ