ಒಬಿಸಿಗಳಿಗೆ ಮೀಸಲಾತಿ ಅವಕಾಶವಿಲ್ಲದೆ ತಾ.ಪಂ. ಜಿ.ಪಂ ಚುನಾವಣೆ ನಡೆಸಲ್ಲ: ಈಶ್ವರಪ್ಪ

Team Udayavani, Mar 12, 2022, 7:30 AM IST

ಒಬಿಸಿಗಳಿಗೆ ಮೀಸಲಾತಿ ಅವಕಾಶವಿಲ್ಲದೆ ತಾ.ಪಂ. ಜಿ.ಪಂ ಚುನಾವಣೆ ನಡೆಸಲ್ಲ: ಈಶ್ವರಪ್ಪ

ವಿಧಾನಪರಿಷತ್ತು: “ಇತರೆ ಹಿಂದುಳಿದ ವರ್ಗ’ (ಒಬಿಸಿ)ಗಳಿಗೆ ಮೀಸಲಾತಿ ಅವಕಾಶ ಇಲ್ಲದೆ ತಾ.ಪಂ. ಹಾಗೂ ಜಿ.ಪಂ. ಚುನಾವಣೆಗಳನ್ನು ಮಾಡುವುದಿಲ್ಲ. ಇದು ನಮ್ಮ ಸರ್ಕಾರದ ಸ್ಪಷ್ಟ ನಿರ್ಧಾರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರ ಹಿಂದುಳಿದ ವರ್ಗಗಳಿಗೆ ದ್ರೋಹ ಮಾಡಲ್ಲ. ಅವರಿಗೆ ಮೀಸಲಾತಿಯ ಅವಕಾಶ ಇಲ್ಲದೇ ತಾ.ಪಂ., ಜಿ.ಪಂ ಚುನಾವಣೆಗಳನ್ನು ನಡೆಸುವುದಿಲ್ಲ ಎಂದರು.

ಸುಪ್ರೀಂಕೋರ್ಟ್‌ ಇತ್ತಿಚಿಗೆ ಹೇಳಿರುವ ಪ್ರಕಾರ ಸ್ಥಳೀಯ ಸಂಸ್ಥೆಗಳಲ್ಲಿ ಎಸ್ಸಿ, ಎಸ್ಟಿ ಹಾಗೂ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನೀಡಬೇಕು. ಅದರಂತೆ ಸದ್ಯ ಒಬಿಸಿಗಳಿಗೆ ಮೀಸಲಾತಿ ನೀಡುವಂತಿಲ್ಲ. ಇದು ದೊಡ್ಡ ಆಘಾತ ತಂದಿದೆ. ಒಬಿಸಿಗಳ ನಿಖರ ಜನಸಂಖ್ಯೆ ಬಗ್ಗೆ ಮಾಹಿತಿ ನೀಡುವಂತೆ 2010ರಲ್ಲಿ ಸುಪ್ರೀಂಕೋರ್ಟ್‌ ಹೇಳಿತ್ತು. ಯಾರೂ ಅದನ್ನು ಗಮನಿಸಿಲ್ಲ. ಅದರಿಂದ ಒಬಿಸಿ ಮೀಸಲಾತಿ ನೆಗೆದುಬಿದ್ದು ಹೋಯಿತು. ಈ ಬಗ್ಗೆ ಮುಖ್ಯಮಂತ್ರಿಯವರು ಕಾನೂನು ತಜ್ಞರ ಜೊತೆ ಚರ್ಚಿಸಿದ್ದಾರೆ. ಒಬಿಸಿಗಳಿಗೆ ಅವಕಾಶ ಇಲ್ಲದೇ ಚುನಾವಣೆ ಮಾಡುವುದಿಲ್ಲ ಎಂದರು.

ಜಿ.ಪಂ. ಹಾಗೂ ತಾ.ಪಂ.ಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಅದರಂತೆ, ರಾಜ್ಯ ಚುನಾವಣಾ ಆಯೋಗ ಕ್ಷೇತ್ರಗಳ ಗಡಿಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಿತ್ತು. ಅದಕ್ಕೆ 800ಕ್ಕೂ ಹೆಚ್ಚು ಆಕ್ಷೇಪಣೆಗಳು ಬಂದಿದ್ದವು. ಅದನ್ನು ಇತ್ಯರ್ಥಪಡಿಸದೆ ಚುನಾವಣೆಗಳನ್ನು ನಡೆಸಲು ಸಾಧ್ಯವಿರಲ್ಲ. ಅದಕ್ಕಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಲಾಗಿದೆ. ಆಯೋಗ ಕಾರ್ಯಪ್ರವೃತ್ತವಾಗಿದೆ. ಬೇಗ ವರದಿ ಕೊಡಿ ಎಂದು ಷರತ್ತು ಹಾಕಲು ಆಗುವುದಿಲ್ಲ. ಮನವಿ ಮಾಡಬಹುದು. ಆದಷ್ಟು ಬೇಗ ಆಯೋಗ ವರದಿ ಕೊಡಬಹುದು ಎಂಬ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:ಭಾರತ ಬೌದ್ಧಿಕ ಸಂಪತ್ತಿನಲ್ಲಿ ವಿಶ್ವಗುರು: ಓಂ ಬಿರ್ಲಾ

ಒಬಿಸಿಗಳಿಗೆ ಅನ್ಯಾಯ ಮಾಡಿದ್ದು ಸಿದ್ದು:
ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಮಧ್ಯಪ್ರವೇಶಿಸಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಹಿಂದುಳಿದ ವರ್ಗಗಳ ಆಯೋಗದಿಂದ ಎಲ್ಲಾ ವರ್ಗಗಳ ಸಮೀಕ್ಷೆ ಮಾಡಿದ್ದಾರೆ. ಆ ಮಾಹಿತಿಯನ್ನು ಸುಪ್ರೀಂಕೋರ್ಟ್‌ಗೆ ಕೊಡಿ ಎಂದು ಹೇಳಿದರು.

ಅದಕ್ಕೆ, ಸಿದ್ದರಾಮಯ್ಯ ಮಾಡಿದರು ಎಂದು ಪದೇ ಪದೇ ಹೇಳುತ್ತಿದ್ದೀರಿ, ಅವರು ಸಿಎಂ ಆಗಿದ್ದಾಗ ನಾನು ವಿಧಾನಪರಿಷತ್‌ ಪ್ರತಿಪಕ್ಷ ನಾಯಕನಾಗಿದ್ದೆ. ಆಗ ಹಿಂದುಳಿದ ವರ್ಗಗಳ ಆಯೋಗದ ವರದಿ ಬಿಡುಗಡೆ ಮಾಡಿ ಎಂದು ಪರಿ ಪರಿಯಾಗಿ ಕೇಳಿಕೊಂಡೆ, ಇವತ್ತು, ನಾಳೆ ಎಂದು ಅವರು ಕಾಲ ಸಾಗ ಹಾಕಿದರು. ಹಾಗಾಗಿ, ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದು ಸಿದ್ದರಾಮಯ್ಯ ಎಂದು ಈಶ್ವರಪ್ಪ ತಿರುಗೇಟು ನೀಡಿದರು.

ಮಾತೆತ್ತಿದರೆ ಸಿದ್ದರಾಮಯ್ಯ ಹೆಸರು ಹೇಳ್ತಿರಿ, ನಿಮ್ಮದು, ಸಿದ್ದರಾಮಯ್ಯನವರದ್ದು ಏನ್‌ ಮ್ಯಾಚ್‌ ಫಿಕ್ಸಿಂಗ್‌ ಅನ್ನೋದೆ ಗೊತ್ತಾಗಲ್ಲ ಎಂದು ಹರಿಪ್ರಸಾದ್‌ ಕಾಲೆಳೆದರು.

“ನನ್ನ ಮತ್ತು ಸಿದ್ದರಾಮಯ್ಯ ನಡುವಿನ ಮ್ಯಾಚ್‌ ಫಿಕ್ಸಿಂಗ್‌ ಈ ಜನ್ಮದಲ್ಲಿ ನಿಮಗೆ ಗೊತ್ತಾಗಲ್ಲ ಬಿಡಿ’ ಎಂದು ಈಶ್ವರಪ್ಪ ಮಾರುತ್ತರ ನೀಡಿದರು. ಒಬಿಸಿಗಳಿಗೆ ಮೀಸಲಾತಿ ಬೇಡ ಎಂದು ರಾಮಾಜೋಯಿಸ್‌ ಅವರು ಸುಪ್ರೀಂಕೋರ್ಟ್‌ಗೆ ಹೋಗಿದ್ದರು, ಅದು ನಿಮಗೆ ತಿಳಿದಿರಲಿ ಎಂದು ಹರಿಪ್ರಸಾದ್‌ ಟಾಂಗ್‌ ಕೊಟ್ಟರು. ಒಬಿಸಿಗಳಿಗೆ ಸಿದ್ದರಾಮಯ್ಯ ಮೋಸ ಮಾಡಿದ್ದು ಎಂದು ಈಶ್ವರಪ್ಪ ಹೇಳಿರುವುದು ಸರಿಯಲ್ಲ ಎಂದು ಪ್ರಕಾಶ್‌ ರಾಥೋಡ್‌ ಆಕ್ಷೇಪಿಸಿದರು. ಅವರಿಬ್ಬರೂ ಒಂದೇ ನಿಮಗೆ ಗೊತ್ತಾಗಲ್ಲ ಸುಮ್ನೆ ಕೂರಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿ ಚರ್ಚೆಗೆ ತೆರೆ ಎಳೆದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.