ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

Team Udayavani, Feb 24, 2021, 4:59 PM IST

ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

ಬೆಂಗಳೂರು : ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿದ್ದು, ಆ ಕ್ಷೇತ್ರದ ಚುನಾವಣಾ ಉಸ್ತುವಾರಿಗಳು ಹಾಗೂ ಉಪ ಮುಖ್ಯಮಂತ್ರಿಯವರಾದ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳ ಮತ್ತು ಬಿಜೆಪಿ ಮುಖಂಡರ ಸಭೆ ನಡೆಯಿತು.

ಉಪ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಬಯಸಿದ 18ಕ್ಕೂ ಹೆಚ್ಚಿನ ಆಕಾಂಕ್ಷಿಗಳು ಈ ಸಭೆಯಲ್ಲಿ ಭಾಗವಹಿಸಿ ಚುನಾವಣಾ ಉಸ್ತುವಾರಿಗಳೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಕುರಿತು ರಣತಂತ್ರವನ್ನು ಈ ಸಭೆಯಲ್ಲಿ ರೂಪಿಸಲಾಯಿತು.

ಇದನ್ನೂ ಓದಿ :ದೇಶದ ಅತ್ಯಂತ ದೊಡ್ಡ ದಂಗೆಕೋರ ಮೋದಿ : ಮಮತಾ ಬ್ಯಾನರ್ಜಿ

 ಈ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಹಲವಾರು ಮುಖಂಡರು ಅಪೇಕ್ಷೆಪಟ್ಟು ಬಿಜೆಪಿಯ ಟಿಕೆಟ್‍ಗೆ ಮನವಿ ಮಾಡಿಕೊಂಡಿರುವುದು ಸಹಜ. ಆದರೆ ಈ ಎಲ್ಲಾ ಆಕಾಂಕ್ಷಿಗಳ ವಿವರಗಳನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಮತ್ತು ಅಂತಿಮ ತೀರ್ಮಾನವನ್ನು ಪಕ್ಷದ ವರಿಷ್ಠರೇ ಕೈಗೊಳ್ಳುತ್ತಾರೆ. ಅವರು ಯಾವುದೇ ತೀರ್ಮಾನ ಕೈಗೊಂಡರೂ ಸಹ ಎಲ್ಲರೂ ಸಹಮತದಿಂದ ಮತ್ತು ಒಗ್ಗಟ್ಟಿನಿಂದ ವರಿಷ್ಠರು ಸೂಚಿಸುವ ಅಭ್ಯರ್ಥಿಯ ಗೆಲುವಿಗೆ ಸಮರೋಪಾದಿಯಲ್ಲಿ ಶ್ರಮಿಸುವುದು ಅಗತ್ಯ ಎಂದು ಡಿಸಿಎಂ ಸವದಿ ತಿಳಿಸಿದರು.

ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಗೆಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ.  ಆದ್ದರಿಂದ ಯಾವುದೇ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಳ್ಳದೇ ಪಕ್ಷದ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡುವಂತೆ ಸವದಿ ಅವರು ಸ್ಥಳೀಯ ಮುಖಂಡರಿಗೆ ಕರೆ ಕೊಟ್ಟರು.

ಇದನ್ನೂ ಓದಿ : ಅರಣ್ಯ ಪ್ರದೇಶದಲ್ಲಿ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಿ – ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

 ಈ ಚುನಾವಣೆಯಲ್ಲಿ ಮತದಾರರ ಮನ ಮತ್ತು ಮನೆಯನ್ನು ತಲುಪುವಲ್ಲಿ ಬಿಜೆಪಿ ಕಾರ್ಯಕರ್ತರು ಮುಂದಿರಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಸ್ಥಳೀಯರಿಗೆ ಮನದಟ್ಟು ಮಾಡಿಕೊಡಬೇಕು ಎಂದು ಅವರು ತಿಳಿಸಿದರು.

ಬಸವಕಲ್ಯಾಣ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಪ್ರಚಾರದ ರೂಪುರೇಷೆಗಳ ಕುರಿತು ಸಭೆಯಲ್ಲಿ ಭಾಗವಹಿಸಿದ ಮುಖಂಡರು ತಮ್ಮ ಸಲಹೆ ನೀಡಿದರು.

ಈ ಸಭೆಯಲ್ಲಿ ಸಚಿವರಾದ  ಪ್ರಭು ಚೌವ್ಹಾಣ್,  ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದರಾದ  ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ  ಮಾಲೀಕಯ್ಯ ಗುತ್ತೇದಾರ್, ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ್, ವಿಭಾಗ ಸಹ ಪ್ರಭಾರಿಗಳಾದ  ಈಶ್ವರ್ ಸಿಂಗ್ ಠಾಕೂರ್, ಮಾಜಿ ಶಾಸಕರಾದ  ಅಮರನಾಥ್ ಪಾಟೀಲ್, ಬಿಜೆಪಿಯ ಬೀದರ್ ಜಿಲ್ಯಾಧ್ಯಕ್ಷರಾದ  ಶಿವಾನಂದ ಮಂಟಾಲ್ಕರ್ ಹಾಗೂ ಜಿಲ್ಲೆಯ ಇತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.