ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಆರೋಪ ಪಟ್ಟಿ ಸಲ್ಲಿಕೆ
Team Udayavani, Aug 8, 2022, 9:23 PM IST
ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಕೇಂದ್ರಅಪರಾಧ ವಿಭಾಗ(ಸಿಸಿಬಿ) ಪೊಲೀಸರು ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಸುಮಾರು ನೂರಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿಯಲ್ಲಿ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೊಳಗಾಗಿರುವ ಧಾರವಾಡ ವಿವಿ ಕುಲಸಚಿವ ಡಾ| ನಾಗರಾಜ್ ಮತ್ತು ಪಿಎಚ್ಡಿ ವಿದ್ಯಾರ್ಥಿನಿ ಸೌಮ್ಯಾ ವಿರುದ್ಧ ಮಾಹಿತಿ ಉಲ್ಲೇಖೀಸಲಾಗಿದೆ. ಆರೋಪಪಟ್ಟಿಯಲ್ಲಿ ಇವರಿಬ್ಬರ ಹೇಳಿಕೆಗಳನ್ನು ದಾಖಲಿಸಲಾಗಿದೆ.
ತಾನು ಉದ್ದೇಶಪೂರ್ವಕವಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿಲ್ಲ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಯಾರಾಗಿದ್ದ ಪ್ರಶ್ನೆಪತ್ರಿಕೆಯ ಮಾದರಿಗಳು ಮನೆಯಲ್ಲಿದ್ದವು. ಸೌಮ್ಯ ನನ್ನ ಗಮನಕ್ಕೆ ಬಾರದೆ ಅದರ ಫೋಟೋಗಳನ್ನು ತೆಗೆದುಕೊಂಡಿದ್ದರು. ಅಂತಿಮ ಪ್ರಶ್ನೆಪತ್ರಿಕೆಯ ಪೋಟೋ ಪ್ರತಿಯನ್ನು ತನ್ನ ಸಂಬಂಧಿ ಸೌಮ್ಯಾಗೆ ಕಳುಹಿಸಿದ್ದಳು. ಇವುಗಳ ಫೋಟೋಗಳನ್ನು ಸೌಮ್ಯಾ ಸ್ನೇಹಿತೆಗೆ ಕಳುಹಿಸಿದ್ದಳು. ಆಕೆ ಅವಳ ಗೆಳೆಯನಿಗೆ ಕಳುಹಿಸಿದ್ದಳು. ಆದರೆ ಆತ ಈ ಪ್ರಶ್ನೆ ಪತ್ರಿಕೆಯನ್ನು ನೋಡಿರಲಿಲ್ಲ. ಪರೀಕ್ಷೆ ಮುಗಿಸಿ ಬಂದಾಗ ವಾಟ್ಸ್ಆ್ಯಪ್ ಮೂಲಕ ಬಂದಿದ್ದ ಫೋಟೋಗಳನ್ನು ನೋಡಿ ಪರೀಕ್ಷೆ ಪ್ರಾಧಿಕಾರಕ್ಕೆ ದೂರು ನೀಡಿದ್ದ ಎಂದು ನಾಗರಾಜ್ ಹೇಳಿದ್ದಾರೆಂದು ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ