
ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು
Team Udayavani, Mar 30, 2023, 5:19 AM IST

ಬೆಂಗಳೂರು: ಮಂಡ್ಯ ಜಿಲ್ಲೆಯ ಬೇವಿನಹಳ್ಳಿಯಲ್ಲಿ ಮಂಗಳವಾರ ನಡೆದ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರು ಮತ್ತು ಜನರತ್ತ 500 ರೂ. ನೋಟುಗಳನ್ನು ಎಸೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ಸಲ್ಲಿಸಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ನೇತೃತ್ವದ ನಿಯೋಗ ದೂರು ಸಲ್ಲಿಸಿದ್ದು, ಡಿ.ಕೆ.ಶಿವಕುಮಾರ್ ಮತ್ತು ರಮೇಶ ಮತದಾರರ ಮೇಲೆ ಪ್ರಭಾವ ಬೀರಲು ಮುಂದಾಗಿದ್ದಾರೆ ಎಂದು ಆರೋಪಿಸಿದೆ.
ಇದರ ಜತೆಗೆ, ಶಾಂತಿಭಂಗ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಚಿತ್ರದುರ್ಗ ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ಜಾಕೀರ್ ಹುಸೇನ್ ವಿರುದ್ಧವೂ ಬಿಜೆಪಿ ದೂರು ದಾಖಲಿಸಿದೆ.
ಮುಸ್ಲಿಮರ ಮೀಸ ಲಾತಿ ರದ್ದು ಮಾಡಿದ ಸಂಬಂಧ ಪ್ರತಿಭಟನೆಯಲ್ಲಿ ಮಾತನಾಡಿದ ಜಾಕೀರ್ ಹುಸೇನ್, ನಮ್ಮ ಹಕ್ಕನ್ನು ಹೀನಾಯವಾಗಿ ಕಸಿದುಕೊಳ್ಳ ಲಾಗಿದೆ. ಅದನ್ನು ಕೊಡದಿದ್ದರೆ ಸಿಎಂ ಬೊಮ್ಮಾಯಿಯವರ ಬಟ್ಟೆ ಬಿಚ್ಚಿಸುತ್ತೇವೆ; ಹಿಜಾಬ್, ಆಜಾನ್‌ಗೆ ತಲೆ ಕೊಟ್ಟೆವು. ಮೀಸಲಾತಿ ವಿಚಾರದಲ್ಲಿ ತಲೆ ಹೋದರೂ ಚಿಂತೆಯಿಲ್ಲ. ಜೈಲಿಗೆ ಹೋದರೂ ಚಿಂತೆಯಿಲ್ಲ. ನಾವೆಲ್ಲ ಉಗ್ರವಾಗಿ ಹೋರಾಡುತ್ತೇವೆ ಎಂದು ಹೇಳಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮನವಿ ಮಾಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!

ಕೊಟ್ಟಿಗೆಹಾರ: ಮನೆಯ ಬಳಿಯೇ ಅವಿತು ಕುಳಿತ್ತಿತ್ತು ಭಾರಿ ಗಾತ್ರದ ಕಾಳಿಂಗ ಸರ್ಪ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ