ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ
Team Udayavani, Jul 13, 2019, 3:00 AM IST
ಬೆಂಗಳೂರು: ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ, ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್, ಸಾಹಿತಿ ಗಿರೀಶ್ ಕಾರ್ನಾಡ್ ಸೇರಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ವಿಧಾನ ಮಂಡಲದ ಎರಡೂ ಸದನಗಳಲ್ಲಿ ಸಂತಾಪ ಸೂಚಿಸಲಾಯಿತು.
ವಿಧಾನಸಭೆಯಲ್ಲಿ ಸಭಾಧ್ಯಕ್ಷ ರಮೇಶ್ ಕುಮಾರ್ ಸಂತಾಪ ಸೂಚನೆ ಮಂಡಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು.
ಮಂಕಾಗಿ ಕುಳಿತಿದ್ದ ಕುಸುಮಾವತಿ: ಪತಿಯ ನಿಧನದ ನಂತರ ಚುನಾವಣೆಯಲ್ಲಿ ಗೆದ್ದು, ವಿಧಾನಸಭೆ ಕಲಾಪಕ್ಕೆ ಮೊದಲ ಬಾರಿಗೆ ಆಗಮಿಸಿ ಹಿಂದಿನ ಸಾಲಿನಲ್ಲಿ ಕುಳಿತಿದ್ದ ಕುಸುಮಾವತಿ ಶಿವಳ್ಳಿ ತಮ್ಮ ಪತಿಯ ಬಗ್ಗೆ ಸಂತಾಪ ಸೂಚನೆಯ ಮೇಲೆ ನಾಯಕರು ಮಾತನಾಡುತ್ತಿರುವುದನ್ನು ಭಾವುಕರಾಗಿ ತದೇಕ ಚಿತ್ತದಿಂದ ಕೇಳುತ್ತಿದ್ದರು. ನಾಯಕರು ಶಿವಳ್ಳಿ ವ್ಯಕ್ತಿತ್ವದ ಬಗ್ಗೆ ಸದನದಲ್ಲಿ ಗುಣಗಾನ ಮಾಡುತ್ತಿದ್ದಾಗ ಕುಸುಮಾವತಿ ತಮ್ಮ ಪತಿಯನ್ನು ನೆನೆದು ಕಣ್ಣಂಚಲ್ಲಿ ನೀರು ತುಂಬಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್