6 ಗಂಟೆ ಮೆಟ್ರೋ ಸಂಚಾರ ಸ್ಥಗಿತ: ಲಕ್ಷಾಂತರ ಪ್ರಯಾಣಿಕರು ಕಂಗಾಲು


Team Udayavani, Jul 8, 2017, 3:50 AM IST

7BNP-(16).jpg

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠೆಯ “ನಮ್ಮ ಮೆಟ್ರೋ’ ಸೇವೆ ಪೂರ್ಣ ಪ್ರಮಾಣದ ಸಂಚಾರ ಆರಂಭಿಸಿ ತಿಂಗಳು ಕಳೆಯುವುದರೊಳಗೆ ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ಆರು ಗಂಟೆಗಳ ಕಾಲ ದಿಢೀರ್‌ ಸಂಚಾರ ಸ್ಥಗಿತಗೊಂಡು ಇಡೀ ವ್ಯವಸ್ಥೆಯನ್ನೇ ಅಣಕಿಸುವಂತೆ ಮಾಡಿತ್ತು.

ಗುರುವಾರ ಸಂಜೆ ಮೆಟ್ರೊ ಸಿಬ್ಬಂದಿ ಮತ್ತು ಭದ್ರತಾ ಪಡೆ ನಡುವೆ ತಪಾಸಣೆ ವಿಚಾರದಲ್ಲಿ ನಡೆದ ಕಲಹದಿಂದಾಗಿ ಶುಕ್ರವಾರ ಬೆಳಿಗ್ಗೆ ಮೆಟ್ರೊ ಸಿಬ್ಬಂದಿ ದಿಢೀರ್‌ ಮುಷ್ಕರ ನಡೆಸಿದರು. ಬೆಳಗ್ಗೆ ಆರು ಗಂಟೆಗೆ ಮೆಟ್ರೋದಲ್ಲಿ ಸಂಚರಿಸಲು ಬಂದವರು ಸೇವೆ ಸ್ಥಗಿತಗೊಂಡಿರುವುದು ಕೇಳಿ ಗಲಿಬಿಲಿಗೊಂಡಿದ್ದೇ ಅಷ್ಟೇ ಅಲ್ಲದೆ ಮಧ್ಯಾಹ್ನ 12 ಗಂಟೆವರೆಗೂ ಸೇವೆ ಪುನರಾರಂಭವಾಗದ ಕಾರಣ ಇಡೀ ಬೆಂಗಳೂರು “ಸಂಚಾರ ದಟ್ಟಣೆ’ಯಿಂದ ನಲುಗುವಂತಾಯಿತು. 

ತುಮಕೂರು ರಸ್ತೆ, ಮೈಸೂರು ರಸ್ತೆ, ಕೆಂಪೇಗೌಡ ರಸ್ತೆ, ಮೆಜೆಸ್ಟಿಕ್‌, ನೃಪತುಂಗ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಹತ್ತು -ಹದಿನೈದು ನಿಮಿಷ, ಅರ್ಧ ಗಂಟೆಯಲ್ಲಿ ಒಂದು ದಿಕ್ಕಿನಿಂದ ಮತ್ತೂಂದು ದಿಕ್ಕಿಗೆ ಖಾತರಿ ಪ್ರಯಾಣದ ಲೆಕ್ಕಾಚಾರದಲ್ಲಿ ಮೆಟ್ರೋ ನಿಲ್ದಾಣಗಳಿಗೆ ಆಗಮಿಸಿದ್ದ ಕಾರ್ಮಿಕರು, ನೌಕರರು, ವಿದ್ಯಾರ್ಥಿಗಳು, ಸಾಮಾನ್ಯ ಜನತೆ ದಿಕ್ಕುತೋಚದಂತಾಗಿ ಕಂಗಾಲಾದರು. ಮೆಟ್ರೋ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪರೀಕ್ಷೆ ಬರೆಯಲು, ಸಂದರ್ಶನ ನೀಡಲು, ತುರ್ತು ಸಭೆಗಳಿಗೆ ತೆರಳುವವರು, ಆಸ್ಪತ್ರೆಗೆ ಹೊರಟವರು, ಹೊರ ಊರಿನಿಂದ ಬಂದಿಳಿದವರು ಮತ್ತು ಊರುಗಳಿಗೆ ಹೊರಟವರು ಸೇರಿದಂತೆ ಸಾವಿರಾರು ಜನರಿಗೆ ಮೆಟ್ರೋ ಸೇವೆ ವ್ಯತ್ಯಯದ ಬಿಸಿ ತಟ್ಟಿತು. ಇಬ್ಬರ ಜಗಳಕ್ಕೆ ಇಡೀ ಸೇವೆಯನ್ನೇ ಸ್ಥಗಿತಗೊಳಿಸಿದ್ದು ಎಷ್ಟು ಸರಿ? ಯಾರದೋ ಹಿತಾಸಕ್ತಿಗೆ ಲಕ್ಷಾಂತರ ಜನರಿಗೆ ತೊಂದರೆ ಉಂಟುಮಾಡುವುದು ಯಾವ ನ್ಯಾಯ ಎಂದು ಬಿಎಂಆರ್‌ಸಿಗೆ ಹಿಡಿಶಾಪ ಹಾಕಿದರು.

ಮೆಟ್ರೋ ಸೇವೆ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರ್ಯಾಯ ಸಂಚಾರ ವ್ಯವಸ್ಥೆಗಾಗಿ ಪರದಾಡುವಂತಾಯಿತು. ಬಸ್ಸು, ಆಟೋ, ಟ್ಯಾಕ್ಸಿಗೆ ಮೊರೆ ಹೋಗುವಂತಾಯಿತು. ಆದರೂ ಏಕಾಏಕಿ ಲಕ್ಷಾಂತರ ಪ್ರಯಾಣಿಕರು ಒಮ್ಮೆಲೆ ಬಸ್ಸು, ಆಟೋ  ಆ್ಯಪ್‌ ಆಧಾರಿತ ಟ್ಯಾಕ್ಸಿಗಳತ್ತ ಬಂದಿದ್ದರಿಂದ ಅಲ್ಲೂ ದಟ್ಟಣೆ ಹೆಚ್ಚಾಗಿತ್ತು.

ಸಿಬ್ಬಂದಿಯ ದಿಢೀರ್‌ ಮುಷ್ಕರ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸ್‌ ಹಾಗೂ ಬಿಎಂಆರ್‌ಸಿಎಲ್‌ ಅಧಿಕಾರಿಗಳು ಸಂಧಾನ ಮಾತುಕತೆಗೆ ಮುಂದಾದರು. ಮುಷ್ಕರ ನಿರತರೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನಂತರ ಸಿಬ್ಬಂದಿ ಪ್ರತಿಭಟನೆ ಕೈಬಿಟ್ಟರು. ಮಧ್ಯಾಹ್ನ 12ರ ನಂತರ ಮೆಟ್ರೋ ಸಂಚಾರ ಯಥಾಸ್ಥಿತಿಗೆ ಬಂದಿತು.

ಎಸ್ಮಾ ಜಾರಿ: ಆದರೆ, ಮುಂದೆ ಇಂತಹ ಘಟನೆ ಮರುಕಳಿಸದಿರಲು ರಾಜ್ಯ ಸರ್ಕಾರ ಎಸ್ಮಾ ಜಾರಿ ಮಾಡಿ ಆದೇಶ ಹೊರಡಿಸಿತು. “ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ-2013’ರ ಕಲಂ 3ರ ಅನ್ವಯ ನಗರದ ನಾಗರಿಕರ ಹಿತದೃಷ್ಟಿಯಿಂದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ)ದ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾವುದೇ ರೀತಿಯ ಮುಷ್ಕರ ಮಾಡುವುದನ್ನು ನಿಷೇಧಿಸಿ ನಗರಾಭಿವೃದ್ಧಿ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿತು.

ನಡೆದಿದ್ದೇನು?: ಗುರುವಾರ ಸರ್‌.ಎಂ.ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣದಲ್ಲಿ ಸಿಬ್ಬಂದಿಯೊಬ್ಬ ತಪಾಸಣೆಗೆ ಒಳಪಡಲಿಲ್ಲ ಎಂದು ಕೈಗಾರಿಕಾ ಭದ್ರತಾ ಪೇದೆ ಆಕ್ಷೇಪ ವ್ಯಕ್ತಪಡಿಸಿದ್ದ. ಇದು ಮೆಟ್ರೋ ಸಿಬ್ಬಂದಿ ಹಾಗೂ ಕೈಗಾರಿಕೆ ಭದ್ರತಾ ಪಡೆಯ ನಡುವಿನ ಸಂಘರ್ಷವಾಗಿ ಮಾರ್ಪಟ್ಟು ಅತಿರೇಕಕ್ಕೆ ಹೋಗಿ ಶುಕ್ರವಾರ ಮೆಟ್ರೋ ಬಂದ್‌ ಹಂತ ತಲುಪಿತ್ತು.

ಟಾಪ್ ನ್ಯೂಸ್

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

finance minister

5 ಲಕ್ಷದವರೆಗಿನ ಠೇವಣಿ ವಿಮೆ ಮರುಪಾವತಿ

education meet

ಅಸ್ಸಾಂ ಸಿಎಂ ಭೇಟಿಯಾದ ಅಶ್ವತ್ಥ ನಾರಾಯಣ

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

hdk

2023ಕ್ಕೆ ಜೆಡಿಎಸ್‌ಗೆ ಅಧಿಕಾರ ಖಚಿತ: ಎಚ್ಡಿಕೆ

ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

21protest

ಸರ್ಕಾರದ ವಿರುದ್ದ ವಿದ್ಯಾರ್ಥಿಗಳ ತೀವ್ರ ಆಕ್ರೋಶ

ನಮ್ಮ ಮೆಟ್ರೋ

ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.