ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿ.ಕೆ.ಶಿವಕುಮಾರ್ ಕಿಡಿ
ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಬಿಬಿಎಂಪಿ ಮೀಸಲಾತಿ ಪ್ರಕಟ
Team Udayavani, Aug 5, 2022, 6:34 PM IST
ಬೆಂಗಳೂರು:‘ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಮೋಸ ಮಾಡಿದೆ. ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ’ ಎಂದು ಕಿಡಿ ಕಾರಿದರು.
‘ಬಿಜೆಪಿಯವರು ಏನೇ ಮಾಡಲಿ, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರ ನಿರ್ಧಾರ ಖಂಡಿಸಿ ಕಾಂಗ್ರೆಸ್ ನಾಯಕರು ನಗರಾಭಿವೃದ್ಧಿ ಕಚೇರಿಗೆ ಹೋಗಿ ಅಲ್ಲಿ ‘ಬಿಜೆಪಿ ಕಚೇರಿ’ ಎಂದು ನಾಮಫಲಕ ಹಾಕಿ ಬಂದಿದ್ದಾರೆ. ಇದು ನಮ್ಮ ಪಕ್ಷದ ಒಗ್ಗಟ್ಟಿನ ಹೋರಾಟ. ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಬೆಂಗಳೂರು ನಾಯಕರ ಹೋರಾಟ ಮುಂದುವರಿಯಲಿದೆ. ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ