BJP, JDS ದೋಸ್ತಿ ಆರಂಭ: ಎಂಎಲ್ಸಿ ಸ್ಥಾನ ದಳಕ್ಕೆ ನೀಡಿದ ಬಿಜೆಪಿ
Team Udayavani, Jan 22, 2024, 12:06 AM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮೈತ್ರಿಗೆ ವಿಧ್ಯುಕ್ತ ಚಾಲನೆ ದೊರೆತಿದೆ. ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಉಭಯ ಪಕ್ಷಗಳ ನಾಯಕರ ಸಭೆ ರವಿವಾರ ನಡೆದಿದ್ದು, ವಿಧಾನ ಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ನ ಎ.ಪಿ.ರಂಗನಾಥ್ರನ್ನು ಕಣಕ್ಕಿಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.