ಇಂದಿರಾ ಕ್ಯಾಂಟೀನ್ ಕಟ್ಟಡದಲ್ಲಿ ಮಹಿಳೆಯ ರೇಪ್&ಮರ್ಡರ್
Team Udayavani, Jan 27, 2018, 11:07 AM IST
ಬೆಳಗಾವಿ: ಜಿಲ್ಲೆಯ ಬಿಮ್ಸ್ ಆಸ್ಪತ್ರೆಯ ಆವರಣ ದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡದಲ್ಲಿ ಅನಾಥ ಮಹಿಳೆಯೊಬ್ಬರನ್ನು ಕಾಮಾಂಧರು ಬರ್ಬರವಾಗಿ ಅತ್ಯಾಚಾರ ಎಸಗಿ ಅಮಾನುಷವಾಗಿ ಹತ್ಯೆಗೈದು ಪರಾರಿಯಾದ ಹೇಯ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಹತ್ಯೆಗೀಡಾದ ಮಹಿಳೆ ಬಿಮ್ಸ್ ಆವರಣದಲ್ಲಿ ಕಳೆದ ಕೆಲ ವರ್ಷದಿಂದ ನಿರ್ಗತಿಕಳಾಗಿ ವಾಸಿಸುತ್ತಿದ್ದು, ಅವರಿವರು ಕೊಟ್ಟ ಆಹಾರ ತಿಂದು ದಿನ ದೂಡುತ್ತಿದ್ದರು ಎಂದು ತಿಳಿದು ಬಂದಿದೆ.
ರಾತ್ರಿ ಊಟ ಮಾಡಿ ಬಿಮ್ಸ್ ಆವರಣ ಇಂದಿರಾ ಕ್ಯಾಂಟೀನ್ ಆವರಣದ ಕಟ್ಟಡದಲ್ಲಿ ಮಲಗಿದ್ದ ವೇಳೆ ಕಾಮಾಂಧರು ಬಾಯಿಗೆ ಬಟ್ಟೆ ತುರುಕಿ ಹೇಯ ಕೃತ್ಯ ಎಸಗಿ ಕೊಲೆಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಎಪಿಎಂಸಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ