Bharat Jodo ‘ಕೆಜಿಎಫ್ 2’ ಕೇಸ್; ರಾಹುಲ್, ಇತರರ ವಿರುದ್ಧದ ಎಫ್ಐಆರ್ ತಡೆ ವಿಸ್ತರಣೆ
Team Udayavani, Jun 16, 2023, 9:08 PM IST
ಬೆಂಗಳೂರು: ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನಾಥೆ ವಿರುದ್ಧದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆಯನ್ನು ಜೂನ್ 23 ರವರೆಗೆ ವಿಸ್ತರಿಸಿದೆ.
ಲಹರಿ ಮ್ಯೂಸಿಕ್, ಹಕ್ಕುಸ್ವಾಮ್ಯ ಹೊಂದಿರುವ ಚಿತ್ರದ ಸಂಗೀತವನ್ನು ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ಪ್ರಚಾರದ ವಿಡಿಯೋದಲ್ಲಿ ಬಳಸಿದೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳನ್ನು ನಿರ್ಬಂಧಿಸುವಂತೆ ನಿರ್ದೇಶಿಸಿದ ಹಕ್ಕುಸ್ವಾಮ್ಯ ಉಲ್ಲಂಘನೆಯ ವಿರುದ್ಧ ಎಂಆರ್ಟಿ ಮ್ಯೂಸಿಕ್ ವಾಣಿಜ್ಯ ನ್ಯಾಯಾಲಯವನ್ನು ಸಂಪರ್ಕಿಸಿತ್ತು.
ಆಕ್ಷೇಪಾರ್ಹ ವಿಡಿಯೋಗಳನ್ನು ತೆಗೆದುಹಾಕಲಾಗುವುದು ಎಂದು ಪಕ್ಷವು ಭರವಸೆ ನೀಡಿದ ನಂತರ ಅದನ್ನು ಹೈಕೋರ್ಟ್ ಹಿಂಪಡೆಯಿತು. ಎಂಆರ್ಟಿ ಮ್ಯೂಸಿಕ್ ನಂತರ ಉಲ್ಲಂಘನೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಸಲ್ಲಿಸಿತು, ಅದನ್ನು ಪಕ್ಷವು ಪ್ರಶ್ನಿಸಿತ್ತು. ಶುಕ್ರವಾರ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ