ಕಲಬುರಗಿ, ಬಳ್ಳಾರಿ ದಾಖಲೆ ತಾಪಮಾನ
Team Udayavani, Mar 6, 2019, 12:30 AM IST
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಬಿಸಿಲಿನ ಝಳ ಏರುತ್ತಿದೆ. ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್ ದಾಖಲಾ ಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾ.7ರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಂಭವವಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯ ಲಿದೆ. ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಎಚ್.ಡಿ. ಕೋಟೆಯಲ್ಲಿ 1 ಸೆಂ.ಮಿ. ಮಳೆಯಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ 14.8 ಡಿ.ಸೆ. ದಾಖಲಾಯಿತು. ತಮಿಳುನಾಡಿನ ಕೆಲ ಭಾಗಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗಬಹುದು.