ಆರಗ ಜ್ಞಾನೇಂದ್ರ ಗೆ ಒಲಿದ ಮಂತ್ರಿ ಪಟ್ಟ

ಪಕ್ಷ ಅಧಿಕಾರದಲ್ಲಿದ್ದಾಗಲೆಲ್ಲಾ ಅವಕಾಶ ವಂಚಿತರೆಂಬ ಹಣೆಪಟ್ಟಿ ದೂರ!

Team Udayavani, Aug 4, 2021, 11:01 AM IST

Araga Jnanendra is now minister Of Karnataka

ತೀರ್ಥಹಳ್ಳಿ : ಶಾಸಕ ಆರಗ ಜ್ಞಾನೇಂದ್ರರಿಗೆ ನಿರೀಕ್ಷೆ ಯಂತೆ ಮಂತ್ರಿ ಸ್ಥಾನ ಒಲಿದಿದೆ.ಪ್ರತಿ ಬಾರಿಯೂ ಅವಕಾಶದಿಂದ ವಂಚಿತರಾಗುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರು ಇಂದು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಮಧ್ಯಾಹ್ನ 2.15 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸುದೀರ್ಘ 45 ವರ್ಷಗಳ ಕಾಲ ತಾಲೂಕಿನಾದ್ಯಂತ ಬಿಜೆಪಿ ಪಕ್ಷವನ್ನು ಸಂಘಟಿಸುತ್ತಾ ತಮ್ಮನ್ನು ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ಶಾಸಕ ಆರಗ ಜ್ಞಾನೇಂದ್ರರು ಜಾತ್ಯಾತೀತ ನೆಲೆಗಟ್ಟಿನ ತೀರ್ಥಹಳ್ಳಿಯಲ್ಲಿ ಬಿಜೆಪಿ ನೆಲೆಯೂರಲು ಭದ್ರ ಬುನಾದಿ ಕಲ್ಪಿಸಿಕೊಟ್ಟಿದ್ದಾರೆ.

ಸತತ 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 4 ಬಾರಿ ಶಾಸಕರಾಗಿರುವ ಆರಗ ಜ್ಞಾನೇಂದ್ರರವರು ಓರ್ವ ಹಿರಿಯ ಮುತ್ಸದ್ಧಿ ರಾಜಕಾರಣಿ.ಪಕ್ಷ ಅಧಿಕಾರದಲ್ಲಿರಲಿ ಬಿಡಲಿ ತಾಲೂಕಿನಲ್ಲಿ ತಮ್ಮದೇ ಕಾರ್ಯಶೈಲಿ ಹಾಗೂ ವಿಭಿನ್ನ ವ್ಯಕ್ತಿತ್ವದ ಮೂಲಕ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವುದರಲ್ಲಿ ಸಿದ್ದ ಹಸ್ತರು.

ಇದನ್ನೂ ಓದಿ : ಬೊಮ್ಮಾಯಿ ಸಂಪುಟದಲ್ಲಿ ಸುನಿಲ್, ಅಂಗಾರ ಗೆ ಸಚಿವ ಸ್ಥಾನ ಬಹತೇಕ ಖಚಿತ .!?

ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಾ,ಪಕ್ಷ ಬಲವರ್ಧನೆಗೆ ಕಾರಣರಾಗಿರುವ ಸನ್ಮಾನ್ಯ ಶಾಸಕ ಆರಗ ಜ್ಞಾನೇಂದ್ರರು ಅಧಿಕಾರಕ್ಕೋಸ್ಕರ ಎಂದೂ ಲಾಬಿ ಮಾಡದೇ ಹೋದರೂ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಜ್ಞಾನೇಂದ್ರರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ದೊರಕುತ್ತದೆಂಬ ಅಭಿಲಾಷೆಯಾಗಿತ್ತು.

ಆದರೆ ಕಳೆದ ಬಾರಿಯೂ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ಲಭಿಸದೇ ಕಾರ್ಯಕರ್ತರಲ್ಲಿ ನಿರಾಸೆ ಮನೆ ಮಾಡಿತ್ತು.ಇದೀಗ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಸನ್ಮಾನ್ಯ ಶಾಸಕರಾದ ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ನೀಡುವ ಮೂಲಕ ತಾಲೂಕಿನ ಸಮಸ್ತ ಬಿಜೆಪಿ ಕಾರ್ಯಕರ್ತರಿಗೆ  ಬಲ ಬಂದಂತಾಗಿದೆ.

ಜ್ಞಾನೇಂದ್ರ ನಡೆದು ಬಂದ ಹಾದಿ….

ತಮ್ಮ ರಾಜಕೀಯ ಜೀವನವನ್ನು  ಪ್ರಥಮವಾಗಿ ತಾಲೂಕು ಬೋರ್ಡ್ ಚುನಾವಣೆ ಮೂಲಕ ಆರಂಭಿಸಿದ ಜ್ಞಾನೇಂದ್ರ 1983 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತರು.

1985,1989, ರಲ್ಲಿ ಮತ್ತೆ ಸ್ಪರ್ಧೆ ಮಾಡಿದರೂ ಗೆಲುವು ದೊರಕಲಿಲ್ಲವಾದರೂ ಎಂದಿಗೂ ಅಧಿಕಾರಕ್ಕಾಗಿ ಪಕ್ಷ ತೊರೆದವರಲ್ಲ. ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರ ಜವಾಬ್ದಾರಿ ತಮ್ಮ ಹೆಗಲಿಗೆ ಬಿದ್ದಾಗಲೂ ಸಮರ್ಥವಾಗಿ ಎದುರಿಸಿದ ಆರಗ ಜ್ಞಾನೇಂದ್ರ ಅವರು ಪರಿಷತ್‌ ಚುನಾವಣೆಗೆ ಸ್ಪರ್ದಿಸಿ ಗೆಲವು ಸಾಧಿಸಿದರು.

ಆನಂತರ ಸತತ ಮೂರು ಭಾರಿ ಗೆಲುವು ಸಾಧಿಸಿದ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಒಮ್ಮೆ ಗೆದ್ದವರು ಮತ್ತೆ ಗೆಲ್ಲಲಾಲರು ಎನ್ನುವ ದಾಖಲೆ ಹ್ಯಾಟ್ರಿಕ್ ಹೀರೋ ಎನ್ನಿಸಿಕೊಂಡವರು

ಆದರೂ 2008, 2013 ರಲ್ಲಿ ಮತ್ತೆ ಗೆಲುವು ಜ್ಞಾನೇಂದ್ರರಿಂದ ದೂರವೇ ಉಳಿಯಿತು. ಆದರೆ 2018 ರಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲೇ ದಾಖಲೆಯೆನ್ನುವಂತೆ 22,000 ಅಂತರ ದ ಗೆಲುವು ಸಾಧಿಸಿ ತಮ್ಮ ಕೀರ್ತಿ ಪತಾಕೆಯನ್ನು  ಹಾರಿಸಿದವರು.ಇದೀಗ ಸಚೀವರಾಗಿದ್ದಾರೆ.

ಇದನ್ನೂ ಓದಿ : 11 ಗಂಟೆಗೆ ನೂತನ ಸಚಿವರ ಪಟ್ಟಿ ರಿಲೀಸ್ : ಮಧ್ಯಾಹ್ನ ಪ್ರಮಾಣ ವಚನ : ಬೊಮ್ಮಾಯಿ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.