ಅತಿಥಿ ಉಪನ್ಯಾಸಕರ ನೇಮಕಾತಿ ಎಂದು ?

ಆನ್‌ಲೈನ್‌ ಪಾಠ ಆರಂಭ; ಬೋಧಕರ ಕೊರತೆ

Team Udayavani, Sep 8, 2020, 6:35 AM IST

ಅತಿಥಿ ಉಪನ್ಯಾಸಕರ ನೇಮಕಾತಿ ಎಂದು ?

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿ ಆರಂಭವಾಗಿದ್ದು, ಅತಿಥಿ ಉಪನ್ಯಾಸಕರ ನೇಮಕಾತಿ ಆಗದಿರುವುದರಿಂದ ಸರಕಾರಿ ಪದವಿ ಕಾಲೇಜುಗಳಲ್ಲಿ ಬೋಧಕರ ಕೊರತೆ ಎದುರಾಗಿದೆ.  ಪ್ರತೀ ಬಾರಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಂಡು, ಶೈಕ್ಷಣಿಕ ವರ್ಷ ಮುಗಿಯುತ್ತಿದ್ದಂತೆ ಅವರ ಅವಧಿಯೂ ಪೂರ್ಣಗೊಳ್ಳುತ್ತದೆ. ಮತ್ತೆ ಹೊಸ ಶೈಕ್ಷಣಿಕ ವರ್ಷ ಆರಂಭ ವಾದಾಗ ಹೊಸದಾಗಿ ನೇಮಕಾತಿ ನಡೆಯುತ್ತದೆ. 2020-21ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ, ಆನ್‌ಲೈನ್‌ ತರಗತಿ ನಡೆಯುತ್ತಿದೆ. ಆದರೆ ಅತಿಥಿ ಉಪನ್ಯಾಸಕರ ನೇಮಕಾತಿ ಇನ್ನೂ ನಡೆದಿಲ್ಲ. ಆನ್‌ಲೈನ್‌ ತರಗತಿಗೆ ಬೋಧಕರ ಕೊರತೆ ಎದುರಾಗಿದ್ದು, ತರಗತಿಗಳೇ ನಡೆಯುತ್ತಿಲ್ಲ.

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 430 ಸರಕಾರಿ ಪ್ರ. ದರ್ಜೆ ಕಾಲೇಜುಗಳಿವೆ. ಎಲ್ಲ ಕಾಲೇಜುಗಳಲ್ಲೂ ಬೋಧಕ ಸಿಬಂದಿ ಕೊರತೆಯಿದೆ. ಮಂಜೂರಾಗಿರುವ 7 ಸಾವಿರಕ್ಕೂ ಅಧಿಕ ಹುದ್ದೆಗಳಲ್ಲಿ 1,200ಕ್ಕೂ ಅಧಿಕ ಹುದ್ದೆ ಖಾಲಿಯಿದೆ. ಈ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಬೋಧಕರ ಸಮಸ್ಯೆ ಹೆಚ್ಚಿದೆ ಎಂದು ಪ್ರಾಂಶುಪಾಲರೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಥಮ ಪದವಿಗೆ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ. ತೃತೀಯ, ಐದನೇ ಸೆಮಿಸ್ಟರ್‌ ಪದವಿ ವಿದ್ಯಾರ್ಥಿಗಳಿಗೆ ಸೆ. 1 ರಿಂದಲೇ ಆನ್‌ಲೈನ್‌ ತರಗತಿ ಆರಂಭ ವಾಗಿವೆ. 2020- 21 ರಲ್ಲಿ ಸರಕಾರಿ ಪದವಿ ಕಾಲೇಜು ಪ್ರವೇಶ ಹೆಚ್ಚಿದೆ. ಆದರೆ ಬೋಧಕರ ಕೊರತೆಯಿಂದಾಗಿ ಆನ್‌ಲೈನ್‌ ತರಗತಿಗಳು ಸಮರ್ಪಕ ವಾಗಿ ನಡೆಯುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್‌ನಲ್ಲಿ ನೇರ ತರಗತಿಗಳನ್ನು ಆರಂಭಿಸುವ ಬಗ್ಗೆ ಇಲಾಖೆ ಯಲ್ಲಿ ಚಿಂತನೆ ನಡೆಯುತ್ತಿದೆ. ಅತಿಥಿ ಉಪನ್ಯಾಸಕರ ನೇಮಕಾತಿಯಾಗದೆ ತರಗತಿ ಪೂರ್ಣ ಪ್ರಮಾಣ ದಲ್ಲಿ ನಡೆಸುವುದು ಕಷ್ಟಸಾಧ್ಯ. ನೇಮಕಾತಿ ಪೂರ್ಣ ಗೊಳ್ಳಲು ಕನಿಷ್ಠ 1 ತಿಂಗಳು ಬೇಕಾಗುತ್ತದೆ. ಹೀಗಾಗಿ ಸರಕಾರ ಆದಷ್ಟು ಬೇಗ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸುತ್ತಿದ್ದಾರೆ.

ವಿಳಂಬ ಏಕೆ?
ಖಾಯಂ ಸಹ ಮತ್ತು ಸಹಾಯಕ ಪ್ರಾಧ್ಯಾಪಕರ ಕಾರ್ಯಭಾರ ಹೆಚ್ಚಿಸುವ ಯೋಜನೆಯನ್ನು ಇಲಾಖೆ ಹಾಕಿಕೊಂಡಿದೆ. ಹೀಗಾಗಿ ಅತಿಥಿ ಉಪನ್ಯಾಸಕರ ಸಂಖ್ಯೆ ಕಡಿಮೆಗೊಳಿಸಲು ತೀರ್ಮಾನಿಸಲಾಗಿದೆ. ಪ್ರಥಮ ವರ್ಷದ ದಾಖಲಾತಿ ಪೂರ್ಣಗೊಂಡ ಬಳಿಕ ಮಾಹಿತಿ ಪಡೆದು, ಆರ್ಥಿಕ ಇಲಾಖೆಯ ಅನುಮೋದನೆಗೆ ಕಳುಹಿಸಿಕೊಡಬೇಕು. ಆರ್ಥಿಕ ಇಲಾಖೆಯಿಂದ ಅನುಮೋದನೆ ಸಿಕ್ಕ ಅನಂತರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕಾಗುತ್ತದೆ. ಹೀಗಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬವಾಗುತ್ತಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಾಲೇಜುಗಳಿಂದ ದಾಖಲಾತಿ ಮತ್ತು ಉಪನ್ಯಾಸಕರ ಕಾರ್ಯಭಾರದ ಮಾಹಿತಿ ಪಡೆಯುತ್ತಿದ್ದೇವೆ. ಅನಂತರ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು, ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದ್ದೇವೆ. ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ.
-ಪಿ. ಪ್ರದೀಪ್‌, ಆಯುಕ್ತ, ಕಾಲೇಜು ಶಿಕ್ಷಣ ಇಲಾಖೆ

 ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

1sudhakar

ಓಮಿಕ್ರಾನ್ ಸೋಂಕಿನ ಕುರಿತು ಆತಂಕ ಬೇಡ: ಸಚಿವ ಡಾ.ಕೆ.ಸುಧಾಕರ್

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಒಮಿಕ್ರಾನ್‌ ಆತಂಕ: ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ

ಒಮಿಕ್ರಾನ್‌ ಆತಂಕ: ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

13work

ಕಾಮಗಾರಿ ಪರಿಶೀಲಿಸಿದ ಮಡೋಳಪ್ಪ

ಕಡಲೆಕಾಯಿ ಪರಿಷೆ

ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆ

12ishwarappa

ನೆಲೆ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್‌

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.