ವಿಡಿಯೋ ತನಿಖೆಗೆ ಬಿಜೆಪಿ ತಂಡ ರಚನೆ?
Team Udayavani, Nov 7, 2019, 3:00 AM IST
ಬೆಂಗಳೂರು: ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೊಲ, ಕಲ್ಲೊಲ ಸೃಷ್ಟಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿಡಿಯೋ ಧ್ವನಿ ಎಲ್ಲಿಂದ ಮತ್ತು ಹೇಗೆ ಸೋರಿಕೆಯಾಗಿದೆ ಎಂಬುದರ ತನಿಖೆ ನಡೆಸಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಅನರ್ಹ ಶಾಸಕರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಡಿರುವ ಕೆಲವೊಂದು ಮಾತುಗಳು ವಿರೋಧಪಕ್ಷದವರಿಗೆ ರಾಜಕೀಯ ಅಸ್ತ್ರವಾಗಿದೆ. ಸುಪ್ರೀಂ ಕೋರ್ಟ್ಗೂ ಈ ವಿಡಿಯೋ ಧ್ವನಿ ಸುರುಳಿಯನ್ನು ಕಾಂಗ್ರೆಸ್ ಸಲ್ಲಿಕೆ ಮಾಡಿದೆ. ಈ ವಿಡಿಯೋ ಸೋರಿಕೆ ಹೇಗಾಗಿದೆ ಮತ್ತು ಇದರ ಮೂಲ ಎಲ್ಲಿದೆ ಎಂಬುದನ್ನು ತಿಳಿಯಲು ರಾಜ್ಯ ಬಿಜೆಪಿ ಒಂದು ಸಮಿತಿ ರಚನೆ ಮಾಡಿ, ಆ ಮೂಲಕ ತನಿಖೆ ನಡೆಸಲಿದೆ ಎಂದು ಹೇಳಲಾಗುತ್ತಿದೆ.
ಸಮಿತಿಯಲ್ಲಿ ಯಾರಿದ್ದಾರೆ ಮತ್ತು ತನಿಖೆ ಹೇಗೆ ನಡೆಯಲಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಬಿಜೆಪಿಯ ಆಂತರಿಕ ಸಭೆಯಲ್ಲಿ ಯಡಿಯೂರಪ್ಪ ಅವರು ಮಾತನಾಡಿರುವ ವಿಡಿಯೋ ಇದಾಗಿರುವುದರಿಂದ ತನಿಖೆಯನ್ನೂ ಕೂಡ ಅಷ್ಟೇ ಗೌಪ್ಯತೆ ಕಾಪಾಡಿಕೊಂಡು ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ