ಸದನದಲ್ಲಿ “ಮೊಟ್ಟೆ’ ಗಲಾಟೆ; ಬಿಜೆಪಿ ಶಾಸಕರು-ಕೈ ಸದಸ್ಯರ ನಡುವೆ ಮಾತಿನ ಜಟಾಪಟಿ

Team Udayavani, Sep 14, 2022, 6:35 AM IST

ಸದನದಲ್ಲಿ “ಮೊಟ್ಟೆ’ ಗಲಾಟೆ; ಬಿಜೆಪಿ ಶಾಸಕರು-ಕೈ ಸದಸ್ಯರ ನಡುವೆ ಮಾತಿನ ಜಟಾಪಟಿ

ವಿಧಾನಸಭೆ: ನೆರೆ ಸಂತ್ರಸ್ತರ ಸಮಸ್ಯೆ ಆಲಿಸಲು ಕೊಡುಗು ಜಿಲ್ಲೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿತು.

ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಮಾತನಾಡುವಾಗ ಸ್ವತಃ ಸಿದ್ದರಾಮಯ್ಯನವರು ಈ ವಿಷಯ ಪ್ರಸ್ತಾಪಿಸಿದರು. ಆಗ ಕೆ.ಜಿ. ಬೋಪ್ಪಯ್ಯ ಹಾಗೂ ಅಪ್ಪಚ್ಚು ರಂಜನ್‌ ವಿರುದ್ಧ ನೇರ ಆರೋಪ ಮಾಡಿದ ಸಿದ್ದರಾಮಯ್ಯ ಘಟನೆಗೆ ಇವರಿಬ್ಬರೇ ನೇರ ಕಾರಣ. ಕೊಡಗಿನ ಜನ ಒಳ್ಳೆಯವರು. ಆದರೆ, ಈ ಇಬ್ಬರ ಕುಮ್ಮಕ್ಕಿನಿಂದ ಇವತ್ತು ಕೊಡಗು ಹಾಳಾಗಿದೆ. ಈ ಇಬ್ಬರಿಂದಲೇ ಕೊಡಗು ಅಭಿವೃದ್ಧಿ ನಾಶವಾಗಿದೆ, ಅಲ್ಲಿನ ಮಾರ್ಯಾದೆ ಹಾಳಾಗಿದೆ ಎಂದು ಆರೋಪಿಸಿದರು. ಅಲ್ಲದೇ ಕೊಡಗು ಏನೂ ಇವರಿಬ್ಬರ ಆಸ್ತಿನಾ? ಇವರೇನು ಅಲ್ಲಿನ ಪಾಳೆಗಾರರಾ? ಇಂತಹ ಷಡ್ಯಂತ್ರ, ಗೊಡ್ಡು ಬೆದರಿಕೆಗೆ ಹೆದರಲ್ಲ. ನಾಳೆಯೇ ಕೊಡಗಿಗೆ ಬರುತ್ತೇನೆ ಎಂದು ಸವಾಲು ಹಾಕಿದರು.

ಅದಕ್ಕೆ, ನಾವೇನು ಮಾಡಿಲ್ಲ. ನೀವು ಸಾವರ್ಕರ್‌ ಬಗ್ಗೆ ಹಗುರವಾಗಿ ಮಾತನಾಡಿದ್ದು, ಟಿಪ್ಪು ಜಯಂತಿ ಆಚರಿಸಿದ್ದು ಎಂಬ ಕಾರಣಕ್ಕೆ ಅಲ್ಲಿನ ಜನ ಸಿಟ್ಟು ವ್ಯಕ್ತಪಡಿಸಿದರು. ನೀವು ಹಾಗೆಲ್ಲಾ ಪ್ರಚೋದನಾಕಾರಿಯಾಗಿ ಮಾತನಾಡಬಾರದಿತ್ತು ಎಂದು ಕೆ.ಜೆ. ಬೋಪಯ್ಯ ಹಾಗೂ ಅಪ್ಪಚ್ಚು ರಂಜರ್‌ ಹೇಳಿದರು. ನಿಮ್ಮಂತವಹರಿಂದಲೇ ಕೊಡಗು ಹಾಳಾಗಿದೆ. ಕೊಡಗಿನ ಜನ ಒಳ್ಳೆಯವರು. ಅವರನ್ನು ನೀವಿಬ್ಬರೇ ಎತ್ತಿಕಟ್ಟಿದ್ದು ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ಈ ವೇಳೆ ಇಬ್ಬರು ಶಾಸಕರು ಹಾಗೂ ಕಾಂಗ್ರೆಸ್‌ ಸದಸ್ಯರ ನಡುವೆ ಜಟಾಪಟಿ ನಡೆಯಿತು. ಕಾಂಗ್ರೆಸ್‌ ಸದಸ್ಯರು ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತರೆ, ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್‌ ಪರ ಆಡಳಿತ ಪಕ್ಷದ ಸದಸ್ಯರ್ಯಾರೂ ಬೆಂಬಲಕ್ಕೆ ಬರಲಿಲ್ಲ. ಇಬ್ಬರೇ ಕಾಂಗ್ರೆಸ್‌ ಸದಸ್ಯರನ್ನು ಎದುರಿಸಬೇಕಾಯಿತು.
ಪೊಲೀಸ್‌ ವರದಿ ಸದನಕ್ಕೆ ಮಂಡಿಸಿ: ನಾವು ಮೊಟ್ಟೆ ಎಸೆದಿರುವುದನ್ನು ಸಮರ್ಥಿಸುವುದಿಲ್ಲ. ಆದರೆ, ಮೊಟ್ಟೆ ಎಸೆದವರು ನಿಮ್ಮ ಪಕ್ಷದವರೇ ಎಂದು ಅಪ್ಪಚ್ಚು ರಂಜನ್‌ ಹೇಳಿದಾಗ, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ಸದಸ್ಯರು ಅಪ್ಪಚ್ಚು ರಂಜನ್‌ ವಿರುದ್ಧ ಮುಗಿಬಿದ್ದರು. ನಮ್ಮ ಪಕ್ಷದವರಾಗಿದ್ದರೆ ಜಾಮೀನು ಕೊಡಿಸಲು ನೀವು ಯಾಕೆ ಹೋಗಿದ್ದೀರಿ ಎಂದು ಕೇಳಿದರು.

ನಾನು ಕಪ್ಪ ಬಾವುಟ ಪ್ರದರ್ಶಿಸಿದವರನ್ನು ಬಿಡಿಸಿಕೊಂಡು ಬರಲು ಹೋಗಿದ್ದೆ ಎಂದು ಅಪ್ಪಚ್ಚು ರಂಜನ್‌ ಹೇಳಿದರು. ಪಿತೂರಿ ಇವರದ್ದೇ ಎಂದು ಸ್ವತಃ ಅವರೇ ಒಪ್ಪಿಕೊಂಡಂತಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಪೊಲೀಸರು ನಿಷ್ಕ್ರಿಯರಾಗಿದ್ದರು ಎಂದು ಸಿದ್ದರಾಮಯ್ಯ ಆರೋಪಿಸಿದರು. ಅದನ್ನು ಅಲ್ಲಗಳೆದ ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರು ಸಕ್ರಿಯರಾಗಿದ್ದರು, ತಕ್ಷಣ ಆರೋಪಿಗಳನ್ನು ಬಂಧಿಸಲಾಯಿತು ಎಂದು ಸಮರ್ಥನೆ ನೀಡಿದರು. ಘಟನೆ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖಾ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.

ಕಪ್ಪು ಬಾವುಟ ಪ್ರದರ್ಶನ, ಮೊಟ್ಟೆ ಎಸೆಯುವುದು ಇದನ್ನೆಲ್ಲಾ ಹಿಂದೆ ನಾವೂ ಮಾಡಿದ್ದೇವೆ. ಈಗ ಅದರ 10 ಪಟ್ಟು ಮಾಡಲು ಬರುತ್ತದೆ. ಮನಸ್ಸು ಮಾಡಿದರೆ ರಾಜ್ಯಾದ್ಯಂತ ನಾಳೆಯೇ ಅದನ್ನು ಮಾಡಿಸಬಲ್ಲೆ. ಆದರೆ, ಆ ರೀತಿ ಮಾಡಲು ಹೋಗಲ್ಲ. ಈ ರೀತಿ ಕಪ್ಪು ಬಾವುಟ ಪ್ರದರ್ಶನ ಮಾಡುವವರು, ಮೊಟ್ಟೆ ಎಸೆಯುವವರು ವೀರರೂ ಅಲ್ಲ, ಶೂರರೂ ಅಲ್ಲ.
-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.