ವಿಪಕ್ಷ ನಾಯಕನ ಸ್ಥಾನಕ್ಕೆ ಬಿಎಸ್‌ವೈ

Team Udayavani, May 23, 2018, 6:00 AM IST

48.jpg

ಬೆಂಗಳೂರು: ಸರಕಾರ ರಚಿಸುವಲ್ಲಿ ವಿಫ‌ಲರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ವಿಪಕ್ಷ ನಾಯಕ ಸ್ಥಾನದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದ್ದು, ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಡುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಶಿ, ನಳಿನ್‌ಕುಮಾರ್‌ ಕಟೀಲು, ಭಗವಂತ ಖೂಬಾ, ಅರವಿಂದ ಲಿಂಬಾವಳಿ ಹಾಗೂ ಸಿ.ಟಿ.ರವಿ ಹೆಸರು ಚರ್ಚೆಯಲ್ಲಿದೆ ಎಂದು ಹೇಳಲಾಗಿದೆ. 

ಶಾಸಕಾಂಗ ಪಕ್ಷ,  ಪಕ್ಷದ ನಡುವೆ ಸಮನ್ವಯತೆ ಸಾಧಿಸುವವರು ಪಕ್ಷದ ರಾಜ್ಯಾಧ್ಯಕ್ಷರಾದರೆ ಸೂಕ್ತವೆಂಬ ಅಭಿಪ್ರಾಯವಿದ್ದು, ಪ್ರಹ್ಲಾದ್‌ ಜೋಶಿ ಅಥವಾ ಲಿಂಬಾವಳಿ ಹೆಸರು ಮುಂಚೂಣಿಯಲ್ಲಿದೆ. ಎಚ್‌. ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ಬೇರೆ ಸಮುದಾಯಕ್ಕೆ ಬಿಟ್ಟುಕೊಟ್ಟರೆ, ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾದರೆ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಟಿ.ರವಿ ಅವರನ್ನು ನೇಮಕ ಮಾಡಬಹುದೆಂದು ಹೇಳಲಾಗಿದೆ. ಜತೆಗೆ ಶೋಭಾ ಕರಂದ್ಲಾಜೆ, ನಳಿನ್‌ಕುಮಾರ್‌ ಕಟೀಲು ಹೆಸರು ಸಹ ಪ್ರಸ್ತಾವನೆಯಲ್ಲಿದೆ.

ಇಂದು ಬಿಜೆಪಿ ಕರಾಳ ದಿನ
ರಾಜ್ಯದ ಜನರಿಂದ ತಿರಸ್ಕೃತಗೊಂಡ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡು ಸರಕಾರ ರಚಿಸಲು ಮುಂದಾಗಿವೆ ಎಂದು ಆರೋಪಿಸಿರುವ ಬಿಜೆಪಿ, ಎಚ್‌.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕರಿಸುವ ಬುಧವಾರ ರಾಜ್ಯಾದ್ಯಂತ ಜನಮತ ವಿರೋಧಿ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಅಪವಿತ್ರ ಮೈತ್ರಿ ಸರಕಾರ ರಚನೆ ವಿರುದ್ಧ ಬುಧವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಲಿದ್ದಾರೆ. ಬೆಂಗಳೂರಿನ ಮೌರ್ಯ ಹೊಟೇಲ್‌ ಎದುರಿನ ಗಾಂಧಿ ಪ್ರತಿಮೆ ಎದುರು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ. 

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.