ಟಿಕೆಟ್ ಘೋಷಣೆಗೂ ಮೊದಲು ರಾಷ್ಟ್ರೀಯ ನಾಯಕರು ನನ್ನೊಂದಿಗೆ ಚರ್ಚಿಸಿದ್ದರು: ಬಿಎಸ್ ವೈ
Team Udayavani, Jun 9, 2020, 12:12 PM IST
ಬೆಂಗಳೂರು: ರಾಜ್ಯಸಭೆಗೆ ಸ್ಪರ್ಧಿಸಲು ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಕ್ಕೆ ಪಕ್ಷದ ಹಿರಿಯರಿಗೆ ಧನ್ಯವಾದಗಳು. ಅವರು ರಾಜ್ಯಸಭೆಯಲ್ಲಿ ಉತ್ತಮ ಕೆಲಸ ಮಾಡುತ್ತಾರೆ ಎಂಬ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರ ನಾಮಪತ್ರ ಸಲ್ಲಿಕೆಯ ಮೊದಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿಎಂ ಬಿಎಸ್ ವೈ ಮಾತನಾಡಿದರು.
ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಹೀಗೆ ಗುರುತಿಸಲು ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ. ಇವರಿಗೆ ಟಿಕೆಟ್ ನೀಡುವ ಮೊದಲು ರಾಷ್ಟ್ರೀಯ ನಾಯಕರು ನನ್ನಲ್ಲಿ ಚರ್ಚೆ ನಡೆಸಿದ್ದರು. ನಂತವೇ ಘೋಷಣೆ ಮಾಡಿದ್ದಾರೆ ಎಂದು ಬಿಎಸ್ ವೈ ಹೇಳಿದ್ದಾರೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ್ ಖರ್ಗೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.