ನಟಿ ರಾಗಿಣಿ ಉರುಳು ಮತ್ತಷ್ಟು ಬಿಗಿ; ಡ್ರಗ್‌ ಪೆಡ್ಲರ್‌ ನಿಯಾಜ್‌ ಬಂಧನ

 ರಾಗಿಣಿ, ರಾಜಕಾರಣಿಗಳ ಮಕ್ಕಳು, ಸಿಲೆಬ್ರಿಟಿಗಳ ಜತೆ ಸಂಪರ್ಕ

Team Udayavani, Sep 8, 2020, 6:10 AM IST

ನಟಿ ರಾಗಿಣಿ ಉರುಳು ಮತ್ತಷ್ಟು ಬಿಗಿ

ಬೆಂಗಳೂರು: ಚಿತ್ರ ನಟಿ ರಾಗಿಣಿಯನ್ನು ಮತ್ತೆ ಐದು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ರಾಗಿಣಿಯ ಬ್ಯಾಂಕ್‌ ವ್ಯವಹಾರಗಳ ಕುರಿತು ತನಿಖೆ ಚುರುಕುಗೊಳಿಸಿದ್ದಾರೆ.

ಮತ್ತೂಂದೆಡೆ ರಾಗಿಣಿ ಮತ್ತಿತರ ಆರೋಪಿಗಳ ಜತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಕೇರಳ ಮೂಲದ ನಿಯಾಜ್‌ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಬಂಧನಕ್ಕೊಳಗಾಗಿರುವ ಲೂಮ್‌ ಪೆಪ್ಪರ್‌ ಸಾಂಬಾ ಜತೆ ರಾಗಿಣಿ ಹಣಕಾಸಿನ ವ್ಯವಹಾರ ನಡೆಸಿರುವುದು ಗೊತ್ತಾಗಿದೆ. ಆಕೆಯ ಬ್ಯಾಂಕ್‌ ಖಾತೆ ವಿವರ ಮತ್ತು ವಾಟ್ಸ್‌ಆ್ಯಪ್‌ನಲ್ಲಿ ಕೆಲವು ಮಾಹಿತಿ ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಪ್ರಮುಖ ಬೆಳವಣಿಗೆಯಲ್ಲಿ ನಾಲ್ಕನೇ ಆರೋಪಿ, ಉದ್ಯಮಿ ಪ್ರಶಾಂತ್‌ ರಂಕಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಎಂಬಾಕೆಯನ್ನು ಸಿಸಿಬಿ ಪೊಲೀಸರು ಎರಡು ದಿನಗಳಿಂದ ವಿಚಾರಣೆಗೊಳಪಡಿಸಿದ್ದು, ಸೋಮವಾರ ರಾತ್ರಿ ಬಿಟ್ಟು ಕಳುಹಿಸಿದ್ದಾರೆ.

ಕೇರಳ ಮೂಲದ ನಿಯಾಜ್‌ ಹಲವು ವರ್ಷಗಳಿಂದ ಬೆಂಗಳೂರಿನ ಇಂದಿರಾನಗರದಲ್ಲಿ ವಾಸವಾಗಿದ್ದಾನೆ. ರಿಯಲ್‌ ಎಸ್ಟೇಟ್‌ ವ್ಯವಹಾರ ಮತ್ತು ಸೆಕೆಂಡ್‌ ಹ್ಯಾಂಡ್‌ ಕಾರುಗಳ ಮಾರಾಟ ನಡೆಸುವ ಆತ ಇಂದಿರಾನಗರ ಮತ್ತು ವೈಟ್‌ಫೀಲ್ಡ್‌ ಬಳಿ ಕ್ಲಬ್‌ಗಳನ್ನು ನಡೆಸುತ್ತಿದ್ದಾನೆ. ಇದರೊಂದಿಗೆ ಫ್ಯಾಷನ್‌ ಶೋ ಕುರಿತು ಜಾಹೀರಾತು ಪ್ರಕಟಿಸುವ ಜಾಹೀರಾತು ಸಂಸ್ಥೆಯನ್ನೂ ಆತ ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಭರ್ಜರಿ ಕಾರ್ಯಾಚರಣೆ
ಮಾದಕ ವಸ್ತು ದಂಧೆ ಬಗ್ಗೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವ ನಡುವೆಯೇ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಾಲ್ಕೈದು ದಿನಗಳಲ್ಲಿ 28 ಮಂದಿಯನ್ನು ಬಂಧಿಸಿ, 2 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ
ಪೊಲೀಸರ ಕಾರ್ಯಾಚರಣೆಯಲ್ಲಿ ಡಾರ್ಕ್‌ವೆಬ್‌ ಸೈಟ್‌ ಮೂಲಕ ಐಷಾರಾಮಿ ಮಾದಕ ವಸ್ತುಗಳನ್ನು ಖರೀದಿಸಿ ನಗರದಲ್ಲಿ ಮಾರಾಟ ಮಾಡು ತ್ತಿದ್ದ 28 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ತಿಳಿಸಿದ್ದಾರೆ.

ವಶಕ್ಕೆ ಪಡೆದ ಮಾದಕ ವಸ್ತುಗಳ ಪೈಕಿ ಎಂಡಿಎಂಎ, ಎಲ್‌ಎಸ್‌ಡಿ, ಗಾಂಜಾ, ಕೋಕೇನ್‌, ಬ್ರೌನ್‌ ಶುಗರ್‌, ಕ್ರಿಸ್ಟಲ್‌, ಹೈಡ್ರೋ ಗಾಂಜಾ ಸೇರಿವೆ. ಆರೋಪಿಗಳ ಪೈಕಿ ವಿದೇಶಿಯರು, ನೆರೆ ರಾಜ್ಯದವರು, ವಿದ್ಯಾರ್ಥಿಗಳು ಇದ್ದಾರೆ. ಇವರಲ್ಲಿ ಕೆಲವರು ವ್ಯಸನಿಗಳಾಗಿದ್ದು, ಪೆಡ್ಲರ್‌ಗಳಾಗಿ ಬದಲಾಗಿದ್ದಾರೆ. ವಿದ್ಯಾರ್ಥಿಗಳು, ಐಟಿ- ಬಿಟಿ ಉದ್ಯೋಗಿಗಳು, ಯುವ ಸಮೂಹವನ್ನು ಗುರಿಯಾಗಿಸಿಕೊಂಡು ದಂಧೆ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.