ಸಿದ್ದರಾಮಯ್ಯ ,ಕಾಂಗ್ರೆಸ್ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದೆ: ನಳಿನ್ ಕುಮಾರ್ ಕಟೀಲ್


Team Udayavani, Jun 7, 2022, 7:48 PM IST

ಸಿದ್ದರಾಮಯ್ಯ ,ಕಾಂಗ್ರೆಸ್ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದೆ: ನಳಿನ್ ಕುಮಾರ್ ಕಟೀಲ್

ಬೈಲಹೊಂಗಲ:  ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನ, ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನ ಬಿಜೆಪಿ ತೆಕ್ಕೆಗೆ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳವಾರ ಪಟ್ಟಣದ ವಿಯಜ ಸೋಶಿಯಲ್ ಕ್ಲಬ್‌ನಲ್ಲಿ ಪಧವೀದರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ತೆಕ್ಕೆಗೆ ಬಿದ್ದಿದ್ದು ಈ ಬಾರಿ ನಾಲ್ಕು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರುವುದರೊಂದಿಗೆ ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಗೆಲ್ಲಲಿದ್ದೇವೆ ಕಾದು ನೋಡಿ ಎಂದರಲ್ಲದೇ ಸಂಖ್ಯಾಬಲ ಕೊರತೆ ಇದ್ದರೂ ಗೆಲುವು ನಿಶ್ಚಿತ ಎಂದರು.

ಬಸವರಾಜ ಹೊರಟ್ಟಿ ಅವರು ಸುದೀರ್ಘವಾಗಿ ಪರಿಷತ್‌ ನಲ್ಲಿ 42 ವರ್ಷಗಳ ಕಾಲ ಆಯ್ಕೆಯಾಗುತ್ತಾ ಬಂದಿದ್ದು, ಈ ಬಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ಗೆಲುವು ಕೂಡ ನಿಶ್ವಿತ ಎಂದರು.

ಶಿಕ್ಷಕರಿಗೆ ಮತ್ತು ಪದವೀಧರರಿಗೆ ನ್ಯಾಯ ಒದಗಿಸಿದ ಯಾವುದಾದರೂ ಸರ್ಕಾರ ಇದ್ದರೆ ಅದು ಬಿಜೆಪಿ ಸರ್ಕಾರವಾಗಿದ್ದು 5,6,7 ನೇ ವೇತನ ಜಾರಿಗೆ ತರುವ ಮೂಲಕ ಶಿಕ್ಷಕರ ಸಮಸ್ಯೆಯನ್ನು ಹೋಗಲಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಅರುಣ ಶಹಾಪುರ ಮತ್ತು ನಿರಾಣಿಯವರು  ಪರಿಷತ್ತಿನಲ್ಲಿ ಶಿಕ್ಷಕರ, ಪಧವೀದರರ ಸಮಸ್ಯೆಗಳ ಕುರಿತು ಧ್ವನಿ ಎತ್ತಿ ಅವರ ಕೂಗಿಗೆ ಸ್ಪಂದಿಸಿದ್ದಾರೆ ಎಂದರು.

ಪರಿಷತ್ ಚುನಾವಣೆಗೆ  ಘಟನಾಯಕರು ನೇಮಕ ಮಾಡಿದ್ದು ಅವರು ಕ್ರೀಯಾಶೀಲರಾಗಿ ಕೆಲಸ ನಿರ್ವಹಿಸಿ ಮತದಾರರ ಮನ ಸೆಳೆದು ಮತಗಟ್ಟೆಗೆ ಕರೆತರಬೇಕು. ಶಿಕ್ಷಕರ, ಪದವೀಧರರ ಸಮಸ್ಯೆ ಹೋಗಲಾಡಿಸಲು ಬಿಜೆಪಿ ಸಿದ್ದ ಎಂದರು.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದ್ದು ದಿನಕ್ಕೊಂದು ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ  ಒಡೆದು ಆಳುವ ನೀತಿ ಅನುಸರಿಸುತ್ತಿದೆ.  ಕೇಂದ್ರ ಸರ್ಕಾರ ನೂತನ ಶಿಕ್ಷಣ  ನೀತಿ ಜಾರಿಗೆ ತರುವ ಮೂಲಕ  ನೈತಿಕ ಗುಣಮಟ್ಟದ ಶಿಕ್ಷಣ ನೀಡುವ ಮುಖ್ಯ ಉದ್ದೇಶವಾಗಿದೆ ಎಂದರು. ಪರಿಷತ್ ಚುನಾವಣೆಯಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ  ಮತ ನೀಡಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: ಜಮ್ಮು-ಕಾಶ್ಮೀರ: ಮತ್ತಿಬ್ಬರು ಉಗ್ರರ ಸಂಹಾರ; 2 ಮ್ಯಾಗ್ನೆಟಿಕ್‌ ಬಾಂಬ್‌ ಪತ್ತೆ

ಲೋಕಸಭಾ ಸದಸ್ಯೆ ಮಂಗಳಾ ಅಂಗಡಿ, ಶಾಸಕ ಮಹಾಂತೇಶ ದೊಡಗೌಡರ,  ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಬಿಜೆಪಿ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕೆಂದರು.

ವೇದಿಕೆ ಮೇಲೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ  ಕೇಶವ ಪ್ರಸಾದ್, ಪ್ರತಾಪಸಿಂಹ ನಾಯ್ಕ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮಂಡಲ ಅಧ್ಯಕ್ಷ ಮಡಿವಾಳಪ್ಪ ಚಳಕೊಪ್ಪ, ಪುರಸಭೆ ಸದಸ್ಯ ಗುರು ಮೆಟಗುಡ್ಡ, ಸಂದೀಪ ದೇಶಪಾಂಡೆ, ಸುಭಾಸ ಪಾಟೀಲ, ವಿಭಾಗೀಯ ಸಂಘಟಕ ಕಾರ್ಯದರ್ಶಿ ಎಂ.ಸಿ.ಜಯಪ್ರಕಾಶ, ಬಸವರಾಜ ಪರವನ್ನವರ ಮುಂತಾದವರು ಇದ್ದರು.  ‌

ದುಂಡೇಶ ಗರಗದ ನಿರೂಪಿಸಿ ವಂದಿಸಿದರು.  ಈ ಸಂದರ್ಭದಲ್ಲಿ ಪದವೀಧರರು, ಶಿಕ್ಷಕರು, ಬಿಜೆಪಿ ಕಾರ್ಯರ್ತರು  ಇದ್ದರು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.