ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ?: ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ತಿರುಗೇಟು

Team Udayavani, Nov 5, 2022, 2:36 PM IST

ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ?: ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ತಿರುಗೇಟು

ಬೆಂಗಳೂರು: ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಶಾಲೆಗಳಲ್ಲಿ ಧ್ಯಾನ ವಿಚಾರಕ್ಕೆ ಟೀಕೆ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಶಿಕ್ಷಣ ಸಚಿವರು, ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು‌ ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು. ಕೋವಿಡ್-19 ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು ‘ಕಲಿಕಾ ಚೇತರಿಕೆ’ ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನ ಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. 21ನೇ ಶತಮಾನದ ಅಗತ್ಯಗಳಿಗೆ ಪೂರಕವಾಗಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು 8,100 ಕೊಠಡಿ ನಿರ್ಮಿಸಲಾಗುತ್ತಿದೆ.ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ:ಹರಿದ ಚಪ್ಪಲಿ ಧರಿಸಿ ಬಂದಿದ್ದ ಹುಡುಗ ಇದೀಗ ಸ್ಟಾರ್ ಪ್ಲೇಯರ್: ಬುಲ್ಸ್ ಗೆ ಬಲ ತುಂಬಿದ ಭರತ್

ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆ ಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ. ಅರ್ಜಿ ಹಾಕದವರು, ಪರೀಕ್ಷೆ ಬರೆಯದವರನ್ನು ಶಿಕ್ಷಕರಾಗಿ ನೇಮಿಸಿ ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಅಪ’ಕೀರ್ತಿ’ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಬೇಕಲ್ಲವೇ! ಭ್ರಷ್ಟಾಚಾರ, ಸಾಲು, ಸಾಲು ಹಗರಣಗಳಲ್ಲಿ ಮಿಂದೆದ್ದಿರುವುದು ಯಾರೆಂದು ರಾಜ್ಯದ ಜನತೆಗೆ ತಿಳಿದಿದೆ ಎಂದು ಟೀಕಿಸಿದರು.

ನಿಮ್ಮ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು ಮಾಡಿದ್ದರೇ ಶಿಕ್ಷಕರು ಮತ್ತು ಮೂಲ ಸೌಕರ್ಯಗಳ ಕೊರತೆ ಈ ಪ್ರಮಾಣದಲ್ಲಿ ಇರುತ್ತಿತ್ತೇ? ನೀವು ಅಧಿಕಾರದಲ್ಲಿದ್ದಾಗ ಬಾರದ ಶೈಕ್ಷಣಿಕ ಅಭಿವೃದ್ಧಿಯ ಆಲೋಚನೆಗಳು ಈಗ ನಿಮಗೆ ಬರುತ್ತಿರುವುದು ಸಂತೋಷ! ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ‘ಕುಗ್ಗಿ ಹೋಗುತ್ತಾರೆ’ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.