ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳನ್ನು ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಕ: ನಿರಾಣಿ

Team Udayavani, Nov 5, 2022, 5:15 PM IST

ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳನ್ನು ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಕ: ನಿರಾಣಿ

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳನ್ನು ಕಾಲ ಮಿತಿಯೊಳಗೆ ಅನುಷ್ಠಾನ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಡಂಬಡಿಕೆಗಳ ಅನುಷ್ಠಾನಕ್ಕಾಗಿ ಜಿಲ್ಲಾವಾರು ಸಮನ್ವಯ ಸಮಿತಿ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು.ಇದರಿಂದ ಯೋಜನೆಗಳ ಶೀಘ್ರವಾಗಿ ಅನುಷ್ಠಾನವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಇಲಾಖೆ ಹಂತದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ನಡುವೆ ಸಮನ್ವಯತೆ ಇದ್ದರೆ ನಮ್ಮ ನಿರೀಕ್ಷೆಗೆ ತಕ್ಕಂತೆ ಯೋಜನೆ ಅನುಷ್ಠಾನ ಮಾಡಬಹುದು. ಈಗಾಗಲೇ ಇಲಾಖಾ ಹಂತದಲ್ಲಿ ಚರ್ಚೆ ನಡೆದಿದೆ. ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳನ್ನು ತೊಂಬತ್ತು ದಿನಗಳೊಳಗೆ ಅನುಮೋದನೆ ನೀಡುತ್ತೇವೆ. ಇದಕ್ಕಾಗಿ ಸಿಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯಿದೆ. ಯೋಜನೆ ಸಾಮರ್ಥ್ಯಕ್ಕೆ ಅನುಗುಣವಾಗಿ ಅನುಮೋದನೆ ನೀಡಲಾಗುವುದು. ಈಗಾಗಲೇ ಅಧಿಕಾರಿಗಳು ಕೂಡ ಕಾರ್ಯಾನ್ಮುಖರಾಗಿದ್ದಾರೆ ಎಂದು ಅವರು ವಿವರಿಸಿದರು.

ಕೇವಲ ಒಡಂಬಡಿಕೆ ಮಾಡಿಕೊಂಡು ಹಾಗೆ ಬಿಡುವುದಿಲ್ಲ. ಇವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಲೇಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಬೇಗ ಅನುಮೋದನೆ ಕೊಡುತ್ತೇವೆ. ಅಂದಾಜು ಶೇ 70 ರಷ್ಟು ಅನುಷ್ಟಾನವಾಗುವ ವಿಶ್ವಾಸವನ್ನು ನಿರಾಣಿ ಅವರು ವ್ಯಕ್ತಪಡಿಸಿದರು.

ಒಡಂಬಡಿಕೆ ಮಾಡಿಕೊಂಡಿರುವ ಉದ್ಯಮಿಗಳು ಪೂರ್ಣ ಮಟ್ಟದಲ್ಲಿ ಅನುಷ್ಠಾನ ಮಾಡುವ ಸಾಧ್ಯತೆ ಇದೆ. ಪ್ರತಿ ಜಿಮ್‍ ನಲ್ಲಿ ಉದ್ಯಮಿಗಳು ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ಬಂಡವಾಳ ಹೂಡಿಕೆ ಮಾಡುತ್ತಿದ್ದರು. ಮೊದಲ ಬಾರಿಗೆ ಜಿಮ್‍ನಲ್ಲಿ ಸರ್ಕಾರದ ಜತೆ ಮಾಡಿಕೊಂಡಿರುವ ಒಡಂಬಡಿಕೆಯಲ್ಲಿ ಶೇ.90ರಷ್ಟು ಬೆಂಗಳೂರಿನಿಂದ ಆಚೆ ಹೂಡಿಕೆಯಾಗಲಿದೆ ಎಂದರು.

ಎರಡು ಮತ್ತು ಮುರನೇ ಹಂತದ ನಗರಗಳನ್ನು ಕೇಂದ್ರೀಕರಿಸಿ ಹೂಡಿಕೆ ಮಾಡುವಂತೆ ನಾವು ಮನವರಿಕೆ ಮಾಡಿದೆವು. ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ 2 ಮತ್ತು 3ನೇ ಹಂತದ ನಗರಗಳಲ್ಲೂ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ಪ್ರಶಂಸಿಸಿದರು.

ಯೋಜನೆಗಳ ಅನುಷ್ಠಾನಕ್ಕಾಗಿ ನಾವು 50 ಸಾವಿರ ಎಕರೆ ಲ್ಯಾಂಡ್‍ಬ್ಯಾಂಕ್ ಇಟ್ಟಿದ್ದೇವೆ. 50 ಲಕ್ಷ,ಒಂದು ಕೋಟಿ, 10 ಕೋಟಿ, 50 ಕೋಟಿ, 100 ಕೋಟಿ, 500 ಕೋಟಿ ಹೀಗೆ ಯೋಜನೆ ಸಾಮಥ್ರ್ಯಕ್ಕೆ ತಕ್ಕಂತೆ ಅನುಮೋದನೆ ನೀಡಲಾಗುವುದು ಎಂದರು.

500 ಕೋಟಿಗಿಂತ ಹೆಚ್ಚು ಮೊತ್ತದ ಯೋಜನೆಗಳಿಗೆ ಸಿಎಂ ನೇತೃತ್ವದ ಉನ್ನತಾಧಿಕಾರಿ ಮಟ್ಟದ ಸಮಿತಿ ಅನುಮೋದನೆ ಕೊಡಲಿದೆ. ಉಳಿದ ಮೊತ್ತದ ಯೋಜನೆಗಳಿಗೆ ಇಲಾಖಾ ಹಂತದಲ್ಲಿ ನೀಡಲಾಗುವುದು. ಉದ್ಯಮಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎನ್‍ಒಸಿಗಳನ್ನು ನೀಡಲಾಗುತ್ತದೆ. ಜತೆಗೆ ವಾಣಿಜ್ಯ ಬ್ಯಾಂಕ್‍ಗಳಿಂದಲೂ ಸಾಲ ದೊರಕುವಂತೆ ಅನುಕೂಲ ಮಾಡಿಕೊಡುವುದಾಗಿ ಹೇಳಿದರು.

ಈ ಬಾರಿಯ ಜಿಮ್ ನಿರೀಕ್ಷೆಗೂ ಮೀರಿದ ಯಶಸ್ವಿಯಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾಗಿದೆ. ಇಡೀ ದೇಶದಲ್ಲೇ ಕರ್ನಾಟಕ ಕೈಗಾರಿಕಾ ಸ್ನೇಹಿ ರಾಜ್ಯ ಎಂಬುದಕ್ಕೆ ಇದು ಸಾಕ್ಷಿ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮೂರು ದಿನಗಳ ಕಾಲ ನಡೆದ ಜಿಮ್‍ನಲ್ಲಿ ಒಟ್ಟು 9,81,784 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಿದೆ. ಇದರಲ್ಲಿ 2,83,415 ಲಕ್ಷ ಕೋಟಿಯ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. 5,41,369 ಲಕ್ಷ ಕೋಟಿ ಮೊತ್ತದ 57 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಇದರಲ್ಲಿ ಅದಾನಿ ಸಮೂಹ ಸಂಸ್ಥೆಯವರು ಇಂಧನ, ನಗರ ಪ್ರದೇಶಗಳಲ್ಲಿ ಗ್ಯಾಸ್‍ಪೈಪ್ ಅಳವಡಿಕೆ, ಸಾರಿಗೆ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಒಂದು ಲಕ್ಷ ಕೋಟಿ ಹೂಡಿಕೆ ಮಾಡಿದರೆ, ಜೆಎಸ್‍ಡಬ್ಲ್ಯೂ ಸಮೂಹ ಸಂಸ್ಥೆಯವರು ಹಸಿರು ಇಂಧನ, ಬಂದರು ಸೇರಿದಂತೆ ಮತ್ತಿತರ ವಲಯಗಳಲ್ಲಿ 57 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ ಎಂದು ಅವರು ವಿವರಿಸಿದರು.

ಈ ಬಾರಿ ಒಟ್ಟು 9,81,784 ಕೋಟಿ ಬಂಡವಾಳ ಹೂಡಿಕೆಯಾಗಿದೆ. 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದರು. ಉತ್ಪದನಾ ವಲಯ, ಹಸಿರು ಇಂಧನ ಮತ್ತಿತರ ವಲಯದಲ್ಲಿ 1,57,014 ಲಕ್ಷ ಕೋಟಿಯ 5 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ 1,29,020 ಕೋಟಿ ನಾಲ್ಕು ಯೋಜನೆಗಳಿಗೆ ಒಪ್ಪಂದ ಮಾಡಿಕೊಂಡಿದ್ದು, 2,86,034 ಕೋಟಿಯ  ಒಂಭತ್ತು ಯೋಜನೆಗಳು ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದರು.

ನವೀಕರಿಸಬಹುದಾದ ಇಂಧನ ವಲಯದಲ್ಲಿ 72 ಯೋಜನೆಯ ಒಟ್ಟು 29,397 ಕೋಟಿ ಅನುಮೋದನೆ ಕೊಡಲಾಗಿದೆ. ಇದೇ ವಲಯದಲ್ಲಿ 24 ಯೋಜನೆಗಳಿಗೆ  2,99,052 ಕೋಟಿ  ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಒಟ್ಟು 96  ಯೋಜನೆಗಳಿಂದ 328 449 ಕೋಟಿ   ಹೂಡಿಕೆಯಾಗಲಿದೆ ಎಂದರು.

ಉತ್ಪಾದನಾ ವಲಯದ 44 ಯೋಜನೆಗಳಲ್ಲಿ 27,384 ಕೋಟಿ ಅನುಮೋದನೆ ನೀಡಲಾಗಿದೆ. ಇದೇ ವಲಯದಲ್ಲಿ 9 ಯೋಜನೆಗಳ 46,950 ಕೋಟಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅಂದಾಜು 53 ಯೋಜನೆಗಳಿಂದ 74,724 ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ.  ಲಾಜಿಸ್ಟಿಕ್ ಪಾರ್ಕ್ ವಲಯದಲ್ಲಿ 57 ಯೋಜನೆಗಳ 18,834 ಕೋಟಿ ಹೂಡಿಕೆಗೆ ಅನುಮೋದನೆ ಕೊಡಲಾಗಿದೆ.12 ಯೋಜನೆಗಳ 53350 ಕೋಟಿ ಹೂಡಿಕೆಗೆ ಒಡಂಬಡಿಕೆ ಮಾಡಲಾಗಿದ್ದು, 69 ಯೋಜನೆಗಳಿಂದ 74,184 ಕೋಟಿ ಹೂಡಿಕೆಯಾಗುವ ಸಂಭವವಿದೆ. ಉತ್ಪದನಾ ವಲಯದ ಕೋರ್ ಸೆಕ್ಟರ್‍ಗೆ 20 ಯೋಜನೆಗಳ 25817 ಕೋಟಿಗೆ ಅನುಮೋದನೆ ನೀಡಿದ್ದು, 6 ಯೋಜನೆಗಳಿಗೆ 10,458 ಕೋಟಿ ಹೂಡಿಕೆಗೆ ಒಪ್ಪಂದ ಮಾಡಲಾಗಿದ್ದು, 26 ಯೋಜನೆಗಳಿಗೆ 36,275 ಕೋಟಿ ಹೂಡಿಕೆ ಮಾಡಲಾಗುತ್ತಿದೆ. ಉತ್ಪಾದನಾ ವಲಯದ ಸೆಕ್ಟರ್ ಎ, ಎಎಂಸಿಜಿ ಜವಳಿ ಮತ್ತಿತರ ಕ್ಷೇತ್ರಗಳ 410 ಯೋಜನೆಗಳ ಒಟ್ಟು 24,969 ಕೋಟಿ ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.  ಎರಡು ಯೋಜನೆಗಳಿಂದ 2589 ಹೂಡಿಕೆಯಾಗಲಿದ್ದು, ಒಟ್ಟು  412 ಯೋಜನೆಗಳಿಂದ 27558 ಕೋಟಿ ಹರಿದು ಬರಲಿದೆ. ಒಟ್ಟು 608 ಯೋಜನೆಗಳಿಂದ 283415 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.  57 ಯೋಜನೆಗಳಿಂದ 541369 ಕೋಟಿ  ಒಡಂಬಡಿಕೆ ಮಾಡಲಾಗಿದ್ದು, ಒಟ್ಟು 665 ಯೋಜನೆಗಳಿಂದ 824784 ಹೂಡಿಕೆಯಾಗಿದೆ ಎಂದು ನಿರಾಣಿ ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.