ಕುಳಲಿ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾರೀ ಸ್ಫೋಟ; ನಾಲ್ವರು ಛಿದ್ರ
Team Udayavani, Dec 16, 2018, 1:32 PM IST
ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ರುವ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದ್ದು ನಾಲ್ವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಘಟಕ ಛಿದ್ರಗೊಂಡಿದ್ದು, ಭೀಕರ ದೃಶ್ಯಗಳಿಗೆ ಸಾಕ್ಷಿಯಾಗಿದೆ.
ನಾಲ್ವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಎಲ್ಲರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಘಟಕ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಅವರ ಒಡೆತನಕ್ಕೆ ಸೇರಿದ್ದಾಗಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ಸ್ಫೋಟದ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.
ಮುಧೋಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ