ರಾಜ್ಯಸಭೆಗೆ 3ನೇ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ಚಿಂತನೆ

Team Udayavani, May 28, 2022, 7:00 AM IST

bjpರಾಜ್ಯಸಭೆಗೆ 3ನೇ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ಚಿಂತನೆ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮುಗಿದ ಬೆನ್ನಲ್ಲೇ ಈಗ ರಾಜ್ಯಸಭೆ ಚುನಾವಣೆಯತ್ತ ಆಡಳಿತಾರೂಢ ಬಿಜೆಪಿ ಗಮನ ಹರಿಸಿದೆ. ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮತ ಒಡೆಯುವ ತಂತ್ರಗಾರಿಕೆಗೆ ಮುಂದಾಗಿದೆ.

ಮತ್ತೊಂದೆಡೆ ಜೆಡಿಎಸ್‌ ಅಭ್ಯರ್ಥಿ ಎಂದು ಬಿಂಬಿತರಾಗಿರುವ ಕುಪೇಂದ್ರ ರೆಡ್ಡಿ ತಟಸ್ಥ ಅಭ್ಯರ್ಥಿಯಾಗಿ ಸ್ಪರ್ಧಿಸಿ ದರೆ ಮಾತ್ರ ಬೆಂಬಲ ನೀಡಲು ಕಾಂಗ್ರೆಸ್‌ ಚಿಂತಿಸುತ್ತಿದೆ. ಒಂದೊಮ್ಮೆ ಜೆಡಿಎಸ್‌ ಅಭ್ಯರ್ಥಿ ಕಣಕ್ಕಿಳಿಸಿ ಬಿಜೆಪಿಯ 3ನೇ ಅಭ್ಯರ್ಥಿ ಸ್ಪರ್ಧಿಸಿದರೆ ಕಣ ರಂಗೇರಲಿದೆ.

ರಾಜ್ಯಸಭೆಗೆ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯ ವಿಧಾನ ಸಭೆಯಲ್ಲಿ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಇಬ್ಬರು ಹಾಗೂ ಕಾಂಗ್ರೆಸ್‌ನಿಂದ ಒಬ್ಬರನ್ನು ಆಯ್ಕೆ ಮಾಡಲು ಅವಕಾಶವಿದೆ. ನಾಲ್ಕನೇ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮೂರು ಪಕ್ಷಗಳಲ್ಲಿ ಸಂಖ್ಯಾಬಲದ ಕೊರತೆ ಇದೆ.

45 ಮತ ಅಗತ್ಯ
ಆಯ್ಕೆಯಾಗಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 45 ಮತಗಳು ಅಗತ್ಯವಿದೆ. ಆಡಳಿತ ಪಕ್ಷ ಬಿಜೆಪಿಯ ಬಳಿ 120 (ಸ್ಪೀಕರ್‌ ಸೇರಿ) ಸದಸ್ಯರಿದ್ದು, ಬಿಎಸ್‌ಪಿಯಿಂದ ಆಯ್ಕೆಯಾಗಿರುವ ಎನ್‌.ಮಹೇಶ್‌ ಹಾಗೂ ಪಕ್ಷೇತರರಾಗಿ ಆಯ್ಕೆಯಾಗಿರುವ ಎಚ್‌. ನಾಗೇಶ್‌ ಅವರೂ ಪಕ್ಷದ ಜತೆ ಗುರುತಿಸಿ ಕೊಂಡಿದ್ದರಿಂದ ಬಿಜೆಪಿಯಲ್ಲಿ ಇಬ್ಬರಿಗೆ 90 ಮತಗಳನ್ನು ಹಾಕಿದ ಬಳಿಕ 32 ಮತಗಳು ಉಳಿಯಲಿವೆ. 3ನೇ ಅಭ್ಯರ್ಥಿಯನ್ನು ಗೆಲ್ಲಿಸಲು ಬಿಜೆಪಿಗೆ 13 ಮತಗಳ ಕೊರತೆಯಾಗಲಿದ್ದು, ಅದನ್ನು ಜೆಡಿಎಸ್‌ ಶಾಸಕರಿಂದ ಪಡೆಯುವ ಲೆಕ್ಕಾಚಾರ ಬಿಜೆಪಿ ನಾಯಕರದ್ದಾಗಿದೆ.

ಜೆಡಿಎಸ್‌ ಜತೆಗೆ ಹೊಂದಾಣಿಕೆ ಮಾಡಿ ಕೊಳ್ಳುವ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಕುರಿತು ಆಲೋಚನೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆಯಾದರೂ, ಜೆಡಿಎಸ್‌ ಈಗಾಗಲೇ ಯಾರೊಂದಿಗೂ ಮೈತ್ರಿ ಇಲ್ಲ. ತನ್ನ ಅಭ್ಯರ್ಥಿ ಯನ್ನು ಕಣಕ್ಕಿಳಿಸಲಾಗುವುದು ಎಂದು ಘೋಷಿ ಸಿದೆ. ಆದರೆ, ಜೆಡಿಎಸ್‌ ಬಳಿ 32 ಮತಗಳಿದ್ದು, ಅವರಿಗೂ ಬಿಜೆಪಿ ಅಥವಾ ಕಾಂಗ್ರೆಸ್‌ ಬೆಂಬಲ ದೊರೆತರೆ ಮಾತ್ರ ಗೆಲ್ಲಲು ಸಾಧ್ಯವಿದೆ.ಕಾಂಗ್ರೆಸ್‌ ಒಬ್ಬರೇ ಅಭ್ಯರ್ಥಿ ಯನ್ನು ಕಣಕ್ಕಿಳಿ ಸಲು ನಿರ್ಧರಿಸಿರುವುದರಿಂದ ಅದರ 69 ಮತಗಳಲ್ಲಿ 24 ಮತಗಳು ಉಳಿಯುತ್ತವೆ.

ರಾಜ್ಯದವರಿಗೇ ನೀಡಲು ಮನವಿ
ರಾಜ್ಯಸಭೆಗೆ ರಾಜ್ಯದ ಮೂಲದವರಿಗೆ ಟಿಕೆಟ್‌ ನೀಡಬೇಕೆಂದು ರಾಜ್ಯ ಬಿಜೆಪಿ ನಾಯಕರು ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಟಿಕೆಟ್‌ ಬೇಡವೆಂದು ಪತ್ರ ಬರೆದ ಸುರಾನಾ
ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೂರು ದಿನ ಬಾಕಿ ಇರುವಾಗ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್‌ ಸುರಾನಾ ಅವರು ತಮಗೆ ರಾಜ್ಯಸಭೆ ಟಿಕೆಟ್‌ ಬೇಡ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಪಕ್ಷದಲ್ಲಿ ತಮಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ ಎನ್ನುವ ಕಾರಣಕ್ಕೆ ರಾಜ್ಯಸಭೆಯ ಟಿಕೆಟ್‌ ಬೇಡ ಎಂದು ಸುರಾನಾ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ

ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ

ಭಾರತದಲ್ಲಿ 24ಗಂಟೆಯಲ್ಲಿ 14,506 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣ ಹೆಚ್ಚಳ

ಭಾರತದಲ್ಲಿ 24ಗಂಟೆಯಲ್ಲಿ 14,506 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣ ಹೆಚ್ಚಳ

1-dsfdsfsd

ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

siddaramaiah

ಸರಕಾರ ಎಂಟು ವರ್ಷ ಪೂರೈಕೆ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಪುಸ್ತಕ

ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ

ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ

cm-bomm

ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsfdsfsd

ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

siddaramaiah

ಸರಕಾರ ಎಂಟು ವರ್ಷ ಪೂರೈಕೆ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಪುಸ್ತಕ

cm-bomm

ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?

1-dfgd

ಹಳೆ ಪ್ರಸ್ತಾಪಕ್ಕೆ ಹೊಸ ರೂಪ; ಯಕ್ಷ ರಂಗಾಯಣದಲ್ಲೇ ಕಚೇರಿಗೆ ಚಿಂತನೆ

ಶೀಘ್ರ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್‌ ಸ್ಥಾಪನೆ

ಶೀಘ್ರ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್‌ ಸ್ಥಾಪನೆ

MUST WATCH

udayavani youtube

ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್‌ ಕಮಿಷನರ್‌!

udayavani youtube

ತಂದೆ ಮೇಣದ ಪ್ರತಿಮೆ ಮುಂದೆ ಹಸೆಮಣೆಯೇರಿದ ಮಗಳು

udayavani youtube

ಸುಳ್ಯ – ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನತೆ

udayavani youtube

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ : ಸುಟ್ಟು ಕರಕಲಾಯ್ತು ಮನೆ

udayavani youtube

ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವ

ಹೊಸ ಸೇರ್ಪಡೆ

ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ

ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ

6

ಬಿಜೆಪಿ ಸೇದಿ ಎಸೆದ ಬೀಡಿ ಇದ್ದಂತೆ: ಇಬ್ರಾಹಿಂ

ಭಾರತದಲ್ಲಿ 24ಗಂಟೆಯಲ್ಲಿ 14,506 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣ ಹೆಚ್ಚಳ

ಭಾರತದಲ್ಲಿ 24ಗಂಟೆಯಲ್ಲಿ 14,506 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣ ಹೆಚ್ಚಳ

1-dsfdsfsd

ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.