ಬೆಂಗಳೂರು ವಿಮಾನ ನಿಲ್ದಾಣ : ಚಿನ್ನ, ಮೊಬೈಲ್, ಇ ಸಿಗರೇಟ್ ವಶ
ಅಧಿಕಾರಿಗಳ ಭರ್ಜರಿ ಬೇಟೆ
Team Udayavani, Oct 1, 2022, 9:29 PM IST
ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಲದಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಶನಿವಾರ ಭರ್ಜರಿ ಬೇಟೆಯಾಡಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಮೊಬೈಲ್ ಪೋನ್, ಚಿನ್ನ ಸೇರಿದಂತೆ ವಿದೇಶಿ ಮೂಲದ ಇ ಸಿಗರೇಟ್ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನೊಬ್ಬ ಬರೋಬ್ಬರಿ 16 ಮೊಬೈಲ್ಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದು, ಆತನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಮೂವರು ಪ್ರಯಾಣಿಕರು 729 ಗ್ರಾಂ ತೂಕದ ಚಿನ್ನವನ್ನು ಅಕ್ರಮ ಸಾಗಣೆ ಮಾಡುತ್ತಿದ್ದು, ಇದರ ಮೌಲ್ಯ 36.97 ಲಕ್ಷವಾಗಿರುತ್ತದೆ. 22.16 ಲಕ್ಷ ಮೌಲ್ಯದ ಇ- ಸಿಗರೇಟ್ಗಳನ್ನು ವಶಕ್ಕೆ ಪಡೆದು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮುಂಬೈ ನಗರದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯಿಂದ 7 ಚಿಕ್ಕ ಚಿಕ್ಕ ಚಿನ್ನದ 409 ಗ್ರಾಂ ಗಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ. ವಿಮಾನದ ಸೀಟ್ ಕೆಳಗೆ ಚಿನ್ನವನ್ನು ಇರಿಸಿ ಅವುಗಳನ್ನು ಅಕ್ರಮ ಸಾಗಣೆಗೆ ಆರೋಪಿತನು ಯತ್ನಿಸುತ್ತಿದ್ದ. ವಶಕ್ಕೆ ಪಡೆದ ಚಿನ್ನದ ಮೌಲ್ಯವೂ ಅಂದಾಜು 17 ಲಕ್ಷ ಎನ್ನಲಾಗಿದ್ದು, ಆತನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ಪ್ರಗತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ