ಸಾಲು ಸಾಲು ಪ್ರತಿಭಟನೆಗೆ ಬೆರಳೆಣಿಕೆಯ ಸ್ಪಂದನೆ

Team Udayavani, Dec 16, 2018, 10:40 AM IST

belgam.jpg

ಬೆಳಗಾವಿ: ಅಧಿವೇಶನ ವೇಳೆ ಬೇಡಿಕೆಯ ಪಟ್ಟಿ ಇಟ್ಟುಕೊಂಡುಶಕ್ತಿ ಕೇಂದ್ರಕ್ಕೆ ನ್ಯಾಯ ಕೇಳಲು ಬಂದಿದ್ದ ಸಾಲು, ಸಾಲು ಪ್ರತಿಭಟನೆಗಳ ಬಗ್ಗೆ ದೋಸ್ತಿ ಸರಕಾರ ಮಾತ್ರ ತಲೆಕೆಡಿಸಿಕೊಂಡಿಲ್ಲ. ಸರಕಾರದ ಯಾವೊಬ್ಬ ಪ್ರತಿನಿಧಿಯಿಂದಲೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಭರವಸೆಗಳನ್ನೇ ನಂಬಿ ಬಂದ ಪ್ರತಿಭಟನಾಕಾರರು ಬಂದ
ದಾರಿಗೆ ಸುಂಕ ಇಲ್ಲ ಎಂಬಂತೆ ವಾಪಸ್ಸಾಗಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದ ಒಳಗೆ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸರಕಾರಕ್ಕೆ ಬಿಸಿ
ಮುಟ್ಟಿಸಲು ಐದು ದಿನಗಳ ಅವಧಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಪ್ರತಿಭಟನೆಗಳು ನಡೆದವು. ಇಡೀ
ಸರಕಾರವೇ ಬೆಳಗಾವಿಯಲ್ಲಿ ಇದ್ದಿದ್ದರಿಂದ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರತಿಭಟನಾಕಾರರಿಗೆ ಕೇವಲ ಭರವಸೆಗಳೇ ಸಿಕ್ಕಿವೆ. ಸರಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆಯೇ ಹೊರತು ಗಟ್ಟಿಯಾಗಿ ಯಾವುದಕ್ಕೂ ಸ್ಪಂದಿಸಿಲ್ಲ.

ಅಧಿಕಾರಿಗಳದ್ದೇ ಭರವಸೆ: ಪ್ರತಿಭಟನೆಯ ಮೂಲಕ ದೋಸ್ತಿ ಸರಕಾರದ ಬುಡ ಅಲ್ಲಾಡಿಸಿದರೆ ನಮ್ಮ ಬೇಡಿಕೆ ಈಡೇರಬಹುದೆಂಬ ಆಶಾಭಾವನೆಯಿಂದ ಹೋರಾಟಗಳು ನಡೆದಿವೆ. ಐದು ದಿನಗಳ ಅವಧಿಯಲ್ಲಿ ಸುಮಾರು 35ಕ್ಕೂ ಹೆಚ್ಚು ಪ್ರತಿಭಟನೆ, ಧರಣಿ, ಹೋರಾಟಗಳು ನಡೆದವು. ಸುವರ್ಣ ವಿಧಾನಸೌಧದ ಪಕ್ಕ ಹಾಗೂ ಎದುರಿನ
ಗುಡ್ಡದಲ್ಲಿರುವ ಕೊಂಡಸಕೊಪ್ಪದಲ್ಲಿ ಪ್ರತಿಭಟನೆಗೆ ಸ್ಥಳ ನಿಗದಿ ಮಾಡಲಾಗಿತ್ತು. ಆದರೆ, ಬೇಡಿಕೆ
ಈಡೇರಿಸಬೇಕೆಂಬ ಕೂಗಿಗೆ ಬೆರಳೆಣಿಕೆಯಷ್ಟು ಮಾತ್ರ ಸ್ಪಂದನೆ ಸಿಕ್ಕಿದ್ದು, ಇನ್ನುಳಿದಂತೆ ಅಧಿಕಾರಿಗಳು ಹಾಗೂ ಪೊಲೀಸರ ಭರವಸೆ ನಂಬಿ ಜನ ವಾಪಸ್ಸಾಗಿದ್ದಾರೆ.

ರೈತರು-ನೌಕರರಿಗೆ ಸಿಎಂ ಅಭಯ: ಕಬ್ಬಿನ ಬಿಲ್‌ ಬಾಕಿ ಹಾಗೂ ಎಫ್‌ಆರ್‌ಪಿ ದರಕ್ಕಾಗಿ ನಡೆದ ಅಹೋರಾತ್ರಿ ಧರಣಿ ಹಾಗೂ ಸುವರ್ಣ ಸೌಧದ ಎದುರು ನಡೆದ ಪ್ರತಿಭಟನಾ ಸ್ಥಳಕ್ಕೆ ಸಕ್ಕರೆ ಸಚಿವ ಕೆ.ಜೆ.ಜಾರ್ಜ್‌ ಬಂದು ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಹೊಸ ಪಿಂಚಣಿ ರದ್ದತಿಗೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಬೃಹತ್‌ ಪ್ರತಿಭಟನೆಗೆ ಸ್ಪಂದಿಸಿ ಸಚಿವರಾದ ಡಿ.ಕೆ. ಶಿವಕುಮಾರ, ಬಂಡೆಪ್ಪ ಖಾಶೆಂಪುರ, ನಾಡಗೌಡ ಹಾಗೂ 12ಕ್ಕೂ ಹೆಚ್ಚು ಶಾಸಕರು ಬಂದಿದ್ದರು. ನಂತರ, ಮುಖ್ಯಮಂತ್ರಿಗಳ ಬಳಿ ನಾಲ್ಕೆçದು ಮುಖಂಡರನ್ನು ಕರೆಸಿ, ಚರ್ಚಿಸಿ ಸೂಕ್ತ ಭರವಸೆ ನೀಡಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಹೊತ್ತುಕೊಂಡು ಬಂದಿದ್ದ ಪ್ರತಿಭಟನಾಕಾರರನ್ನು ಸಚಿವೆ ಜಯಮಾಲಾ ಭೇಟಿಯಾಗಿ ದ್ದಾರೆ. ಇನ್ನುಳಿದಂತೆ ಯಾವೊಬ್ಬ ಸಚಿವರೂ ಪ್ರತಿಭಟನಾ ಸ್ಥಳಕ್ಕೆ ಬಂದಿಲ್ಲ. ಸಮಸ್ಯೆಗಳನ್ನು ಹೊತ್ತು ಬಂದಿದ್ದ ಶಿಕ್ಷಕರನ್ನು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಭೇಟಿಯಾದರು. ಇದಕ್ಕೆ ಪರ್ಯಾಯವಾಗಿ ಬಹುತೇಕ ಪ್ರತಿಭಟನೆಗಳಿಗೆ ವಿರೋಧ ಪಕ್ಷದ ಶಾಸಕರು ಭೇಟಿ ನೀಡಿ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು.

ಘೋಷಣೆ ಕೂಗ್ತಾರೆ-ಹೋಗ್ತಾರೆ: ಸಮಸ್ಯೆಗಳಿದ್ದರೆಅಧಿವೇಶನ ವೇಳೆ ಬೆಳಗಾವಿಯ ಸುವರ್ಣಸೌಧಕ್ಕೆ ಬಂದರೆ ನಮ್ಮ ಬೇಡಿಕೆಗಳು ಈಡೇರುತ್ತವೆ. ಇಡೀ ಸರಕಾರವೇ ಇಲ್ಲಿರುವುದರಿಂದ ತಮ್ಮ ಸಮಸ್ಯೆಗೆ ಸೂಕ್ತ ಪರಿಹಾರ ಸಿಗಬಹುದೆಂಬ ಆಶಾಭವನೆ ಜನರಲ್ಲಿದೆ. ಹೀಗಾಗಿ, ಅಧಿವೇಶನಕ್ಕೆ ತಿಂಗಳ ಮುಂಚೆಯೇ ತಯಾರಿ ನಡೆದಿರುತ್ತದೆ. 10 ದಿನಗಳ ಅಧಿವೇಶನದಲ್ಲಿ ಏನಿಲ್ಲವೆಂದರೂ ಸುಮಾರು 65ಕ್ಕೂ ಹೆಚ್ಚು ಪ್ರತಿಭಟನೆಗಳು ನಡೆಯಲಿವೆ. ಐದು ದಿನಗಳಲ್ಲಿ ಈಗಾಗಲೇ 35 ಪ್ರತಿಭಟನೆಗಳು ಮುಗಿದಿವೆ. ಸೋಮವಾರದಿಂದ ಮತ್ತೆ ಸಾಲು, ಸಾಲು ಪ್ರತಿಭಟನೆಗಳು ನಡೆಯಲಿವೆ. ಇವುಗಳಿಗೆ ಎಷ್ಟರ ಮಟ್ಟಿಗೆ ಮುಖ್ಯಮಂತ್ರಿಗಳು ಸ್ಪಂದಿಸಿ, ಬಗೆಹರಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಸಂಘ-ಸಂಸ್ಥೆಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಐದು ದಿನಗಳಲ್ಲಿ ಸುಮಾರು 35ಕ್ಕೂ ಹೆಚ್ಚು ಪ್ರತಿಭಟ ನೆಗಳು ಆಗಿವೆ. ನಿಗದಿಪಡಿಸಿದ ಪೆಂಡಾಲ್‌ನಲ್ಲಿ ಧರಣಿ, ಪ್ರತಿಭಟನೆಗಳು ನಡೆದಿವೆ. ಆದರೆ, ರ್ಯಾಲಿ, ರಸ್ತೆ ತಡೆ, ಘೇರಾವ್‌, ಪಾದಯಾತ್ರೆ ಹಾಗೂ ಪಥಸಂಚಲನಗಳಿಗೆ ಅವಕಾಶವಿಲ್ಲ.
ಮಹಾಂತೇಶ್ವರ ಜಿದ್ದಿ, ಎಸಿಪಿ ಅಪರಾಧ ವಿಭಾಗ

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.