ಬಿಎಸ್ವೈ ಅರ್ಜಿ ನಾಳೆ ವಿಚಾರಣೆ?
Team Udayavani, Aug 21, 2017, 8:27 AM IST
ಬೆಂಗಳೂರು: ಸರ್ಕಾರಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದು ಕೋರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಮಂಗಳವಾರ ಹೈಕೋರ್ಟ್ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ತಮ್ಮ ವಿರುದ್ಧ ಎಸಿಬಿಗೆ ದೂರು ಸಲ್ಲಿಸಿರುವ ವ್ಯಕ್ತಿಗೂ ಹಾಗೂ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲಾಗಿದೆ ಎನ್ನಲಾದ ಜಮೀನಿಗೂ ಸಂಬಂಧವಿಲ್ಲ. ಹೀಗಾಗಿ ರಾಜಕೀಯ ಪ್ರೇರಿತವಾಗಿ ವಿನಾಕಾರಣ ತಮ್ಮ ವಿರುದ್ಧ ಎಸಿಬಿಎಫ್ ಐಆರ್ ದಾಖಲಿಸಿಕೊಂಡಿದೆ ಎಂದು ಆಕ್ಷೇಪಿಸಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
2009ರಿಂದ 2012ರ ಅವಧಿಯಲ್ಲಿ ಯಲಹಂಕ ಹೋಬಳಿಯ ಆವಲಹಳ್ಳಿ ಗ್ರಾಮದ ಸರ್ವೇ ನಂಬರ್ 109/1 ರಲ್ಲಿ 3 ಎಕರೆ 6 ಗುಂಟೆ ಜಮೀನು ಡಿನೋಟಿಫಿಕೇಶ್ ಮಾಡಿದ ಸಂಬಂಧ ಅಂದಿನ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಡಿಎ ಹಾಗೂ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಎಸಿಬಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು