BJP ರಾಜಾ ಹುಲಿ ಮೋದಿಯವರ ಮುಂದೆ ಇಲಿ… : ಸಿಎಂ ಸಿದ್ದರಾಮಯ್ಯ ಆಕ್ರೋಶ

ಪ್ರಧಾನಿ ಮೋದಿ ವಿಪಕ್ಷ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ತೀವ್ರ ಅಸಮಾಧಾನ

Team Udayavani, Nov 3, 2023, 2:18 PM IST

siddanna

ಬೆಂಗಳೂರು: ”ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ” ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಶುಕ್ರವಾರ ಸರಣಿ ಪೋಸ್ಟ್ ಗಳನ್ನು ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

”ಯಡಿಯೂರಪ್ಪನವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ.” ಎಂದು ಪೋಸ್ಟ್ ಮಾಡಿದ್ದಾರೆ.

”ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ. ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಎಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ” ಎಂದು ಲೇವಡಿ ಮಾಡಿದ್ದಾರೆ.

”ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪ ಅವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ. ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ.ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾಣಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

”ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ. ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ.
ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.