ಬಿಜೆಪಿ ಪರ ಪ್ರಚಾರಕ್ಕೆ ನಾಯಕರ ದಂಡು​​​​​​​

Team Udayavani, Apr 12, 2018, 6:15 AM IST

Amit-Shah,Modi,-Adityanath.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿದಂತೆ ಕೇಂದ್ರ ನಾಯಕರ ದಂಡೇ ಆಗಮಿಸಲಿದೆ.

ವಿಧಾನಸಭೆ ಚುನಾವಣೆ ಬಿಜೆಪಿ ಪಾಲಿಗೆ ಮಹತ್ವದ್ದಾಗಿದ್ದು “ಟಾರ್ಗೆಟ್‌ ಕರ್ನಾಟಕ  ಕಾರ್ಯತಂತ್ರದಡಿ ಕೇಂದ್ರದ ಸಚಿವರು ಹಾಗೂ ಬಿಜೆಪಿಯ ಪ್ರಮುಖ ನಾಯಕರಿಗೆ 15 ದಿನ ಕರ್ನಾಟಕದದಲ್ಲೇ ವಾಸ್ತವ್ಯ ಹೂಡಲು ಸೂಚನೆ ನೀಡಲಾಗಿದೆ. ಅದರಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆ ನಾಯಕರ ದಂಡು ಆಗಮಿಸಲಿದ್ದು, ಪ್ರತಿನಿತ್ಯ ರಾಜ್ಯದ ವಿವಿಧೆಡೆ ಬಹಿರಂಗ ಸಭೆ,ರೋಡ್‌ ಶೋ, ಮತದಾರರ ಜತೆ ಸಂವಾದ ನಡೆಸಲಿದೆ.

ರಾಜ್ಯ ಬಿಜೆಪಿ ಘಟಕವು ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ನರೇಂದ್ರ ಮೋದಿ, ಅಮಿತ್‌ ಶಾ, ಯೋಗಿ ಆದಿತ್ಯನಾಥ್‌ ಹಾಗೂ ಅರುಣ್‌ ಜೇಟ್ಲಿ, ಸುಷ್ಮಾ ಸ್ವರಾಜ್‌  ಸ್ಮತಿ ಇರಾನಿ, ನಿತಿನ್‌ ಗಡ್ಕರಿ ಅವರ ಪ್ರಚಾರ ಸಭೆ ಪಟ್ಟಿ ಸಿದ್ಧಪಡಿಸಿದೆ. ಇದರ ಜತೆಗೆ ತೆಲುಗು, ತಮಿಳು,ಮಲಯಾಳಂ ಭಾಷಿಕರನ್ನು ಸೆಳೆಯಲು ಆಂಧ್ರಪ್ರದೇಶ, ತಮಿಳುನಾಡು, ಕೇರಳ ರಾಜ್ಯಗಳ ಪ್ರಮುಖ ಬಿಜೆಪಿ ನಾಯಕರನ್ನುಆಯ್ದ ಕೆಲವು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಕಳುಹಿಸಲು ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿಯವರು 20 ಬಹಿರಂಗ ಸಭೆ,ಮೂರು ಕಡೆ ರೋಡ್‌ ಶೋದಲ್ಲಿ ಭಾಗವಹಿಸಲಿದ್ದಾರೆ. ಅಮಿತ್‌ ಶಾ 15ಕ್ಕೂ ಹೆಚ್ಚು ಬಹಿರಂಗ ಸಭೆ, ಯೋಗಿ ಆದಿತ್ಯನಾಥ್‌ 10 ಕಡೆ ಬಹಿರಂಗ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಆಗಮಿಸಲಿರುವ ಕೇಂದ್ರದ ನಾಯಕರು ಹಾಗೂ ಬಹಿರಂಗ ಸಭೆಯ ಸ್ಥಳಗಳ ಬಗ್ಗೆ ಈಗಾಗಲೇ ಪಟ್ಟಿ ಸಿದ್ಧಪಡಿಸಿ ಚುನಾವಣಾ ಆಯೋಗ ಹಾಗೂ ಆಯಾ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ಪೊಲೀಸ್‌
ವರಿಷ್ಠಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆ ಏ.18ರ ನಂತರ
ನರೇಂದ್ರ ಮೋದಿ, ಅಮಿತ್‌ ಶಾ, ಯೋಗಿ ಆದಿತ್ಯನಾಥ್‌ ಸರಣಿ ಪ್ರವಾಸ ಆರಂಭವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಮಿತ್‌ ಶಾ ಏ.13ರಂದು ಮಧ್ಯಾಹ್ನ 3.25ಕ್ಕೆ ಗೋಕಾಕದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ನಂತರ, ನಿಪ್ಪಾಣಿಯಲ್ಲಿ ಮಹಿಳಾ ಸಮಾವೇಶ ಹಾಗೂ ಸಂಜೆ 7.45ಕ್ಕೆ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ.ಶಾ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ನಮ್ಮ ಕಾರ್ಯಕರ್ತರಿಗೆ ಕಾಂಗ್ರೆಸ್‌ನವರು ಬೆದರಿಕೆಯೊಡ್ಡುತ್ತಿದ್ದಾರೆ.
– ಸುರೇಶ ಅಂಗಡಿ, ಸಂಸದ

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

1-sadadasdsd

PM ಮೋದಿಯವರೊಂದಿಗೆ ಕೃಷಿ ಸಂವಾದಕ್ಕೆ ಯಲ್ಲಾಪುರದ ಲತಾ ಹೆಗಡೆ ಆಯ್ಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.