Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ
Team Udayavani, May 9, 2024, 9:03 PM IST
ಹಾಸನ: ದೇಶ ಆಳಿದ ಕುಟುಂಬ ಸದಸ್ಯನಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ದುಷ್ಕೃತ್ಯ ನಡೆದಿರುವುದು ನಮಗೂ ಬೇಸರ ತರಿಸಿದೆ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಹಾಗೂ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಹಂಚಿಕೆ ಆರೋಪ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಹಾಗೂ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕೆ, ಆರೋಪ ಹೊರಿಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಂಸದರಿಂದ ಲೈಂಗಿಕ ಹಗರಣ ಜಿಲ್ಲೆಯಲ್ಲಿ ನಡೆದದ್ದು ಬೇಸರ ತರಿಸಿದೆ. ಇದು ಹಾಸನ ಜಿಲ್ಲೆಗೆ ಕಳಂಕ ಆಗಿರುವುದರ ಬಗ್ಗೆ ಪ್ರತಿಯೊಬ್ಬರೂ ಪಕ್ಷಬೇಧ ಮರೆತು ಖಂಡಿಸಬೇಕು. ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಮಾಡುತ್ತಿದೆ, ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಆಪಾದನೆ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ