ಕಾರ್ಮಿಕ ಅದಾಲತ್ ಸಮರ್ಪಕ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

50 ತಾಲ್ಲೂಕುಗಳಲ್ಲಿ ಇಲಾಖೆ ಕಚೇರಿ ಆರಂಭ: ಸಚಿವ ಶಿವರಾಂ ಹೆಬ್ಬಾರ್

Team Udayavani, Aug 26, 2021, 10:12 PM IST

ಕಾರ್ಮಿಕ ಅದಾಲತ್ ಸಮರ್ಪಕ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯದಲ್ಲಿನ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಜಾರಿ ಮಾಡಲಾಗಿರುವ ಕಾರ್ಮಿಕ ಅದಾಲತ್‌ನ ಸಮರ್ಪಕ ಜಾರಿಗೆ ಅನುವಾಗುವಂತೆ ನೋಡೆಲ್ ಅಧಿಕಾರಿಗಳನ್ನು ನೇಮಿಸುವುದಾಗಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರಕಟಿಸಿದರು.

ವಿಕಾಸಸೌಧದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿನ ಕಾರ್ಮಿಕರು ಮತ್ತು ಕಾರ್ಮಿಕ ಕುಟುಂಬಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾರ್ಮಿಕರ ಸಮಸ್ಯೆಗಳಿಗೆ ಒಂದೇ ಬಾರಿಗೆ ಪರಿಹಾರ ಒದಗಿಸುವ ಸಲುವಾಗಿ ಕಾರ್ಮಿಕ ಅದಾಲತ್ ಯೋಜನೆ ಜಾರಿ ಮಾಡಲಾಗಿದೆ. ಹೀಗೆ ಜಾರಿ ಮಾಡಲಾಗಿರುವ ಯೋಜನೆ ಉದ್ದೇಶ ಯಶಸ್ವಿಗೊಳಿಸುವ ಸಲುವಾಗಿ ಅದಾಲತ್‌ಗಳ ಕಾರ್ಯವೈಖರಿಗೆ ಚುರುಕು ನೀಡುವ ಸಲುವಾಗಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ ಎಂದರು.

ಕಾರ್ಮಿಕ ಇಲಾಖೆ ಅಧಿಕಾರಿಗಳು 1ರಿಂದ 5ನೇ ತಾರೀಖಿನವರೆಗೆ ಪ್ರಚಾರ ಕೈಗೊಂಡು ಅಹವಾಲುಗಳನ್ನು ಸ್ವೀಕರಿಸಬೇಕು, 5ರಿಂದ 15ರವರೆಗೆ ಅರ್ಜಿಗಳ ವಿಚಾರಣೆ ನಡೆಸಿ ವಿಲೇವಾರಿ ಮಾಡಬೇಕು. 15ರಿಂದ 30ರೊಳಗೆ ವಿಲೇವಾರಿಯಾದ ಅರ್ಜಿಗೆ ಸಂಬಂಧಿಸಿದಂತಹ ತೀರ್ಮಾನಗಳನ್ನು ಜಾರಿ ಮಾಡಬೇಕು. ತೀರ್ಮಾನಗಳ ಜಾರಿ ಎಂದರೆ ಸಂಬಂಧಿತ ಕಾರ್ಮಿಕರ ಖಾತೆಗೆ ಪರಿಹಾರ ಧನ ಸೇರಿದಂತೆ ಯೋಜನೆಗಳ ಸಹಾಯಧನ ಜಮೆ ಆಗಿರಬೇಕು. ತಪ್ಪಿದಲ್ಲಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಒಟ್ಟಾರೆ ಕಾರ್ಮಿಕ ಅದಾಲತ್‌ನ ಉದ್ದೇಶ ಜಾರಿ ಮತ್ತಿ ಅದಾಲತ್ ಕಾರ್ಯವೈಖರಿ ಪರಿಶೀಲನೆಗಾಗಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ:ನೋಡ ಬನ್ನಿ ಕರಡಿ ಸಫಾರಿ : ಹುಲಿ-ಸಿಂಹ ಸಫಾರಿಯಂತೆ ಕರಡಿ ಸಫಾರಿ ಕಣ್ತುಂಬಿಕೊಳ್ಳಿ..

50 ಕಾರ್ಮಿಕ ಕಚೇರಿಗಳ ಆರಂಭ:
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತಾಲ್ಲೂಕುಗಳೂ ಸೇರಿದಂತೆ 50 ತಾಲ್ಲೂಕುಗಳಲ್ಲಿ ಕಾರ್ಮಿಕ ಇಲಾಖೆ ಕಚೇರಿಗಳಿಲ್ಲ ಎಂದು ಹೇಳಿದ ಸಚಿವ ಶಿವರಾಂ ಹೆಬ್ಬಾರ್, ಈ ಐವತ್ತೂ ತಾಲ್ಲೂಕುಗಳಲ್ಲಿ ಕಾರ್ಮಿಕ ಇಲಾಖೆ ಕಚೇರಿಗಳನ್ನು ಆರಂಭಿಸಿ ಓರ್ವ ಅಧಿಕಾರಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ ಎಂದರು.

ಕಾರ್ಮಿಕ ಇಲಾಖೆಯನ್ನು ಸರ್ವ ಸ್ಪರ್ಶಿ ಸರ್ವ ವ್ಯಾಪಿಯನ್ನಾಗಿಸಲಾಗುವುದು, ಕಾರ್ಮಿಕರ ಹಿತರಕ್ಷಣೆಗಾಗಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈ ವಿಚಾರದಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸತತ ಸಂಪರ್ಕ ಸಾಧಿಸಲಾಗಿದೆ. ಕಾರ್ಮಿಕ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯಧನ ನೀಡಲಾಗುತ್ತಿದೆ. ಕೆಎಎಸ್, ಐಎಎಸ್, ಐಐಟಿ, ಐಪಿಎಸ್ ಓದುವ ಕಾರ್ಮಿಕ ಮಕ್ಕಳಿಗೆ ಸಹಾಯಧನ ನೀಡುವ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ:
ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಇಎಸ್‌ಐ ಆಸ್ಪತ್ರೆ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಇದಕ್ಕಾಗಿ ಮುಂದಿನ ವಾರ ದಿಲ್ಲಿಗೆ ತೆರಳುವುದಾಗಿ ಅವರು ಪ್ರಕಟಿಸಿದರು.

ಇಎಸ್‌ಐ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳಿದ್ದರೂ ಸಹ ವೈದ್ಯರು ಎಂ ಪ್ಯಾನೆಲ್ ಆಗಿರುವ ಆಸ್ಪತ್ರೆಗಳಿಗೆ ರೋಗಿಗಳನ್ನು ಸಾಗಾಕುತ್ತಿದ್ದಾರೆ. ಹೀಗೆ ಎಂಪ್ಯಾನಲ್ ಆಸ್ಪತ್ರೆಗೆ ಕಳುಹಿಸಲಾಗಿರುವ ರೋಗಿಗಳ ಬಿಲ್ ಅನ್ನು ಇಲಾಖೆಯೇ ನೀಡುತ್ತಿದೆ ಎಂದ ಸಚಿವರು, ಮುಂದಿನ ದಿನಗಳಲ್ಲಿ ಈ ಅವ್ಯವಸ್ಥೆಯನ್ನು ತಪ್ಪಿಸಿ ರಾಜ್ಯದಲ್ಲಿ ಇರುವ 180 ಚಿಕಿತ್ಸಾಲಯಗಳಲ್ಲಿಯೇ ಅಗತ್ಯ ಚಿಕಿತ್ಸೆ ಕೊಡಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕ್ರಮವಹಿಸಲಾಗುತ್ತಿದೆ ಎಂದ ಅವರು, ಈ ಸಂಬಂಧ ಸಹ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಲಸಿಕಾ ಅಭಿಯಾನ:
ಕೋವಿಡ್ 19 ಜಾಗತಿಕ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ಕಾರ್ಮಿಕರಿಗೆ ಲಸಿಕೆ ಹಾಕಿಸುವ ಅಭಿಯಾನವನ್ನೂ ಸಹ ಆರಂಭಿಸಲಾಗಿದೆ ಎಂದು ತಿಳಿಸಿದ ಸಚಿವ ಹೆಬ್ಬಾರ್, ರಾಜ್ಯಾದ್ಯಂತ ಸುಪ್ರೀಂ ಕೋರ್ಟ್ ನ ಆದೇಶದಂತೆ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ ಎಂದರು.

ಆಹಾರ ಕಿಟ್‌ಗಳ ವಿತರಣೆಯನ್ನು ಪಕ್ಷಾತೀತವಾಗಿ ಮಾಡಲಾಗಿದ್ದು, ಎಲ್ಲಿಯೂ ದೂರು ಬಾರದಂತೆ ಶ್ರಮಿಕರಿಗೆ ಆಹಾರ ಕಿಟ್ ತಲುಪಿಸಲಾಗಿದೆ ಎಂದರಲ್ಲದೆ, ಶ್ರಮ ಸಾಮರ್ಥ್ಯ ಯೋಜನೆಯಡಿ ಟೂಲ್ ಕಿಟ್‌ಗಳನ್ನೂ ಸಹ ನೀಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ನಡೆದ ಎಂ.ಎಅ. ಫುಡ್ ಇಂಡಸ್ಟ್ರೀಸ್ ನ ಅಪಘಾತದಲ್ಲಿ ದುರ್ಮರಣಕ್ಕೀಡಾದ ಕಾರ್ಮಿಕರ ಕುಟುಂಬಗಳಿಗೆ ಕಲ್ಯಾಣ ಮಂಡಳಿಯಿಂದ ತಲಾ ಮೂರು ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಸಚಿವ ಶಿವರಾಂ ಹೆಬ್ಬಾರ್ ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಕಾರ್ಮಿಕ ಇಲಾಖೆ ಅಪರ ಪ್ರಧಾನ ಕಾರ್ಯದರ್ಶಿ ಕಲ್ಪನಾ, ಇಲಾಖೆ ಆಯುಕ್ತ ಮತ್ತು ಕಾರ್ಯದರ್ಶಿ ಅಕ್ರಂ ಪಾಷ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.