ಆತ್ಮಹತ್ಯೆಗೆ ಯತ್ನ; 6 ತಿಂಗಳು ನರಳಾಡಿ ಯುವತಿ ಸಾವು
Team Udayavani, Jan 3, 2018, 12:25 PM IST
ಮೈಸೂರು: ಕಾಮುಕನೊಬ್ಬನ ಕಿರುಕುಳ ತಾಳಲಾರದೆ ನೇಣಿಗೆ ಕೊರಳೊಡ್ಡಿ ಕೋಮಾಗೆ ಜಾರಿ 6 ತಿಂಗಳ ಬಳಿಕ ಯುವತಿಯೊಬ್ಬಳು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ನಡೆದಿದೆ.
ರಮ್ಮಹಳ್ಳಿ ನಿವಾಸಿಯಾಗಿದ್ದ ರಜನಿ ಎಂಬಾಕೆ 6 ತಿಂಗಳ ಹಿಂದೆ ನೇಣು ಬಿಗಿದುಕೊಂಡ ವೇಳೆ ರಕ್ಷಣೆಗೊಳಗಾಗಿ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.
ರಘು ಎಂಬಾತ ರಜನಿಯ ಬೆನ್ನು ಬಿದ್ದಿದ್ದು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿ ನಿರಾಕರಿಸಿದ್ದು, ಮನೆಯವರೂ ಆತನಿಗೆ ವಿರೋಧ ತೋರಿದ್ದರು. ನಿರಂತರ ಕಿರುಕುಳ ನೀಡಿ ಹಿಂಬಾಲಿಸಿ ಫೋಟೋಗಳನ್ನು ತೆಗೆದು ವಾಟ್ಸಾಪ್ಗೆ ಹಾಕುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತೀವ್ರ ವಾಗಿ ನೊಂದು ರಜನಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಮನೆಯವರು ತಿಳಿಸಿದ್ದಾರೆ.
ಇದೀಗ ರಜನಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ರಘು ವನ್ನು ಬಂಧಿಸಿ ಶಿಕ್ಷಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಮೈಸೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ