ಕಮಲ- ಕೈ ಜಟಾಪಟಿ: ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ವಿಳಂಬಕ್ಕೆ ಕಿಡಿ

Team Udayavani, Feb 22, 2023, 7:20 AM IST

ಕಮಲ- ಕೈ ಜಟಾಪಟಿ: ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ವಿಳಂಬಕ್ಕೆ ಕಿಡಿ

ಬೆಂಗಳೂರು: ರಾಜ್ಯದ 55 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ವರ್ಷ ಕಳೆದರೂ ಅಧ್ಯಕ್ಷ-ಉಪಾಧ್ಯಕ್ಷರು ಆಯ್ಕೆಯಾಗದ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಕಾಂಗ್ರೆಸ್‌ ಸದಸ್ಯರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವಿಚಾರವು ಬಿಜೆಪಿ-ಕಾಂಗ್ರೆಸ್‌ ಸದಸ್ಯರ ನಡುವೆ ಜಟಾಪಟಿಗೆ ಕಾರಣವಾಗಿ ಕೊನೆಗೆ ಕಾಂಗ್ರೆಸ್‌ ಸದಸ್ಯರು ಸಭಾತ್ಯಾಗ ನಡೆಸಿದ ಪ್ರಸಂಗ ಮೇಲ್ಮನೆಯಲ್ಲಿ ಮಂಗಳವಾರ ನಡೆಯಿತು.

ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಎಸ್‌. ರವಿ ಮಾತನಾಡಿ, ರಾಜ್ಯದ 55 ನಗರ ಸ್ಥಳೀಯ ಸಂಸ್ಥೆಗಳಿಗೆ ವರ್ಷವಾದರೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಇದರಿಂದ ಆಡಳಿತ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಅಡ್ಡಿಯಾಗುತ್ತಿದೆ. ಸರಕಾರ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವ ನೆಪ ಹೇಳುತ್ತಿದೆ ಎಂದು ವಾಗ್ಧಾಳಿ ನಡೆಸಿದರು.

ಅಭಿವೃದ್ಧಿಗೆ ಹಿನ್ನಡೆ ಆಗುತ್ತಿಲ್ಲ
ಇದಕ್ಕೆ ಉತ್ತರಿಸಿದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌, ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದೆ. 12 ತಿಂಗಳುಗಳಿಂದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಜತೆಗೆ ಈಗಾಗಲೇ ಅಧ್ಯಕ್ಷ-ಉಪಾಧ್ಯಕ್ಷರ ಮೊದಲ ಅವಧಿ 30 ತಿಂಗಳು ಆಗಿರುವ ಕಡೆಯೂ ಮೀಸಲಾತಿ ನಿಗದಿಪಡಿಸಬೇಕಾಗಿದೆ. ಆದಷ್ಟು ಬೇಗ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಕ್ರಮ ಕೈಗೊಳ್ಳಲಾಗುವುದು. ಚುನಾಯಿತ ಜನಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದ ಕಾರಣ ಆಡಳಿತ, ಅಭಿವೃದ್ಧಿಗೆ ಹಿನ್ನಡೆ ಆಗುತ್ತಿಲ್ಲ. ಎಲ್ಲ ಕಡೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಉಪ್ಪು ಖಾರ ಹಾಕಿ ನೆಕ್ಕಬೇಕು
ಇದಕ್ಕೆ ಸಮಾಧಾನಗೊಳ್ಳದ ಎಸ್‌. ರವಿ, ಸರಕಾರದ ಉತ್ತರ ಸಮರ್ಪಕವಾಗಿಲ್ಲ. ಇಂತಹ ಉತ್ತರ ನೋಡಿ ಸುಮ್ಮನೆ ಕುಳಿತುಕೊಳ್ಳುವುದು ಹೇಗೆ? ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಯೋಗ್ಯತೆ ಈ ಸರಕಾರಕ್ಕಿಲ್ಲ. ಇನ್ನು 15 ದಿನಗಳಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗ ಏನೂ ಮಾಡಲು ಆಗುವುದಿಲ್ಲ. ಸರಕಾರದ ಈ ಉತ್ತರಕ್ಕೆ ಉಪ್ಪು ಖಾರ ಹಾಕಿ ನೆಕ್ಕಬೇಕಷ್ಟೆ ಎಂದು ಹರಿಹಾಯ್ದರು. ಇದರಿಂದ ಕೋಪಗೊಂಡ ಆಡಳಿತ ಪಕ್ಷದ ಸದಸ್ಯರು ಎಸ್‌. ರವಿ ವಿರುದ್ಧ ಮುಗಿಬಿದ್ದರು. ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಚಿವರಾದ ಮುರುಗೇಶ ನಿರಾಣಿ, ಎಸ್‌.ಟಿ. ಸೋಮಶೇಖರ್‌, ಭೈರತಿ ಬಸವರಾಜು ಅವರು ಎಂಟಿಬಿ ನಾಗರಾಜ್‌ ಬೆಂಬಲಕ್ಕೆ ನಿಂತರು. ಇದಕ್ಕೆ ಕಾಂಗ್ರೆಸ್‌ ಸದಸ್ಯರು, ಇಲಾಖೆಯ ಸಚಿವರು ಸಮರ್ಥರಿದ್ದಾರೆ. ಐದಾರು ಸಚಿವರು ಎದ್ದುನಿಂತು ಉತ್ತರ ಕೊಟ್ಟರೆ ನಾವು ಕೇಳುವುದಿಲ್ಲ. ಸಚಿವರಿಗೆ ಉತ್ತರ ಕೊಡಲು ಅಧಿಕಾರವಿದೆ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್‌ ಸಭಾತ್ಯಾಗ
ಹಿಂದುಳಿದ ವರ್ಗಗಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾ| ಭಕ್ತವತ್ಸಲ ಆಯೋಗದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಸಮರ್ಥನೆ ನೀಡಿದರು.

ನ್ಯಾಯಾಲಯ, ನ್ಯಾ| ಭಕ್ತವತ್ಸಲ ಸಮಿತಿ ನೆಪ ಹೇಳುತ್ತಿರುವ ಸರಕಾರವು ಹಿಂದುಳಿದ ವರ್ಗಗಳ ವಿರೋಧಿ, ಸ್ಥಳೀಯ ಆಡಳಿತ ಸಂಸ್ಥೆಗಳ ವಿರೋಧಿ ಎಂದು ಧಿಕ್ಕಾರ ಕೂಗಿದ ಕಾಂಗ್ರೆಸ್‌ ಸದಸ್ಯರು ಸಭಾತ್ಯಾಗ ನಡೆಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.