Ram Mandir: ರಾಮ ಮಂದಿರದ ಕುರಿತು ಮಾಜಿ ಸಚಿವ ಆಂಜನೇಯ ಹೇಳಿಕೆಗೆ ಯತ್ನಾಳ ಕಿಡಿ
ರಾಮ ಮಂದಿರದ ಕುರಿತು ಹೇಳಿಕೆಗೆ ಟ್ವೀಟ್ ಖಾತೆಯಲ್ಲಿ ಟೀಕೆ
Team Udayavani, Jan 2, 2024, 9:04 AM IST
ವಿಜಯಪುರ : ರಾಮ ಮಂದಿರದ ಕುರಿತು ಮಾಜಿ ಸಚಿವ ಎಚ್. ಆಂಜನೇಯ ನೀಡಿರುವ ಹೇಳಿಕೆಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.
ಆಂಜನೇಯ ಹೇಳಿಕೆಗೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ, ಇಂತಹ ಅವಿವೇಕಿಗಳು, ಸ್ವಜಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ !!!
ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ ಎಂದು ಆಂಜನೇಯ ವಿರುದ್ಧ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.