ಜೂನ್‌ 1ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ?

Team Udayavani, May 27, 2019, 6:03 AM IST

ಬೆಂಗಳೂರು: ಮೇ 29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಬೆನ್ನಲ್ಲೇ ಜೂ.1ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ.
ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸಮಾರಂಭ ಮುಗಿದ ನಂತರ ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ಲೋಕಸಭಾ ಚುನಾವಣೆ ಫ‌ಲಿತಾಂಶದ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಿಲುವು ಆಧರಿಸಿ ಮುಂದಿನ ಹೆಜ್ಜೆ ಇಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿ ಯೂರಪ್ಪ ಹೇಳಿದ್ದರೂ ಕಾಂಗ್ರೆಸ್‌ ಶಾಸಕರು ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವುದು ಕುತೂ ಹಲ ಮೂಡಿಸಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ