ಜೋಶಿಗೆ ಉತ್ತರಾಖಂಡ ಹೊಣೆ
Team Udayavani, Sep 9, 2021, 7:40 AM IST
ಹೊಸದಿಲ್ಲಿ: ಮುಂದಿನ ವರ್ಷಾ ರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈಗಲೇ ಸಿದ್ಧತೆ ಆರಂಭಿಸಿರು ವ ಬಿಜೆಪಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ 8 ಮಂದಿ ಹಿರಿಯ ನಾಯಕರನ್ನು ಉಸ್ತುವಾರಿಗಳನ್ನಾಗಿ ನೇಮಿಸಿದೆ.
ಉತ್ತರ ಪ್ರದೇಶಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನಿಯೋಜಿಸ ಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವರಾದ ಅನುರಾಗ್ ಸಿಂಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಅನ್ನಪೂರ್ಣಾ ದೇವಿ, ಹರಿಯಾಣದ ಮಾಜಿ ಸಚಿವ ಕ್ಯಾ| ಅಭಿಮನ್ಯು, ರಾಜ್ಯಸಭಾ ಸದಸ್ಯರಾಗಿರುವ ಸರೋಜ್ ಪಾಂಡೆ, ವಿವೇಕ್ ಠಾಕೂರ್ ಸಹ ಉಸ್ತುವಾರಿಗಳಾಗಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಉತ್ತರಾಖಂಡದ ಹೊಣೆ ನೀಡಲಾಗಿದೆ. ಅವರ ಜತೆಗೆ ಸಂಸದ ಲಾಕೆಟ್ ಚಟರ್ಜಿ, ವಕ್ತಾರ ಆರ್.ಪಿ. ಸಿಂಗ್ ಅವರನ್ನು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು