Udayavni Special

ಬಿಜೆಪಿಗೆ ಹೇಳುವವರು ಕೇಳುವವರು ಯಾರೂ ಇಲ್ಲ, ಭ್ರಷ್ಟಾಚಾರ ವಿಪರೀತವಾಗಿದೆ: ‌ರಾಮಲಿಂಗ ರೆಡ್ಡಿ


Team Udayavani, Jan 3, 2021, 3:31 PM IST

ಬಿಜೆಪಿಗೆ ಹೇಳುವವರು ಕೇಳುವವರು ಯಾರೂ ಇಲ್ಲ, ಭ್ರಷ್ಟಾಚಾರ ವಿಪರೀತವಾಗಿದೆ: ‌ರಾಮಲಿಂಗ ರೆಡ್ಡಿ

ಬೆಂಗಳೂರು: ಇವತ್ತು ಬಿಜೆಪಿಗೆ ಹೇಳುವವರು ಕೇಳುವವರು ಯಾರು ಇಲ್ಲ.  ಅವರು ನಡೆದಿದ್ದೆ ದಾರಿ ಅಂದುಕೊಂಡಿದ್ದಾರೆ. ವಿರೋಧ ಪಕ್ಷಗಳನ್ನು ಮಟ್ಟ ಹಾಕಲು ಹೊರಟಿದ್ದಾರೆ. ಎಲ್ಲರನ್ನೂ ಆಮಿಷ ಒಡ್ಡಿ ಬಿಜೆಪಿಗೆ ಸೆಳೆಯುತ್ತಿದ್ದಾರೆ ಎಂದು ಮಾಜಿ ಸಚಿವ ‌ರಾಮಲಿಂಗ ರೆಡ್ಡಿ ಹೇಳಿದರು.

ಕಾಂಗ್ರೆಸ್ ಬೆಂಗಳೂರು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಆಡಳಿತ ವಿರೋಧ ಪಕ್ಷ ಎರಡು ಇರಬೇಕು. ಆದರೆ ಬಿಜೆಪಿಯವರು ತಮ್ಮ ಲೋಪ ಮುಚ್ಚಿಕೊಳ್ಳಲು ಆಮಿಷ ಒಡ್ಡುತ್ತಿದ್ದಾರೆ. ಭ್ರಷ್ಟಾಚಾರ ಇವತ್ತು ವಿಪರೀತವಾಗಿದೆ. ಎಲ್ಲಿ ನೋಡಿದರೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.

ರಾಜ್ಯದಲ್ಲಿ 25 ಬಿಜೆಪಿ‌ ಸಂಸದರಿದ್ದಾರೆ. ಆದರೆ ಒಬ್ಬರಿಗೂ ಮೋದಿ ಎದುರು ಮಾತನಾಡುವ ತಾಕತ್ತಿಲ್ಲ. ನಮ್ಮ ಜಿಎಸ್ ಟಿ ಹಣ ಕೊಟ್ಟಿಲ್ಲ, ನೆರೆ,ಬರದ ಹಣ ಕೊಡಲು ಕೇಂದ್ರಕ್ಕೆ ಸಾಧ್ಯವಾಗಿಲ್ಲ.  ನಮ್ಮ ಹಣ ಕೇಳಿದರೆ ಆರ್ ಬಿ ಐ ಹತ್ರ ಸಾಲ ಮಾಡಿ ಎನ್ನುತ್ತಾರೆ ಎಂದು ಟೀಕಿಸಿದರು.

ಇದನ್ನೂ ಓದಿ:ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ

ರೈತರ ಹೋರಾಟಕ್ಕೆ ಬಿಜೆಪಿಯವರ ಖಲಿಸ್ತಾನದ ಬಣ್ಣ ಕಟ್ಟಿದ್ದಾರೆ. ಹೀಗಾಗಿ ಬಿಜೆಪಿ ವಿರುದ್ಧ ಹೋರಾಟ ‌ ಮಾಡಬೇಕಿದೆ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೊಗುವ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಮಿಷನ್ 2022 ಮಾಡುತ್ತಿದಾರೆ, ಆದರೆ ಅದಕ್ಕೆ‌ ಹಣವನ್ನೇ ಮೀಸಲಿಟ್ಟಿಲ್ಲ. ಹಣವನ್ನೇ ಇಡದೇ ಬಿಜೆಪಿ ಸರ್ಕಾರ ಮಿಷನ್ 2022 ಘೋಷಿಸಿದೆ. ನಾವು ಈ ಬಗ್ಗೆ ಹೋರಾಟ ಮಾಡಿದರೆ ಪತ್ರಿಕೆಗಳಲ್ಲಿ ಬರೆಯಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಅನೇಕ ಗುಂಪುಗಳಿವೆ, ಬಿಜೆಪಿ ನಾಯಕರಿಗೆ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ನಮ್ಮಲ್ಲೂ ಗುಂಪುಗಳಿವೆ, ಆದರೆ ಬಿಜೆಪಿಯಷ್ಟಿಲ್ಲ, ಅಲ್ಲಿ ಗುಂಪುಗಾರಿಕೆ ಹೆಚ್ಚಿದೆ. ಹಾಗಾಗಿ ಸಂಪುಟ ವಿಸ್ತರಣೆಯನ್ನೇ ಮಾಡಲಾಗಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ:  ಜೀರೋ ಟ್ರಾಫಿಕ್ ನಲ್ಲಿ ಕೇಂದ್ರ ಸಚಿವ ಸದಾನಂದ ಗೌಡರು ಬೆಂಗಳೂರಿಗೆ ಶಿಫ್ಟ್

ಬಿಜೆಪಿ ಈ ಹಿಂದೆ ಮನುವಾದ ಅನುಸರಣೆ ಮಾಡುತ್ತಿತ್ತು. ಈಗ ಬಿಜೆಪಿ ‘ಮನೀ’ ವಾದ ಅನುಸರಿಸುತ್ತಿದೆ ಎಂದು ಟೀಕಿಸಿದ ಅವರು, ಯಡಿಯೂರಪ್ಪ ಡಾಕ್ಟರ್ ಯಡಿಯೂರಪ್ಪ ಅಂತ ಹಾಕಿಕೊಳ್ಳುವುದನ್ನೇ ಬಿಟ್ಟರ ಅಂತಹ ಕಂಪನಿ ಅವರಿಗೆ ಡಾಕ್ಟರೇಟ್ ಕೊಟ್ಟಿತ್ತು. ಈಗ ಮೋದಿಗೂ ಅಮೆರಿಕಾದ ಅವಾರ್ಡ್ ಕೊಟ್ಟಿದ್ದಾರೆ, ಟ್ರಂಪ್ ಸೋಲೋದಕ್ಕೆ ಓಟ್ ಕೊಡಿಸಿದರಲ್ಲ, ಅದಕ್ಕೇ ಅವಾರ್ಡ್ ಕೊಟ್ಟಿದ್ದಾರೆ. ಬಿಜೆಪಿಯವರು ಎಂದರೆ ಡೋಂಗಿಗಳು ಎಂದು ರಾಮಲಿಂಗಾರೆಡ್ಡಿ ಟೀಕಿಸಿದರು.

ಟಾಪ್ ನ್ಯೂಸ್

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

FB name change

ಫೇಸ್ ಬುಕ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ಜೂಕರ್‌ಬರ್ಗ್‌..!

bundh

ಆಸ್ಪತ್ರೆ ಹೋರಾಟ ಸಮಿತಿಯಿಂದ 22 ರಂದು ಶೃಂಗೇರಿ ಬಂದ್‌ ಕರೆ

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

basavana-gowdddd

5 ಸಾವಿರ ಹಿಂದೂ ಸ್ಲಂ ಕುಟುಂಬಗಳಿಗೆ ಯತ್ನಾಳ್ ದೀಪಾವಳಿ ಉಡುಗೊರೆ

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

1-z

ಪ್ರೇಮ ವೈಫಲ್ಯ : ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

19-ctd-4

ಮುಂದಿನ ಶರಣ ಸಂಸ್ಕೃತಿ ಉತ್ಸವದ ಗೌರವ ಅಧ್ಯಕ್ಷರಾಗಿ ವನಶ್ರೀ ಮಠದ ಸ್ವಾಮೀಜಿ ಆಯ್ಕೆ

ಯುವಸಮೂಹದ ಮೇಲಿದೆ ದೇಶದ ಜವಾಬ್ದಾರಿ: ನ್ಯಾ| ನಾಗೇಶ್‌

ಯುವಸಮೂಹದ ಮೇಲಿದೆ ದೇಶದ ಜವಾಬ್ದಾರಿ: ನ್ಯಾ| ನಾಗೇಶ್‌

19-ctd-3

ತಿಪ್ಪಾರೆಡ್ಡಿಗೆ ಆದ ಅನ್ಯಾಯ ಸರಿಪಡಿಸಲು ಯತ್ನ

1-m

ಖ್ಯಾತ ನಾಣ್ಯ ಸಂಗ್ರಾಹಕ ಎಚ್‌. ಖಂಡೋಬ ರಾವ್‌ಗೆ ಅಭಿನಂದನೆ,ಅಮೂಲ್ಯ ಸಿರಿ ಗ್ರಂಥ ಬಿಡುಗಡೆ

ಕಲ್ಯಾ ಬೆಟ್ಟದಲ್ಲಿರುವ ನಂದಿ ವಿಗ್ರಹ

ಪ್ರವಾಸೋದ್ಯಮ ಇಲಾಖೆಗೆ ಕೈಗೆಟುಕದ ಕಲ್ಯಾ ಬೆಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.