
Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ
Team Udayavani, Jun 6, 2023, 12:48 PM IST

ಬೆಂಗಳೂರು: ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದವರು ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ ಎಂದರು.
ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ತಂದು ಹೊರಟರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆ ಎಂದರು. 2018 ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ