ನಕಲಿ ಜಾಲದ ಬುಡವನ್ನೇ ಕತ್ತರಿಸಿ: ಬಿ.ಸಿ.ಪಾಟೀಲ್ ಎಚ್ಚರಿಕೆ

Team Udayavani, Jun 28, 2022, 3:50 PM IST

ನಕಲಿ ಜಾಲದ ಬುಡವನ್ನೇ ಕತ್ತರಿಸಿ: ಬಿ.ಸಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು: ರೈತರಿಗೆ ಯಾವುದೇ ಕಾರಣಕ್ಕೂ ನಕಲಿ ಬೀಜ, ನಕಲಿ ಗೊಬ್ಬರ ಪೂರೈಕೆ ಆಗಲೇಬಾರದು. ಇಲಿ ಹಿಡಿಯುವುದಕ್ಕಿಂತ ಹುಲಿಯನ್ನು ಹಿಡಿಯಬೇಕು. ನಕಲಿ ಜಾಲದ ಬುಡವನ್ನೇ ಕತ್ತರಿಸಿ ಹಾಕಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಕಾಸಸೌಧದ ಕಚೇರಿಯಲ್ಲಿ ಕೃಷಿ ವಿಚಕ್ಷಣಾ ದಳ (ಜಾಗೃತ ಕೋಶ)ವನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿದರು.

ಬಿತ್ತನೆ ಚುರುಕುಗೊಳ್ಳುತ್ತಿದ್ದು, ಕಾಳಸಂತೆ ಮಾರಾಟಗರರು ರೈತರಿಗೆ ಮೋಸ ಮಾಡಲೆಂದೇ ನಕಲಿ ಬೀಜ ನಕಲಿ ಗೊಬ್ಬರ ಮಾರಾಟಗಾರರು ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ. ಇಂತವರ ಮೇಲೆ ಕೃಷಿ ವಿಚಕ್ಷಣಾ ದಳ ಹದ್ದಿನ ಕಣ್ಣು ಸದಾ ಜಾಗೃತಗೊಳಿಸಿರಬೇಕು. ಜಾಗೃತ ಕೋಶ ಸದಾ ಎಚ್ಚರಿಕೆಯಿಂದಿರಬೇಕು. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎನ್ನುವಂತಾಗದೇ ನಕಲಿ ಜಾಲದ ಮೂಲವನ್ನೇ ನಾಶಪಡಿಸಬೇಕು. ಬರೀ ಚಾರ್ಜ್ ಶೀಟ್ ಹಾಕಿ ಸುಮ್ಮನಾದರೆ ಸಾಲದು. ನಕಲಿಕೋರರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಕಂಪೆನಿ ಇರಲಿ ಅದು ಎಷ್ಟೇ ಹೆಸರು ಮಾಡಿರಲಿ, ಆ ಕಂಪೆನಿ ರೈತರಿಗೆ ಮಾರುವ ಉತ್ಪನ್ನ, ಬೀಜ, ಗೊಬ್ಬರ ಅಧಿಕೃತವಾಗಿರಲೇಬೇಕು. ಎಲ್ಲಾ ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಹೊಂದಿರಲೇಬೇಕು. ಯಾವುದೋ ಒಂದಕ್ಕೆ ಪರವಾನಿಗೆ ಪಡೆದು ಅದರ ಹೆಸರಿನಲ್ಲಿ ಮತ್ತೊಂದು ಉತ್ಪನ್ನ ಮಾರಾಟ ಮಾಡಿದರಾಯಿತು ಎನ್ನುವುದನ್ನು ತಪ್ಪಿಸಬೇಕು. ಇಂತಹ ಕಂಪೆನಿಗಳು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೇ ನೊಟೀಸ್ ನೀಡಿ, ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿಗದಿತ ಸೂಚಿತ ಪ್ರದೇಶಗಳಲ್ಲಿ ಸೂಚಿಸಿದ ಕಂಪೆನಿ ಮಾರಾಟಗಾರರು ಮಾತ್ರ ಕೃಷಿ ಉತ್ಪನ್ನ, ಬೀಜ ಗೊಬ್ಬರ ಪರವಾನಿಗೆಯುತವಾಗಿ ಮಾರಾಟ ಮಾಡಬೇಕು. ರೈತರಿಗೆ ಇಂತವರಿಂದ ಮೋಸವಾದ ಮೇಲೆ ಎಚ್ಚೆತ್ತುಕೊಂಡು ಪರಿಹಾರ ನೀಡುವುದಕ್ಕಿಂತ ರೈತರಿಗೆ ಅನ್ಯಾಯವಾಗುವ ಮೊದಲೇ ಕೃಷಿ ವಿಚಕ್ಷಣಾ ದಳ ಸನ್ನದ್ಧವಾಗಿರಬೇಕು ಎಂದರು.

ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಬಲಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಿಚಕ್ಷಣಾ ದಳದ ಕಚೇರಿಯನ್ನು ವಿಸ್ತರಿಸಲಾಗಿದ್ದು, ಹೊಸದಾಗಿ ಮೈಸೂರು ಹಾಗೂ ಕಲಬುರಗಿಯಲ್ಲಿ ಕೃಷಿ ವಿಚಕ್ಷಣಾ ದಳದ ನೂತನ ಕಚೇರಿಯನ್ನು ಆರಂಭಿಸಲಾಗುವುದು. ಮುಂದಿನ ಜುಲೈ 5 ರಂದು ಮೈಸೂರಿನಲ್ಲಿ ಕೃಷಿ ವಿಚಕ್ಷಣಾ ದಳದ ನೂತನ ಕಚೇರಿ ಉದ್ಘಾಟನೆಗೊಳ್ಳಲಿದೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

ಟಾಪ್ ನ್ಯೂಸ್

Rohit Sharma, KL Rahul Go Past Star Pakistan Duo To Script T20I Record

ಬಾಬರ್ ಅಜಂ- ರಿಜ್ವಾನ್ ದಾಖಲೆ ಮುರಿದ ಕೆಎಲ್ ರಾಹುಲ್- ರೋಹಿತ್ ಜೋಡಿ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗಾಂಜಾದ ಮತ್ತಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆಗೈದ ಯುವಕರು

ಗಾಂಜಾದ ಮತ್ತಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆಗೈದ ಯುವಕರು

ಮಲ್ಪೆ ಬೀಚ್‌: ಗರಿಗೆದರಿದ ಚಟುವಟಿಕೆ : ಇನ್ನೂ ಆರಂಭಗೊಳ್ಳದ ದ್ವೀಪಯಾನ

ಮಲ್ಪೆ ಬೀಚ್‌: ಗರಿಗೆದರಿದ ಚಟುವಟಿಕೆ : ಇನ್ನೂ ಆರಂಭಗೊಳ್ಳದ ದ್ವೀಪಯಾನ

ವನಿತಾ ಏಷ್ಯಾ ಕಪ್‌ ಕ್ರಿಕೆಟ್‌: ಮಲೇಷ್ಯಾ ಎದುರಾಳಿ; ಮಿಂಚಲಿ ಶಫಾಲಿ

ವನಿತಾ ಏಷ್ಯಾ ಕಪ್‌ ಕ್ರಿಕೆಟ್‌: ಮಲೇಷ್ಯಾ ಎದುರಾಳಿ; ಮಿಂಚಲಿ ಶಫಾಲಿ

ಗಮನ ಸೆಳೆದ 10 ಕೋ.ರೂ. ಬೆಲೆಯ ಭೀಮ!

ಗಮನ ಸೆಳೆದ 10 ಕೋ.ರೂ. ಬೆಲೆಯ ಭೀಮ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಸೋಮವಾರದ ರಾಶಿ ಫಲ : ಈ ರಾಶಿಯವರು ಅನ್ಯರಿಂದ ಸಹಾಯ ನಿರೀಕ್ಷಿಸದಿರಿ…

ಸೋಮವಾರದ ರಾಶಿ ಫಲ : ಈ ರಾಶಿಯವರು ಇಂದು ಅನ್ಯರಿಂದ ಸಹಾಯ ನಿರೀಕ್ಷಿಸದಿರಿ…

ವಿದೇಶಿ ಭಯೋತ್ಪಾದಕ ಸಂಘಟನೆಗಳ ಮೇಲೆ ನಿಗಾ; ರಾಜ್ಯದ ಎಂಟು ಮಂದಿ ಐಸಿಸ್‌, ಐಎಸ್‌ಕೆಪಿ ಸೇರ್ಪಡೆ

ವಿದೇಶಿ ಭಯೋತ್ಪಾದಕ ಸಂಘಟನೆಗಳ ಮೇಲೆ ನಿಗಾ; ರಾಜ್ಯದ ಎಂಟು ಮಂದಿ ಐಸಿಸ್‌, ಐಎಸ್‌ಕೆಪಿ ಸೇರ್ಪಡೆ

thumb-1

ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ “ಟ್ಯಾಬ್‌’

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ: ವರ್ಷದೊಳಗೆ ಗಾಂಧಿ ಭವನ ಪೂರ್ಣ: ಸಿಎಂ

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ: ವರ್ಷದೊಳಗೆ ಗಾಂಧಿ ಭವನ ಪೂರ್ಣ: ಸಿಎಂ

MUST WATCH

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

udayavani youtube

ದಿನ7 | ಕಾಳರಾತ್ರಿ ದೇವಿ

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

ಹೊಸ ಸೇರ್ಪಡೆ

Rohit Sharma, KL Rahul Go Past Star Pakistan Duo To Script T20I Record

ಬಾಬರ್ ಅಜಂ- ರಿಜ್ವಾನ್ ದಾಖಲೆ ಮುರಿದ ಕೆಎಲ್ ರಾಹುಲ್- ರೋಹಿತ್ ಜೋಡಿ

ಎಂಜಿನ್‌ ವೈಫಲ್ಯ: ಬೆಂಗಳೂರು- ಕಣ್ಣೂರು ರೈಲು 6 ತಾಸು ವಿಳಂಬ

ಎಂಜಿನ್‌ ವೈಫಲ್ಯ: ಬೆಂಗಳೂರು- ಕಣ್ಣೂರು ರೈಲು 6 ತಾಸು ವಿಳಂಬ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಥರ್ಮೊಕೋಲ್‌ ಬೇಲಿ!

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗುಂಡ್ಲುಪೇಟೆ: ಜಮೀನಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 510 ಚೀಲದ ರಸ ಗೊಬ್ಬರ ವಶ

ಗಾಂಜಾದ ಮತ್ತಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆಗೈದ ಯುವಕರು

ಗಾಂಜಾದ ಮತ್ತಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆಗೈದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.