ರಾಜ್ಯದಲ್ಲಿ ಇಂದು 23558 ಕೋವಿಡ್ ಕೇಸ್ ಪತ್ತೆ : 116 ಸಾವು!
Team Udayavani, Apr 21, 2021, 6:51 PM IST
ಬೆಂಗಳೂರು : ಕೋವಿಡ್ ಹೆಮ್ಮಾರಿ ರಾಜ್ಯದಲ್ಲಿ ಹೊಸ ದಾಖಲೆ ಬರೆಯುತ್ತಿದೆ. ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 23558 ಜನ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಇಂದು ಸೋಂಕಿಗೆ 116 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13762 ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 6412 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 1032233 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಒಟ್ಟು 176188 ಸಕ್ರೀಯ ಪ್ರಕರಣಗಳು ರಾಜ್ಯದಲ್ಲಿ ಇವೆ ಎಂದು ಬುಧವಾರ (ಏಪ್ರಿಲ್ 21) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಚಿತ ಪಡಿಸಿದೆ.
ಕೋವಿಡ್ ಹೆಮ್ಮಾರಿ ಬೆಂಗಳೂರನ್ನು ಇನ್ನಿಲ್ಲದಂತೆ ಕಾಡುತ್ತಿದ್ದೆ. ರಾಜ್ಯ ರಾಜಧಾನಿಯಲ್ಲಿ ಇಂದು 13640 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ನಗರದಲ್ಲಿಂದು 70 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.