ಸತೀಶ್ ಜಾರಕಿಹೊಳಿ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ
Team Udayavani, Nov 9, 2022, 2:36 PM IST
ಬೆಳಗಾವಿ: ಹಿಂದೂ ಪದದ ಕುರಿತು ವಿವಾದಾತ್ಮಕ ನೀಡದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದು, ನಗರದಲ್ಲಿ ಸತೀಶ ಜಾರಕಿಹೊಳಿ ಅವರ ಪ್ರತಿಕೃತಿ ದಹಿಸಿ ಬಿಜೆಪಿ ಕಾರ್ಯಕರ್ತರು ಆಕ್ರೊಶ ವ್ಯಕ್ತಪಡಿಸಿದರು.
ಶಾಸಕರಾದ ಅಭಯ ಪಾಟೀಲ, ಅನಿಲ್ ಬೆನಕೆ, ಮಹಾಂತೇಶ ದೊಡಗೌಡ್ರ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಕೆಂಡಾಮಂಡಲರಾದರು. ಕೂಡಲೇ ಸತೀಶ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ನಗರದ ರಾಣಿ ಚನ್ನಮ್ಮಾ ವೃತ್ತದಲ್ಲಿ ಸತೀಶ್ ಜಾರಕಿಹೊಳಿ ಪ್ರತಿಕೃತಿ ಹಿಡಿದು ಧಿಕ್ಕಾರ ಕೂಗಿದರು. ಬೆಳಗಾವಿ ನಗರ ಹಾಗೂ ಗ್ರಾಮೀಣ ಜಿಲ್ಲಾ ಬಿಜೆಪಿ ಘಟಕದಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸತೀಶ್ ಜಾರಕಿಹೊಳಿ ಹೇಳಿಕೆ ಹಿಂಪಡೆಯುವಂತೆ ಒತ್ತಾಯಿಸಿದರು. ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ