ಬಿಜೆಪಿಯ ಸಂಕುಚಿತ ಮನೋಭಾವವೇ ದೇಶ ವಿಭಜನೆಗೆ ಕಾರಣ: ಕುಮಾರಸ್ವಾಮಿ


Team Udayavani, Aug 15, 2022, 3:13 PM IST

ಬಿಜೆಪಿಯ ಸಂಕುಚಿತ ಮನೋಭಾವವೇ ದೇಶ ವಿಭಜನೆಗೆ ಕಾರಣ: ಕುಮಾರಸ್ವಾಮಿ

ಬೆಂಗಳೂರು: ಇಂದು ದೇಶಪ್ರೇಮವನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿರುವ ಶಕ್ತಿಗಳೇ ಸ್ವಾತಂತ್ರ್ಯ ನಂತರ ದೇಶ ವಿಭಜನೆಗೆ ಕಾರಣವಾದವು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಹಾಗೆಯೇ, ಕಾಂಗ್ರೆಸ್ ವಿರುದ್ಧವೂ ಟೀಕಾ ಪ್ರಹಾರ ನಡೆಸಿದ ಅವರು; ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಾಂಗ್ರೆಸ್ ಪಕ್ಷವೇ ಬೇರೆ, ಆದರೆ, ಈಗಿನ ಕಾಂಗ್ರೆಸ್ ನಕಲಿ ಕಾಂಗ್ರೆಸ್ ಎಂದು ನೇರವಾಗಿ ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಜೆಡಿಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರುಮಾತನಾಡಿದರು.

ಒಂದು ಕಡೆ ನೆಹರೂ ಭಾವಚಿತ್ರ ಕಣ್ಮರೆ ಮಾಡುತ್ತಾರೆ. ಮತ್ತೊಂದು ಕಡೆ ಜವಹಾರಲಾಲ್ ನೆಹರೂ ರಾಷ್ಟ್ರ ವಿಭಜನೆ ಆಗಲು ಕಾರಣ ಅಂತ ನೆಪ ಹೇಳುತ್ತಾರೆ. ಅಂದು ಗಾಂಧೀಜಿ ಅವರನ್ನು ಕೊಲೆ ಮಾಡಿದವರೇ ದೇಶ ವಿಭಜನೆ ಆಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿಗಳು ದೂರಿದರು.

ಅಂದು ನಿಮ್ಮ (ಬಿಜೆಪಿಯ) ಸಂಕುಚಿತ ಮನೋಭಾವದಿಂದಲೇ ದೇಶ ವಿಭಜನೆ ಆಗಲು ಕಾರಣ. ಇಂದು ನೋಡಿದರೆ ನೆಹರು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

75 ವರ್ಷದ ಸವಿನೆನಪಿಗಾಗಿ ಬಿಜೆಪಿ ಹರ್‌ಘರ್ ತಿರಂಗ ಎಂಬ ಕಾರ್ಯಕ್ರಮ ಮಾಡಿದೆ. ಕಾಂಗ್ರೆಸ್ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿವೆ. ಅದರ ಎರಡೂ ರಾಷ್ಟ್ರೀಯ ಪಕ್ಷಗಳೂ ಜನರಿಗೆ ಮಂಕಬೂದಿ ಎರಚುತ್ತುವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಂದು ಸ್ವಾತಂತ್ರ್ಯಕ್ಕಾಗಿ ಹುಟ್ಟಿಕೊಂಡ ಕಾಂಗ್ರೆಸ್‌ ಬೇರೆ. ಇಂದು ಕಾಂಗ್ರೆಸ್ ಹೆಸರೇಳಿ ರಾಜಕೀಯ ಮಾಡುವವರು ನಕಲಿ ಕಾಂಗ್ರೆಸ್ಸಿಗರು. ಅಂದು ಹಲವಾರು ಮಂದಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯ ತಂದುಕೊಟ್ಟ ನಂತರದ ದಿನಗಳ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ನುಡಿದರು.

ಜವಾಹರಲಾಲ್ ನೆಹರು ಭಾವಚಿತ್ರ ವಿಚಾರದಲ್ಲಿ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿದೆ ಎಂಬುದನ್ನು ನೋಡಿದ್ದೇ‌ನೆ. ಅದಕ್ಕೆ ನಾವೆಲ್ಲರೂ ತಲೆ ತಗ್ಗಿಸುವ ಕೆಲಸವಾಗಿದೆ ಎಂಬುದು ನನ್ನ ಅಭಿಪ್ರಾಯ. ನೆಹರು ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ಹೇಗೆ ಭಾಗವಹಿಸಿತ್ತು. ಅವರ ಕೊಡುಗೆ ಏನೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಎಂದು ನೆಹರು ಭಾವಚಿತ್ರ ಹಾಕದಿದ್ದಕ್ಕೆ ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಾವರ್ಕರ್ ಭಾವಚಿತ್ರ ತೆಗೆದರೆಂದು ಮುಸ್ಲಿಂ ಯುವಕರನ್ನು ಬಂಧನ ಮಾಡಿದ್ದಾರೆ. ಅಲ್ಲಿ ಸಾವರ್ಕರ್ ಭಾವಚಿತ್ರ ತೆಗೆದರೆಂಬ ಕಾರಣಕ್ಕೆ ಇಲ್ಲಿ ಟಿಪ್ಪು ಫ್ಲೆಕ್ಸ್ ಹರಿದು ಹಾಕಿದ್ದಾರೆ.  ಇದು ಅಮೃತ ಮಹೋತ್ಸವ ಆಚರಿಸುವ ವಿಧಾನವೇ? ಎಂದು ಪ್ರಶ್ನಿಸಿದರು ಕುಮಾರಸ್ವಾಮಿ ಅವರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಣೆ ಮಾಡಬೇಕೆಂದು ಕರೆಕೊಟ್ಟಿವೆ. ಆದರೆ ಅವರೇ ಸಂಕುಚಿತ ಮನೋಭಾವದಲ್ಲಿ ಈ ಮಹಾನ್ ದಿನವನ್ನು ಆಚರಿಸುತ್ತಿದ್ದಾರೆ. ನಾಡಿನ ಅನೇಕ ಮಹನೀಯರ ಕೊಡುಗೆ ಸ್ಮರಿಸುವಲ್ಲಿ ಸಂಕುಚಿತ ಮನೋಭಾವ ತೋರಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರಧ್ವಜಗಳೊಂದಿಗೆ ಕಾಂಗ್ರೆಸ್ ಫ್ರೀಡಂ ಮಾರ್ಚ್ ಶುರು

ಊಟ, ವಸತಿ ಕೊಡದೇ ಹರ್ ಘರ್ ತಿರಂಗ ಮಾಡಿ ಪ್ರಯೋಜನ ಏನು? ಕೋವಿಡ್ ಅನಾಹುತ ಸಂದರ್ಭದಲ್ಲಿ ಏನೇನಾಯಿತು? ಮನೆ ಮನೆಯ ಮೇಲೆ ಬಾವುಟ ಹಾರಿಸಿ ಎಂದು ಕರೆ ಕೊಟ್ಟಿದ್ದೀರಾ. ಆದರೆ, ಎಷ್ಟೋ ಜನಕ್ಕೆ ವಾಸ ಮಾಡಲು ಮನೆ ಇಲ್ಲ. ಫ್ಲೈ ಓವರ್ ಗಳ ಕೆಳಗೆ, ದೊಡ್ಡ ದೊಡ್ಡ ಪೈಪುಗಳಲ್ಲಿ ಜನ ವಾಸ ಮಾಡುತ್ತಿದ್ದಾರೆ. ಬೃಹತ್ ಜಾಥಾಗಳನ್ನು ಮಾಡಿಕೊಂಡು ಹೊರಟ್ಟಿದ್ದಿರಿ, ನಿಮ್ಮ ಜಾಥಾಗಳಿಂದ ಜನರ ಹೊಟ್ಟೆ ತುಂಬಲ್ಲ. ಪ್ರಧಾನಿ ನರೇಂದ್ರ ಮೋದಿ ಒಂದು ಕಡೆ ಹೇಳುತ್ತಾರೆ. ಉಚಿತ ಸೌಲಭ್ಯಗಳನ್ನು ಕೊಡುವುದು ನಿಲ್ಲಿಸಬೇಕು. ಎಷ್ಟೋ ಕುಟುಂಬಗಳು ಎರಡು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ ಇದೆ. ಅಂತಹ ಕುಟುಂಬಗಳ ಗತಿ ಏನು? ಎಂದು ಬಿಜೆಪಿ ಸರ್ಕಾರಗಳನ್ನು ಹೆಚ್ ಡಿಕೆ ಪ್ರಶ್ನಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಈ ಸ್ವಾತಂತ್ರ್ಯ ದಿನ ಪ್ರತಿ ಕನ್ನಡಿಗರಿಗೆ, ಪ್ರತಿ ಭಾರತೀಯರಿಗೆ ಮಹತ್ವದ ದಿನ. ಹಲವಾರು ಕ್ಲಿಷ್ಟಕರವಾದ ದಿನಗಳನ್ನು ಇಷ್ಟು ದಿನಗಳಲ್ಲಿ ಕಂಡಿದ್ದೇವೆ. ಹಂತ ಹಂತವಾಗಿ ಪ್ರಗತಿಯನ್ನು ಕಾಣುತ್ತಿದ್ದೇವೆ. ಶಾಂತಿ ಹಾಗೂ ಸಹಬಾಳ್ವೆಯಿಂದ ಬಾಳುವಂತಹ ವಾತಾವರಣ ಸೃಷ್ಟಿ ಮಾಡಬೇಕಿದೆ. ಇಂದು ಕನ್ನಡಿಗರಿಗೆ ಅತ್ಯಂತ ಮಹತ್ವವಾದ ದಿನ. ದೇಶಕ್ಕೆ ಬೇಕಾಗಿರೋದು ಶಾಂತಿ ಸಹಬಾಳ್ವೆ. ಪ್ರತಿಯೊಬ್ಬರೂ ತಮ್ಮ ನಡವಳಿಕೆಯಿಂದ ಅಮೃತಮಹೋತ್ಸವ ಅರ್ಥಪೂರ್ಣವಾಗಿ ಆಚರಿಸಬೇಕಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-asdsadd

ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಟಿ.ಬಿ.ನಾಲೆ ಭೂ ಅಕ್ರಮಕ್ಕೆ ಸಂಬಂಧಿಸಿ ಸಚಿವ ರಾಮುಲು ರಾಜೀನಾಮೆ ನೀಡಬೇಕು: ಉಗ್ರಪ್ಪ ಆಗ್ರಹ

ಟಿ.ಬಿ.ನಾಲೆ ಭೂ ಅಕ್ರಮಕ್ಕೆ ಸಂಬಂಧಿಸಿ ಸಚಿವ ರಾಮುಲು ರಾಜೀನಾಮೆ ನೀಡಬೇಕು: ಉಗ್ರಪ್ಪ ಆಗ್ರಹ

ರಾಜ್ಯ ಬಿಜೆಪಿ ನಡೆ ಮತ್ತೊಮ್ಮೆ ಅಧಿಕಾರದ ಕಡೆ: ಯಡಿಯೂರಪ್ಪ

ರಾಜ್ಯ ಬಿಜೆಪಿ ನಡೆ ಮತ್ತೊಮ್ಮೆ ಅಧಿಕಾರದ ಕಡೆ: ಯಡಿಯೂರಪ್ಪ

Nalin-kumar

ಓಡಲು ದಾರಿ ಹುಡುಕುವ ಇಟೆಲಿಯ ಅಕ್ಕ: ನಳಿನ್‍ ಕಮಾರ್ ಕಟೀಲ್ ವ್ಯಂಗ್ಯ

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

1-asdsadd

ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್

ಕಣ್ಮನ ಸೆಳೆದ ಅರಕಲಗೂಡು ದಸರಾ ಉತ್ಸವ

ಕಣ್ಮನ ಸೆಳೆದ ಅರಕಲಗೂಡು ದಸರಾ ಉತ್ಸವ

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.