ಬೆಳಗಾವಿ : ಭೀಕರ ಅಪಘಾತಕ್ಕೆ 6 ಮಂದಿ ದಾರುಣ ಸಾವು
Team Udayavani, Dec 4, 2018, 10:58 AM IST
ಬೆಳಗಾವಿ: ಗೋಕಾಕ್ನ ಹಿರೇನಂದಿ ಗ್ರಾಮದ ಬಳಿ ಮಂಗಳವಾರ ನಸುಕಿನ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೊಲೆರೋ ಮತ್ತು ಕಬ್ಬು ತುಬ್ಬಿದ ಟ್ರ್ಯಾಕ್ಟರ್ ನಡುವೆ ಈ ಅವಘಡ ಸಂಭವಿಸಿದ್ದು, ಬೊಲೆರೋದಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ.ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಅವಘಡ ನಡೆದಿದೆ.
ಮೃತರು ಸವದತ್ತಿ ತಾಲೂಕಿನ ಮಾಡಮಗೇರಿ ಗ್ರಾಮದವರಾಗಿದ್ದು, ಯಲ್ಲವ್ವ ಖಂಡ್ರೆ(60), ನೀಲವ್ವ(40), ಅನಸೂಯಾ ನಾಯ್ಕರ್(28), ಪಾರವ್ವ ಖಂಡ್ರೆ(30), ಬಿಮಸೆಪ್ಪ ಪೂಜಾರಿ(38) ಮತ್ತು ಮಹಾದೇವ(30) ಎಂದು ತಿಳಿದು ಬಂದಿದೆ.
ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ